ಯೆಹೆಜ್ಕೇಲನು 20:38 - ಕನ್ನಡ ಸಮಕಾಲಿಕ ಅನುವಾದ38 ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧ ಮಾಡಿದವರನ್ನೂ ನಿಮ್ಮೊಂದಿಗೆ ಶುದ್ಧಮಾಡುತ್ತೇನೆ. ಅವರು ಪ್ರವಾಸಿಗಳಾಗಿದ್ದ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಆದರೆ ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ, ನಾನೇ ಯೆಹೋವ ದೇವರೆಂಬುದನ್ನು ಅವರಿಗೆ ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ನನಗೆ ತಿರುಗಿ ಬಿದ್ದು ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಕಳುಹಿಸಿ ಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರು ಮಾಡಿದರೂ, ಅವರು ಇಸ್ರಾಯೇಲ್ ದೇಶಕ್ಕೆ ಸೇರುವುದೇ ಇಲ್ಲ; ನಾನೇ ಯೆಹೋವನು” ಎಂದು ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ನನಗೆ ವಿಮುಖರಾದ ದ್ರೋಹಿಗಳನ್ನು ನಿಮ್ಮಿಂದ ದೂರಕ್ಕೆ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಬಿಡುಗಡೆ ಮಾಡಿದರೂ ಅವರು ಇಸ್ರಯೇಲ್ ನಾಡಿಗೆ ಸೇರುವುದೇ ಇಲ್ಲ; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರುಮಾಡಿದರೂ ಅವರು ಇಸ್ರಾಯೇಲ್ ದೇಶಕ್ಕೆ ಸೇರುವದೇ ಇಲ್ಲ ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ನನಗೆ ವಿರೋಧವಾಗಿ ಎದ್ದು ಪಾಪಮಾಡಿದ ಜನರನ್ನು ಅವರ ಸ್ವದೇಶದಿಂದ ತೆಗೆದುಬಿಡುವೆನು. ಅವರು ಇನ್ನೆಂದಿಗೂ ಇಸ್ರೇಲ್ ದೇಶಕ್ಕೆ ಹಿಂತಿರುಗಿ ಬರುವುದೇ ಇಲ್ಲ. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.” ಅಧ್ಯಾಯವನ್ನು ನೋಡಿ |