Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:32 - ಕನ್ನಡ ಸಮಕಾಲಿಕ ಅನುವಾದ

32 “ ‘ “ನಾವು ಇತರ ಜನಾಂಗಗಳ ಹಾಗೆ ಮತ್ತು ಇತರ ದೇಶಗಳವರ ಹಾಗೆ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ನೆರವೇರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಖಂಡಿತ ನೆರವೇರುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ‘ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರ, ಕಲ್ಲುಗಳ ವಿಗ್ರಹಗಳನ್ನು ಪೂಜಿಸುವೆವು’ ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆ ಎಷ್ಟು ಮಾತ್ರವೂ ನೆರವೇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟುಮಾತ್ರವೂ ಸಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಾವು ಮರದ ಮತ್ತು ಕಲ್ಲಿನ ವಸ್ತುಗಳನ್ನು ಪೂಜಿಸುತ್ತಾ ಇತರ ಜನಾಂಗಗಳಂತೆ ಇರೋಣ ಎಂದು ನೀವು ಯೋಚಿಸುತ್ತಲೇ ಇರುತ್ತೀರಿ. ನಿಮ್ಮ ಮನಸ್ಸುಗಳಲ್ಲಿರುವ ಈ ಆಲೋಚನೆಯು ಎಂದಿಗೂ ನೆರವೇರುವುದಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:32
19 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಆತ್ಮವು ನನ್ನ ಮೇಲೆ ಬಂದು ತಿಳಿಸಲು ಹೇಳಿದ್ದೇನೆಂದರೆ: “ಇಸ್ರಾಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಏಕೆಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನು ನಾನು ಬಲ್ಲೆನು.


ಆದರೆ ಸ್ವಂತ ಬಾಯಿಂದ ಹೊರಡುವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ. ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನಾರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ. ನಾವೂ, ನಮ್ಮ ತಂದೆಗಳೂ, ನಮ್ಮ ಅರಸರೂ, ನಮ್ಮ ಪ್ರಧಾನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ಮಾಡುವೆವು. ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.


ಈ ಉಪದ್ರವಗಳಿಂದ ಸಾಯದೆ ಉಳಿದ ಮನುಷ್ಯರು ಇನ್ನೂ ತಮ್ಮ ದುಷ್ಟಕೃತ್ಯಗಳನ್ನು ಬಿಟ್ಟು ಪಶ್ಚಾತ್ತಾಪ ಪಡಲಿಲ್ಲ. ಅವರು ದೆವ್ವಗಳನ್ನೂ, ನೋಡಲು, ಕೇಳಲು, ನಡೆಯಲು ಆಗದ ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳ ವಿಗ್ರಹಗಳನ್ನು ಆರಾಧಿಸುವುದನ್ನೂ ನಿಲ್ಲಿಸಲಿಲ್ಲ.


ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದರು.


ನಾನು ಕುಳಿತಿರುವುದನ್ನೂ, ಏಳುವುದನ್ನೂ ನೀವು ತಿಳಿದುಕೊಂಡಿದ್ದೀರಿ; ನನ್ನ ಆಲೋಚನೆಗಳನ್ನು ದೂರದಿಂದ ಗ್ರಹಿಸಿಕೊಂಡಿದ್ದೀರಿ.


ಅಲ್ಲಿ ನೀವು ಮನುಷ್ಯರ ಕೈಯಿಂದ ಮಾಡಿದ ಎಂದರೆ, ನೋಡದೆಯೂ, ಕೇಳದೆಯೂ, ಉಣ್ಣದೆಯೂ, ಮೂಸಿ ನೋಡದೆಯೂ ಇರುವಂಥ ಮರ ಮತ್ತು ಕಲ್ಲುಗಳಿಂದ ಮಾಡಿದ ದೇವರುಗಳನ್ನು ಸೇವಿಸುವಿರಿ.


ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಆ ದಿನದಲ್ಲಿ ನಿನ್ನ ಮನಸ್ಸಿಗೆ ಕೆಲವು ಆಲೋಚನೆಗಳು ಬರುವುವು ಮತ್ತು ನೀನು ಒಂದು ಕುತಂತ್ರವನ್ನು ಮಾಡುವೆ.


ಕರ್ತದೇವರು ಆಜ್ಞಾಪಿಸದೆ ಇರುವಾಗ, ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?


“ ‘ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವುವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನೆಂಬುದಕ್ಕೆ ಇದೇ ನಿಮಗೆ ಗುರುತು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.


“ನೀನು ವೃದ್ಧನಾದೆ, ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವುದಿಲ್ಲ. ಈಗ ಎಲ್ಲ ರಾಷ್ಟ್ರಗಳ ಹಾಗೆ ನಮಗೆ ನ್ಯಾಯತೀರಿಸುವುದಕ್ಕೆ ಒಬ್ಬ ಅರಸನನ್ನು ನೇಮಿಸು,” ಎಂದರು.


ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದ ಬೊಂಬೆಗಳನ್ನೂ ನೀವು ನೋಡಿದ್ದೀರಲ್ಲವೇ?


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯವರೆಗೂ ಎಲ್ಲಾ ಜನಾಂಗಗಳಲ್ಲಿ ಚದರಿಸುವರು. ಅಲ್ಲಿ ನೀವೂ ನಿಮ್ಮ ಪಿತೃಗಳು ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಆರಾಧಿಸುವಿರಿ.


ಯೆಹೋವ ದೇವರು ನಿಮ್ಮನ್ನೂ, ನೀವು ನಿಮ್ಮ ಮೇಲೆ ನೇಮಿಸಿಕೊಳ್ಳುವ ಅರಸನನ್ನೂ, ನೀವೂ, ನಿಮ್ಮ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗುವಂತೆ ಮಾಡುವರು. ಅಲ್ಲಿ ಮರವೂ, ಕಲ್ಲೂ ಆಗಿರುವ ಬೇರೆ ದೇವರುಗಳನ್ನೂ ನೀವು ಪೂಜಿಸುವಿರಿ.


ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.


ಆದರೆ ನಾನು, ‘ನಿನ್ನ ಕಾಲು ಸವೆಯದಂತೆಯೂ, ನಿನ್ನ ಗಂಟಲು ಆರದಂತೆಯೂ ತಡೆದುಕೋ,’ ಎಂದೆನು. ಆದರೆ ನೀನು, ‘ಇಲ್ಲ, ನಿರೀಕ್ಷೆ ಇಲ್ಲ, ನಾನು ಅನ್ಯದೇವರುಗಳನ್ನು ಪ್ರೀತಿಸುತ್ತೇನೆ, ಅವುಗಳ ಹಿಂದೆ ನಾನು ಹೋಗುತ್ತೇನೆ,’ ಎಂದು ಹೇಳಿದೆ.


ಯೆಹೋವ ದೇವರು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವರು; ಜನರ ದುರುದ್ದೇಶಗಳನ್ನು ನಿಷ್ಪಲ ಮಾಡುತ್ತಾರೆ.


ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ. ಹಿಡಿದ ಕೋಲಿನಿಂದ ಉತ್ತರ ಪಡೆಯಲು ಯತ್ನಿಸುತ್ತಾರೆ. ಏಕೆಂದರೆ ವ್ಯಭಿಚಾರದ ಆತ್ಮವು ಅವರನ್ನು ತಪ್ಪಿಸಿಬಿಟ್ಟಿದೆ. ಅವರು ತಮ್ಮ ದೇವರಿಗೆ ಅಪನಂಬಿಗಸ್ತರಾಗಿ ದ್ರೋಹ ಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು