Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:18 - ಕನ್ನಡ ಸಮಕಾಲಿಕ ಅನುವಾದ

18 ಮರುಭೂಮಿಯಲ್ಲಿ ನಾನು ಅವರ ಮಕ್ಕಳಿಗೆ ಹೇಳಿದ್ದೇನೆಂದರೆ, “ನೀವು ನಿಮ್ಮ ತಂದೆಗಳ ನಿಯಮಗಳನ್ನು ಅನುಸರಿಸಬೇಡಿರಿ, ಅವರ ನ್ಯಾಯಗಳನ್ನು ಕೈಕೊಳ್ಳಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಮಾಡಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ, “ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ, ಅವರ ವಿಧಿಗಳನ್ನು ಕೈಕೊಳ್ಳದೆ, ಅವರ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳದೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಮೇಲೆ ನಾನು ಅವರ ಸಂತಾನದವರಿಗೆ - ‘ನೀವು ನಿಮ್ಮ ಪಿತೃಗಳ ಕಟ್ಟಳೆಗಳನ್ನು ಅನುಸರಿಸದೆ ಅವರ ವಿಧಿಗಳನ್ನು ಕೈಗೊಳ್ಳದೆ ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ - ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ ಅವರ ವಿಧಿಗಳನ್ನು ಕೈಕೊಳ್ಳದೆ ಅವರ ಬೊಂಬೆಗಳಿಂದ ನಿಮ್ಮನ್ನು ಹೊಲಸುಮಾಡಿಕೊಳ್ಳದೆ ಇರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರ ಮಕ್ಕಳಿಗೆ ನಾನು ಬುದ್ಧಿಹೇಳುತ್ತಾ, “ನಿಮ್ಮ ಪೂರ್ವಿಕರಂತೆ ನೀವಾಗಬೇಡಿರಿ. ಅವರ ಅಸಹ್ಯವಾದ ವಿಗ್ರಹಗಳಿಂದ ನಿಮ್ಮನ್ನು ನೀವು ಅಶುದ್ಧಮಾಡಿಕೊಳ್ಳಬೇಡಿರಿ. ಅವರ ಕಟ್ಟಳೆಗಳನ್ನು ಅನುಸರಿಸಬೇಡಿರಿ. ಅವರ ಆಜ್ಞೆಗಳಿಗೆ ವಿಧೇಯರಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:18
19 ತಿಳಿವುಗಳ ಹೋಲಿಕೆ  

ನಿಮ್ಮ ಪೂರ್ವಿಕರಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿ, ಬಂಗಾರದಿಂದಲ್ಲ.


ಆಮೇಲೆ ನಾನು ಅವರಿಗೆ, “ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳ ಮುಂದೆ ಅಸಹ್ಯವಾದವುಗಳನ್ನು ಬಿಸಾಡಿ ಬಿಡಿರಿ. ಈಜಿಪ್ಟಿನ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನಾಗಿರುವೆನು.”


“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!


ಆದದ್ದೇನೆಂದರೆ, ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ, ಕಲ್ಲುಗಳ ಮತ್ತು ಮರಗಳ ಸಂಗಡ ವ್ಯಭಿಚಾರ ಮಾಡಿದಳು.


ನಾನು ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಸಾರವನ್ನೂ, ಮೇಲನ್ನೂ ತಿನ್ನುವ ಹಾಗೆ ಕರೆದುಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸೊತ್ತನ್ನು ಅಸಹ್ಯ ಮಾಡಿದಿರಿ.


ಆದರೆ ಸೆರೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು, ನೀವು ಅಲಕ್ಷ್ಯಮಾಡಿದ ದೇಶವನ್ನು ಅವರು ಅನುಭವಿಸುವರು.


ಹೀಗೆ ತಮ್ಮ ದುಷ್ಕೃತ್ಯಗಳಿಂದ ತಮ್ಮನ್ನು ಅಪವಿತ್ರ ಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ದುರಾಚಾರಿಗಳಾದರು.


ನನ್ನ ಮಾತುಗಳನ್ನು ಕೇಳಲೊಲ್ಲದ ತಮ್ಮ ಪಿತೃಗಳ ಅಕ್ರಮಗಳಿಗೆ ತಿರುಗಿಕೊಂಡಿದ್ದಾರೆ. ಬೇರೆ ದೇವರುಗಳನ್ನು ಸೇವಿಸುವುದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ. ಇಸ್ರಾಯೇಲಿನ ವಂಶದವರೂ ಯೆಹೂದದ ವಂಶದವರೂ ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಗಳನ್ನು ಮೀರಿದ್ದಾರೆ.


ಅವರು, “ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿ ಬಿದ್ದಿರುವ ಮತ್ತು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ. ಅವರೂ, ಅವರ ಪಿತೃಗಳೂ ಇಂದಿನವರೆಗೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ.


“ಆದರೂ ಇನ್ನೂ ನೀವು ಹೇಳುವುದೇನು? ‘ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲವೇ?’ ಎಂದು ಹೇಳುವಿರಿ. ಮಗನು ನ್ಯಾಯವನ್ನೂ, ನೀತಿಯನ್ನೂ ಮಾಡಿ, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದದವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಯೆಹೋವ ದೇವರ ನಿಯಮವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳು ದೇವರುಗಳೇ, ಇವರನ್ನು ದಾರಿ ತಪ್ಪುವವರನ್ನಾಗಿ ಮಾಡಿವೆ.


ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ.


“ಒಂದು ವೇಳೆ ಇವನು ಪಡೆದ ಮಗನು ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ಕಂಡು ಆಲೋಚಿಸಿ, ಇಂಥಾ ಕಾರ್ಯಗಳನ್ನು ನಡೆಸದೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು