21 “ ‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು.
21 “ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು.
21 “ಆದರೆ ಆ ಸಂತಾನದವರು ನನ್ನನ್ನು ಪ್ರತಿಭಟಿಸಿದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆದುದರಿಂದ ನಾನು ‘ಮರುಭೂಮಿಯಲ್ಲೇ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಎಂದುಕೊಂಡೆ.
21 ಆ ಸಂತಾನದವರಾದರೋ ನನ್ನ ಮೇಲೆ ತಿರುಗಿಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಕೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಕೈಕೊಂಡು ನಡಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದರು; ಆದದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.
21 “‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು.
“ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು.
“ ‘ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ಕಣ್ಣಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ. ಅವರು ಈಜಿಪ್ಟಿನ ವಿಗ್ರಹಗಳನ್ನು ಬಿಡಲಿಲ್ಲ. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಈಜಿಪ್ಟ್ ದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.
ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು.
ಏಕೆಂದರೆ ನಿಮ್ಮ ದ್ರೋಹವನ್ನೂ, ನಿಮ್ಮ ಹಟಮಾರಿತನವನ್ನೂ ನಾನು ಬಲ್ಲೆನು. ಈ ಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರುವಾಗಲೇ ಯೆಹೋವ ದೇವರಿಗೆ ದ್ರೋಹ ಮಾಡಿದವರಾದಿರಿ. ನಾನು ಸತ್ತಮೇಲೆ ಇನ್ನೇನಾಗುವುದು?
ಆಗ ದೇವಾಲಯದಿಂದ ಬಂದ ಗಟ್ಟಿಯಾದ ಧ್ವನಿಯು, ಏಳು ದೇವದೂತರಿಗೂ, “ಹೋಗಿರಿ, ಏಳು ಬೋಗುಣಿಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿರಿ!” ಎಂದು ಹೇಳುವುದನ್ನು ನಾನು ಕೇಳಿದೆನು.
ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.
ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು. ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು. ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು.
ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಯುವುದು, ಅದು ಆರಿಹೋಗುವುದಿಲ್ಲ.’
“ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಇಸ್ರಾಯೇಲ್ ಮತ್ತು ಯೆಹೂದದಲ್ಲಿ ಉಳಿದವರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ನಮ್ಮ ಮೇಲೆ ಸುರಿದ ಯೆಹೋವ ದೇವರ ಕೋಪವು ದೊಡ್ಡದಾಗಿದೆ,” ಎಂದು ಹೇಳಿದನು.
“ನೀನು ಒಳ್ಳೆಯದನ್ನು ಕುರಿತು ನನ್ನನ್ನು ಕೇಳುವುದೇಕೆ? ಒಬ್ಬಾತನೇ ಒಳ್ಳೆಯವನು. ಆದರೆ ನೀನು ಜೀವದಲ್ಲಿ ಪ್ರವೇಶಿಸಬೇಕಾದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆದುಕೋ,” ಎಂದು ಯೇಸು ಉತ್ತರಕೊಟ್ಟರು.
ಅದೇ ರೀತಿ ನಾನು ನಿಮ್ಮ ಪಿತೃಗಳ ಸಂಗಡ ಈಜಿಪ್ಟ್ ದೇಶದ ಮರುಭೂಮಿಯಲ್ಲಿ ನ್ಯಾಯತೀರ್ಪು ಮಾಡಿದೆನು. ಈಗಲೂ ನಿಮ್ಮ ಸಂಗಡ ನ್ಯಾಯತೀರ್ಪು ಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ.