Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:17 - ಕನ್ನಡ ಸಮಕಾಲಿಕ ಅನುವಾದ

17 ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು. ನಾನು ಅವರನ್ನು ಮರುಭೂಮಿಯಲ್ಲಿ ಅಂತ್ಯಗೊಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೂ ನಾನು ಅವರನ್ನು ನಾಶ ಮಾಡಲಿಲ್ಲ; ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಅರಣ್ಯದಲ್ಲಿ ನಿರ್ಮೂಲಮಾಡಲಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಆದರೂ ನಾನು ಅವರನ್ನು ನಾಶಮಾಡಲಿಲ್ಲ; ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಮರುಭೂಮಿಯಲ್ಲಿ ನಿರ್ಮೂಲಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೂ ನಾನು ಅವರನ್ನು ನಾಶಮಾಡದ ಹಾಗೆ ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಅರಣ್ಯದಲ್ಲಿ ನಿರ್ಮೂಲಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ನಾನು ಅವರಿಗಾಗಿ ದುಃಖಗೊಂಡೆನು. ಆದ್ದರಿಂದ ಅವರನ್ನು ನಾನು ನಾಶಮಾಡಲಿಲ್ಲ. ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:17
11 ತಿಳಿವುಗಳ ಹೋಲಿಕೆ  

ನಾನು ಪ್ರವಾದಿಸುತ್ತಿರುವಾಗ, ಬೆನಾಯನ ಮಗನಾದ ಪೆಲಟೀಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು, ಗಟ್ಟಿಯಾಗಿ ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನೀವು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀರೋ?” ಎಂದು ಹೇಳಿದನು.


“ಆದರೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ಅಳಿಸಿಬಿಡುವುದಿಲ್ಲ,” ಎಂದು ಯೆಹೋವ ದೇವರು ಅನ್ನುತ್ತಾರೆ.


ಏಕೆಂದರೆ ಯೆಹೋವ ದೇವರು ಹೀಗೆ ಹೇಳಿದ್ದಾರೆ: “ದೇಶವೆಲ್ಲಾ ಹಾಳಾಗುವುದು. ಆದರೂ ನಾನು ಅದನ್ನು ಪೂರ್ಣ ನಾಶ ಮಾಡಿಲ್ಲ.


ನಾವಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ಆದ್ದರಿಂದ ನಾನು ಸಹ ರೋಷದಿಂದಲೇ ಇರುವೆನು. ನಾನು ಅವರನ್ನು ಕನಿಕರಿಸುವುದೂ ಇಲ್ಲ, ನಾನು ಅವರನ್ನು ಉಳಿಸುವುದೂ ಇಲ್ಲ. ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರುಚಿದರೂ, ನಾನು ಅವರನ್ನು ಕೇಳಿಸಿಕೊಳ್ಳುವುದೂ ಇಲ್ಲ,” ಎಂದನು.


“ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಇಸ್ರಾಯೇಲ್ ದೇಶಕ್ಕೆ ಹೀಗೆ ಹೇಳುತ್ತಾರೆ: “ ‘ಅಂತ್ಯವು ಬಂದಿದೆ! ಈ ದೇಶದ ನಾಲ್ಕು ಮೂಲೆಗಳಲ್ಲಿಯೂ ಅಂತ್ಯವು ಬಂದಿದೆ!


“ಆದರೆ ನೀವು ನಿಮ್ಮ ಬಹು ಕರುಣೆಯಿಂದ ಮರುಭೂಮಿಯಲ್ಲಿ ಅವರನ್ನು ಕೈಬಿಡಲಿಲ್ಲ. ಹಗಲಿನಲ್ಲಿ ಅವರಿಗೆ ಮೇಘಸ್ತಂಭವು ದಾರಿ ತೋರಿಸದೆ ಇರಲಿಲ್ಲ. ರಾತ್ರಿಯಲ್ಲಿ ಅವರಿಗೆ ಬೆಳಕನ್ನೂ, ಅವರು ನಡೆಯತಕ್ಕ ಮಾರ್ಗವನ್ನೂ ತೋರಿಸುವ ಅಗ್ನಿ ಸ್ತಂಭವು ಅವರನ್ನು ಬಿಟ್ಟುಹೋಗಲಿಲ್ಲ.


ಯೆಹೋವ ದೇವರು ಈ ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರೆಂಬುದನ್ನು ಈ ದಿನ ನಿನ್ನ ಕಣ್ಣುಗಳು ಕಂಡವು. ಕೆಲವರು ನಿನ್ನನ್ನು ಕೊಂದುಹಾಕಲು ನನಗೆ ಒತ್ತಾಯಮಾಡಿದರು. ಆದರೆ ನಾನು ಅವರಿಗೆ, ‘ಅರಸನು ಯೆಹೋವ ದೇವರ ಅಭಿಷಿಕ್ತನು. ಆದುದರಿಂದ ನಾನು ನನ್ನ ಒಡೆಯನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆ.


ಆದರೂ ನಾನು ನನ್ನ ಕೈಯನ್ನು ಹಿಂತೆಗೆದು, ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಹೊರಗೆ ಬರಮಾಡಿದೆನೋ, ಆ ಜನಾಂಗಗಳ ದೃಷ್ಟಿಯಲ್ಲಿ ನನ್ನ ಹೆಸರು ಅಪವಿತ್ರವಾಗದ ಹಾಗೆ, ನನ್ನ ಹೆಸರಿಗೋಸ್ಕರವೇ ಕೆಲಸ ಮಾಡಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು