ಯೆಹೆಜ್ಕೇಲನು 20:39 - ಕನ್ನಡ ಸಮಕಾಲಿಕ ಅನುವಾದ39 “ ‘ನಿಮ್ಮ ವಿಷಯವಾಗಿ, ಓ ಇಸ್ರಾಯೇಲಿನ ಮನೆತನದವರೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೋಗಿರಿ, ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ. ಆದರೆ ನಂತರ ನೀವು ಖಂಡಿತವಾಗಿಯೂ ನನ್ನ ಮಾತನ್ನು ಕೇಳುತ್ತೀರಿ ಮತ್ತು ನಿಮ್ಮ ದಾನಗಳಿಂದಲೂ, ನಿಮ್ಮ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 “ಇಸ್ರಯೇಲ್ ವಂಶದವರೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹೋಗಿರಿ, ನಿಮ್ಮ ವಿಗ್ರಹಗಳನ್ನು ಪೂಜಿಸಿರಿ; ಮುಂದಕ್ಕಾದರು ನನ್ನ ಮಾತನ್ನು ಕೇಳಿಯೇ ಕೇಳುವಿರಿ; ಇನ್ನು ಮೇಲಾದರು ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದ ಹಾಗೂ ವಿಗ್ರಹಗಳಿಂದ ನೀವು ಅಪಕೀರ್ತಿಗೆ ಒಳಪಡಿಸಲಾರಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹೋಗಿರಿ, ನಿಮ್ಮ ಬೊಂಬೆಗಳನ್ನು ಸೇವಿಸಿಕೊಳ್ಳಿರಿ; ಮುಂದಂತು ನನ್ನ ಮಾತನ್ನು ಕೇಳೇ ಕೇಳುವಿರಿ, ಇನ್ನು ಮೇಲೆ ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಇಸ್ರೇಲ್ ಜನರೇ, ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ಹೊಲಸು ವಿಗ್ರಹಗಳನ್ನು ಆರಾಧಿಸಬೇಕೆನ್ನುವವನು ಹೋಗಿ ಆರಾಧಿಸಲಿ. ಮುಂದಿನ ಕಾಲದಲ್ಲಂತೂ ನೀವು ನನ್ನ ಬುದ್ಧಿಮಾತನ್ನು ಕೇಳೇ ಕೇಳುವಿರಿ. ನನ್ನ ಪರಿಶುದ್ಧ ಹೆಸರನ್ನು ನೀವು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.” ಅಧ್ಯಾಯವನ್ನು ನೋಡಿ |
ಅವರು ನನಗೆ, “ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ನನ್ನ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲರ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಎಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರದಿಂದಲೂ ಅವರ ಅರಸರ ಮರಣದ ಸಮಯದಲ್ಲಿ ಅವರ ಅಂತ್ಯಕ್ರಿಯೆಯ ವಿಧಿಗಳ ಅರ್ಪಣೆಯಿಂದ ಅಪವಿತ್ರಗೊಳಿಸುವುದಿಲ್ಲ.
ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.