ಯೆಹೆಜ್ಕೇಲನು 20:24 - ಕನ್ನಡ ಸಮಕಾಲಿಕ ಅನುವಾದ24 ಏಕೆಂದರೆ ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ, ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದರು. ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಏಕೆಂದರೆ ನನ್ನ ಜನರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿ, ತಮ್ಮ ಪೂರ್ವಿಕರ ವಿಗ್ರಹಗಳ ಮೇಲೆ ಕಣ್ಣುಹಾಕಿದ್ದರಿಂದ, ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ದೇಶ ದೇಶಗಳಿಗೆ ಚೆಲ್ಲಾಪಿಲ್ಲಿಯಾಗಿಸುವೆನು.” ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆದ್ದರಿಂದ ನಾನು ‘ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು’ ಎಂದು ಮರುಭೂಮಿಯಲ್ಲಿ ಪ್ರಮಾಣಮಾಡಿ ಹೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “‘ಇಸ್ರೇಲ್ ಜನರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲು ನಿರಾಕರಿಸಿದರು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ಅಲಕ್ಷ್ಯಮಾಡಿದರು. ಮತ್ತು ಅವರ ಪೂರ್ವಿಕರ ಹೊಲಸು ವಿಗ್ರಹಗಳನ್ನು ಪೂಜಿಸಿದರು. ಅಧ್ಯಾಯವನ್ನು ನೋಡಿ |
ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.
“ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು.