Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:28 - ಕನ್ನಡ ಸಮಕಾಲಿಕ ಅನುವಾದ

28 ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಮರಗಳನ್ನೂ ನೋಡಿ, ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಸುವಾಸನೆಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಿದ ಮೇಲೆ, ಅವರು ಎತ್ತರವಾದ ಎಲ್ಲ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲ ಮರಗಳನ್ನೂ ನೋಡಿ, ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಒಪ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ ನನ್ನನ್ನು ರೇಗಿಸುವ ನೈವೇದ್ಯವನ್ನವರ್ಪಿಸಿ ಸುಗಂಧಹೋಮಮಾಡಿ ಪಾನದ್ರವ್ಯವನ್ನು ಸುರಿದು ಒಪ್ಪಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಾನು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಬಂದೆನು. ಆದರೆ ಎತ್ತರವಾದ ಬೆಟ್ಟವನ್ನಾಗಲಿ ಎಲೆಗಳುಳ್ಳ ಮರವನ್ನಾಗಲಿ ಅವರು ಕಂಡಾಗಲೆಲ್ಲಾ ಅವರು ಅಲ್ಲಿಗೆ ಹೋದರು ಮತ್ತು ವಿಗ್ರಹಗಳನ್ನು ಪೂಜಿಸಿದರು. ಅಲ್ಲಿ ಅವರು ಯಜ್ಞಗಳನ್ನೂ ನನ್ನನ್ನು ಕೋಪಗೊಳಿಸುವ ಕಾಣಿಕೆಗಳನ್ನೂ ಧೂಪವನ್ನೂ ಮತ್ತು ಪಾನದ್ರವ್ಯಾರ್ಪಣೆಗಳನ್ನೂ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:28
24 ತಿಳಿವುಗಳ ಹೋಲಿಕೆ  

ಆಮೇಲೆ ಅವರಲ್ಲಿ ಹತರಾದವರು, ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಬಲಿಪೀಠಗಳ ಸುತ್ತಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ, ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸಿರಾದ ಮರದ ಕೆಳಗೂ, ಪ್ರತಿಯೊಂದು ದಪ್ಪವಾದ ಏಲಾ ಮರದ ಕೆಳಗಡೆಯೂ, ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವುದರಲ್ಲಿಯೂ ನಾನೇ ಯೆಹೋವ ದೇವರೆಂದು ತಿಳಿಯುವಿರಿ.


ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ.


ನಾನು ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಸಾರವನ್ನೂ, ಮೇಲನ್ನೂ ತಿನ್ನುವ ಹಾಗೆ ಕರೆದುಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸೊತ್ತನ್ನು ಅಸಹ್ಯ ಮಾಡಿದಿರಿ.


“ಭೂನಿವಾಸಿಗಳೆಲ್ಲರು ಹೋಗುವ ಮಾರ್ಗವಾಗಿ ಇಂದು ನಾನು ಹೋಗಬೇಕಾಗಿದೆ. ನಿಮ್ಮ ದೇವರಾದ ಯೆಹೋವ ದೇವರು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೆಯ ವಾಗ್ದಾನಗಳಲ್ಲಿ ಒಂದೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ. ಅವುಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.


ಆದರೂ ಹಾಲೂ ಜೇನೂ ಹರಿಯುವಂಥ ದೇಶಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಮರುಭೂಮಿಯಲ್ಲಿ ಅವರಿಗೆ ನನ್ನ ಕೈಯೆತ್ತಿ ಪ್ರಮಾಣಮಾಡಿದೆನು.


ನಾನು ಅವರಿಗೆ ಪ್ರಮಾಣಮಾಡಿ ಈಜಿಪ್ಟ್ ದೇಶದಿಂದ ಹೊರಗೆ ತಂದು, ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ದೇಶಕ್ಕೆ ಅವರನ್ನು ಆ ದಿವಸದಲ್ಲಿ ಕರೆತಂದೆನು.


ನಾನು ನಿಮಗೆ ಒದಗಿಸಿದ ಆಹಾರ, ಹಿಟ್ಟು, ಎಣ್ಣೆ ಮತ್ತು ಜೇನುತುಪ್ಪವನ್ನು ನಾನು ನಿಮಗೆ ತಿನ್ನಲು ಕೊಟ್ಟಿದ್ದೇನೆ. ನೀವು ಅವರ ಮುಂದೆ ಪರಿಮಳಯುಕ್ತ ಧೂಪವನ್ನು ಅರ್ಪಿಸಿದ್ದೀರಿ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಅವರು ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ, ಉನ್ನತ ಸ್ಥಳಗಳನ್ನೂ ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ, ಹಸುರಾದ ಪ್ರತಿ ಗಿಡದ ಕೆಳಗೂ ತಮಗಾಗಿ ಮಾಡಿಕೊಂಡರು.


ನಿಮ್ಮ ಪಾಪಗಳಿಗೂ, ನಿಮ್ಮ ತಂದೆಗಳ ಪಾಪಗಳಿಗೂ ಕೂಡ ಪ್ರತಿಫಲ ಕೊಡುತ್ತೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು, ಗುಡ್ಡಗಳ ಮೇಲೆ ನನ್ನನ್ನು ಪರಿಹಾಸ್ಯ ಮಾಡಿದರಲ್ಲಾ. ಹೀಗಿರುವುದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಮಡಿಲಲ್ಲಿ ಅಳೆದು ಸುರಿಸುವೆನು.”


ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪ ಸುಟ್ಟು, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ, ಆ ಎಲ್ಲಾ ಮನೆಗಳ ನಿಮಿತ್ತವಾಗಿ ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವುವು, ಎಂಬುದೇ.’ ”


ನೀವು ನಿಮಗಾಗಿ ಒಂದು ದಿಬ್ಬವನ್ನು ನಿರ್ಮಿಸಿದ್ದೀರಿ ಮತ್ತು ಪ್ರತಿ ಸಾರ್ವಜನಿಕ ಚೌಕದಲ್ಲಿ ಎತ್ತರದ ದೇವಾಲಯವನ್ನು ನಿರ್ಮಿಸಿದ್ದೀರಿ.


ಆಗ ನಾನು ಅವರಿಗೆ ಹೇಳಿದ್ದೇನೆಂದರೆ: ನೀವು ಹೋಗುವ ಈ ಎತ್ತರವಾದ ಸ್ಥಳವು ಏನು? ಅದಕ್ಕೆ ಈ ದಿನದವರೆಗೂ ಬಾಮಾ ಎಂದು ಕರೆಯುವರು.’ ”


ಇಸ್ರಾಯೇಲರು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಯೆಹೋವ ದೇವರಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.


ಇಸ್ರಾಯೇಲರು ರಹಸ್ಯವಾಗಿ ತಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಯುಕ್ತವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲುಗೊಂಡು ಕೋಟೆಯುಳ್ಳ ಪಟ್ಟಣಗಳವರೆಗೂ, ತಮ್ಮ ಸಮಸ್ತ ಪಟ್ಟಣಗಳಲ್ಲಿ ತಮಗೆ ಪೂಜಾಸ್ಥಳಗಳನ್ನು ಕಟ್ಟಿಸಿಕೊಂಡಿದ್ದರು.


ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ, ಹಸಿರಾದ ಎಲ್ಲಾ ಮರಗಳ ಕೆಳಗೂ ತಮಗೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದ್ದರು.


“ನೀವು ಈ ಕಾರ್ಯವನ್ನು ಮಾಡಬೇಡಿರಿ,” ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರೂ, ಅವರು ಮೂರ್ತಿಗಳಿಗೆ ಪೂಜೆ ಮಾಡಿದರು.


“ಏಕೆಂದರೆ ಇಸ್ರಾಯೇಲರೂ, ಯೆಹೂದದ ಮಕ್ಕಳೂ ತಮ್ಮ ಚಿಕ್ಕಂದಿನಿಂದ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾತ್ರ ಮಾಡಿದ್ದಾರೆ. ಇಸ್ರಾಯೇಲರೂ ತಮ್ಮ ಕೈಕೆಲಸಗಳಿಂದ ನನಗೆ ಕೋಪೋದ್ರೇಕವನ್ನೂ ಎಬ್ಬಿಸಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು