36 ಅದೇ ರೀತಿ ನಾನು ನಿಮ್ಮ ಪಿತೃಗಳ ಸಂಗಡ ಈಜಿಪ್ಟ್ ದೇಶದ ಮರುಭೂಮಿಯಲ್ಲಿ ನ್ಯಾಯತೀರ್ಪು ಮಾಡಿದೆನು. ಈಗಲೂ ನಿಮ್ಮ ಸಂಗಡ ನ್ಯಾಯತೀರ್ಪು ಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
“ ‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು.
“ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು.
ಯೆಹೋವ ದೇವರು ತಮ್ಮ ಪ್ರಜೆಗಳ ಹಿರಿಯರ ಸಂಗಡ, ಮತ್ತು ಅವರ ಅಧಿಪತಿಗಳ ಸಂಗಡ ನ್ಯಾಯತೀರಿಸಲು ಪ್ರವೇಶಿಸುವರು. ಏಕೆಂದರೆ, “ನೀವು ನನ್ನ ದ್ರಾಕ್ಷಿತೋಟವನ್ನು ತಿಂದುಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
ಭೂಮಿಯ ಅಂತ್ಯಗಳವರೆಗೆ ಘೋಷವು ಬರುವುದು. ಯೆಹೋವ ದೇವರಿಗೆ ಜನಾಂಗಗಳ ಸಂಗಡ ವ್ಯಾಜ್ಯವಿದೆ. ಅವರು ಎಲ್ಲಾ ಮನುಷ್ಯರ ಸಂಗಡ ನ್ಯಾಯಕ್ಕೆ ನಿಲ್ಲುವರು. ದುಷ್ಟರನ್ನು ಖಡ್ಗಕ್ಕೆ ಒಪ್ಪಿಸುವರು,’ ” ಎಂದು ಯೆಹೋವ ದೇವರು ಹೇಳುತ್ತಾರೆ.
ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ. ಆಗ ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಬಾಬಿಲೋನಿಗೆ ಕರೆತಂದಿದ್ದೇನೆ ಮತ್ತು ಅವನು ನನಗೆ ನಂಬಿಕೆದ್ರೋಹ ಮಾಡಿದ ಕಾರಣ ಅಲ್ಲಿ ಅವನಿಗೆ ನ್ಯಾಯತೀರ್ಪು ವಿಧಿಸುತ್ತೇನೆ.