Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:23 - ಕನ್ನಡ ಸಮಕಾಲಿಕ ಅನುವಾದ

23 ನಾನು ಅವರನ್ನು ಇತರ ಜನಾಂಗಗಳಲ್ಲಿ ಚದರಿಸುತ್ತೇನೆಂದೂ, ದೇಶಗಳಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಅವರ ಮೇಲೆ ಕೈಯೆತ್ತಿ ಪ್ರಮಾಣಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶದಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಪ್ರಮಾಣ ಮಾಡಿ ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಮೇಲೆ ಅವರು ನನ್ನ ಆಜ್ಞೆಗಳನ್ನು ಕೈಗೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿ ತಮ್ಮ ಪಿತೃಗಳ ವಿಗ್ರಹಗಳಲ್ಲೇ ಆಸಕ್ತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಮೇಲೆ ಅವರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇವಿುಸಿದ ಸಬ್ಬತ್‍ದಿನಗಳನ್ನು ಹೊಲೆಮಾಡಿ ತಮ್ಮ ಪಿತೃಗಳ ಬೊಂಬೆಗಳ ಮೇಲೆ ಕಣ್ಣುಹಾಕಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ನಾನು ಅಡವಿಯಲ್ಲಿ ಅವರೊಂದಿಗೆ ಇನ್ನೊಂದು ಮಾತುಕೊಟ್ಟೆನು. ನಾನು ಅವರನ್ನು ನಾನಾ ದೇಶಗಳಿಗೆ ಚದರಿಸಿಬಿಡುವೆನೆಂದು ಅವರಿಗೆ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:23
13 ತಿಳಿವುಗಳ ಹೋಲಿಕೆ  

ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.


ಆದರೂ ಹಾಲೂ ಜೇನೂ ಹರಿಯುವಂಥ ದೇಶಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಮರುಭೂಮಿಯಲ್ಲಿ ಅವರಿಗೆ ನನ್ನ ಕೈಯೆತ್ತಿ ಪ್ರಮಾಣಮಾಡಿದೆನು.


ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯು ಯೆರೂಸಲೇಮಿನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಂತೆ ಮಾಡುವೆನು.


ತಮ್ಮ ಕೈಯನ್ನು ಎತ್ತಿ ಅವರಿಗೆ ಪ್ರಮಾಣ ಮಾಡಬೇಕಾಯಿತು.


ಆಕಾಶದ ಕಡೆ ನನ್ನ ಕೈಯೆತ್ತಿ, ನಾನು ನಿತ್ಯವಾಗಿ ಬದುಕುವಾತನು ಎಂದು ಹೇಳುತ್ತೇನೆ.


ಆಗ ಯೆಹೋವ ದೇವರು ನಿಮ್ಮನ್ನು ದೇಶಗಳಲ್ಲಿ ಚದರಿಸಿಬಿಡುವರು. ಯೆಹೋವ ದೇವರು ನಿಮ್ಮನ್ನು ಅಟ್ಟಿದ ದೇಶಗಳ ಮಧ್ಯದಲ್ಲಿ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ.


ಕಡಿಯತಕ್ಕ ಕುರಿಗಳಂತೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀರಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀರಿ.


ನಿನ್ನನ್ನು ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು. ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.


ಆದರೆ ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾಯೇಲಿನ ಮನೆತನದವರಿಗೆ ಪಾಪದ ಆತಂಕವಾದದ್ದರಿಂದ, ನಾನು ಅವರಿಗೆ ವಿರುದ್ಧವಾಗಿ ನನ್ನ ಕೈಯನ್ನು ಚಾಚಿದ್ದೇನೆ. ಅವರು ತಮ್ಮ ಪಾಪವನ್ನು ಹೊರುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ಆದ್ದರಿಂದ ನಾನು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರನ್ನು ಇತರ ಜನಾಂಗಗಳಿಂದ ದೂರ ಹಾಕಿದರೂ, ದೇಶಗಳಲ್ಲಿ ಚದರಿಸಿದರೂ, ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದವರೆಗೆ ಪರಿಶುದ್ಧ ಸ್ಥಳವಾಗಿರುವೆನು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು