Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:40 - ಕನ್ನಡ ಸಮಕಾಲಿಕ ಅನುವಾದ

40 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಪರಿಶುದ್ಧ ಪರ್ವತದಲ್ಲಿಯೇ, ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನದವರೆಲ್ಲರೂ, ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ, ನಿಮ್ಮ ಉತ್ತಮ ಅರ್ಪಣೆಗಳನ್ನೂ, ನಿಮ್ಮ ಕಾಣಿಕೆಗಳ ಪ್ರಥಮ ಫಲವನ್ನೂ, ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾಡಿನಲ್ಲಿ ಇಸ್ರಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧ ಬೆಟ್ಟದಲ್ಲೇ, ಇಸ್ರಯೇಲಿನ ಪರ್ವತಾಗ್ರದಲ್ಲೇ, ನನ್ನನ್ನು ಪೂಜಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದುದೆಲ್ಲವನ್ನೂ ಅಂಗೀಕರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದದೆಲ್ಲವನ್ನೂ ಬರಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಎತ್ತರವಾದ ನನ್ನ ಪವಿತ್ರಪರ್ವತಕ್ಕೆ ಜನರು ಬರಲೇಬೇಕು. ಅಲ್ಲಿ ಅವರು ನನ್ನ ಸೇವೆ ಮಾಡಲೇಬೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನ್ನು ಸ್ವೀಕರಿಸಿಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನ್ನು ಪ್ರಥಮ ಫಲಗಳನ್ನು ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನ್ನು ನನಗೆ ತರಬೇಕೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:40
29 ತಿಳಿವುಗಳ ಹೋಲಿಕೆ  

ನನ್ನ ಪರಿಶುದ್ಧ ಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವನ್ನು ಉಂಟುಮಾಡುವೆನು. ನನ್ನ ಬಲಿಪೀಠದ ಮೇಲೆ ಅವರು ಅರ್ಪಿಸುವ ದಹನಬಲಿಗಳು, ಯಜ್ಞಗಳು ನನಗೆ ಒಪ್ಪಿಗೆಯಾಗುವುವು, ಏಕೆಂದರೆ ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವು ಎಂದು ಎನಿಸಿಕೊಳ್ಳುವುದು.”


ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಇದ್ದಂತೆ ಯೆಹೋವ ದೇವರಿಗೆ ಮೆಚ್ಚಿಕೆಯಾಗಿರುವುದು.


ಕೇದಾರಿನ ಮಂದೆಗಳೆಲ್ಲಾ ನಿನ್ನಲ್ಲಿ ಸೇರಿಬರುವುವು. ನೆಬಾಯೋತಿನ ಟಗರುಗಳು ನಿನ್ನನ್ನು ಸೇವಿಸುವುವು. ನನ್ನ ಬಲಿಪೀಠದ ಮೇಲೆ ಮೆಚ್ಚಿಕೆಯಿಂದ ಏರುವುವು. ನನ್ನ ಮಹಿಮೆಯ ಆಲಯವನ್ನು ಘನಪಡಿಸುವೆನು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಅದು ದೇವರ ಹೆಸರಿಗೆ ಸಲ್ಲಿಸುವ ಕೃತಜ್ಞತೆಯೆಂಬ ತುಟಿಗಳ ಫಲವೇ ಆಗಿದೆ.


ಈ ದಿನಗಳು ತೀರಿದಾಗ ಎಂಟನೆಯ ದಿನದ ತರುವಾಯ ಯಾಜಕರು ಬಲಿಪೀಠದ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು. ಅದು ಕೊಂಬೆಗಳಲ್ಲಿ ಹುಟ್ಟಿಕೊಂಡು ಫಲಫಲಿಸುವುದು; ಸೊಂಪಾದ ದೇವದಾರು ಆಗುವುದು. ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಗಳೂ, ಅದರ ಕೊಂಬೆಗಳ ನೆರಳಿನ ಕೆಳಗೆ ವಾಸಮಾಡುವುವು.


ಇದಾದ ಮೇಲೆ, “ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವುದಕ್ಕೆ ಬರುವರು” ಎಂದು ಯೆಹೋವ ದೇವರು ಹೇಳುತ್ತಾರೆ.


ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಪರಿಶುದ್ಧ ಪಟ್ಟಣವಾದ ಯೆರೂಸಲೇಮು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದು ಬರುವುದನ್ನು ನನಗೆ ತೋರಿಸಿದನು.


ಪರಲೋಕದಲ್ಲಿ ಒಂದು ಮಹಾ ಸೂಚನೆಯು ಕಾಣಿಸಿತು: ಒಬ್ಬ ಸ್ತ್ರೀಯು ಸೂರ್ಯನನ್ನು ಧರಿಸಿಕೊಂಡಿದ್ದಳು, ಆಕೆಯ ಪಾದಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ, ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವುವು. ಹೌದು, ಕುಡಿದು ಎಂದೂ ಇಲ್ಲದವರ ಹಾಗೆ ಆಗುವುದು.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವ ದೇವರು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದಂತೆ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಮುಂದೆ ದುಃಖಪಡುವುದಿಲ್ಲ.


ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥಗಳಲ್ಲಿಯೂ ಪಲ್ಲಕ್ಕಿಗಳಲ್ಲಿಯೂ ಹೇಸರಗತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಯೆಹೋವ ದೇವರಿಗೆ ಕಾಣಿಕೆಯಾಗಿ ಇಸ್ರಾಯೇಲರು ಕಾಣಿಕೆಯನ್ನು ಶುದ್ಧಪಾತ್ರೆಯಲ್ಲಿ ಯೆಹೋವ ದೇವರು ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸಲೇಮಿಗೆ ತರುವರೆಂದು ಯೆಹೋವ ದೇವರು ಹೇಳುತ್ತಾರೆ.


“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”


ಅಷ್ಟೇ ಅಲ್ಲದೆ, ಪವಿತ್ರಾತ್ಮ ದೇವರ ಪ್ರಥಮ ಫಲವನ್ನು ಹೊಂದಿದವರಾಗಿರುವ ನಾವು ಕೂಡ, ಮಕ್ಕಳ ಪದವಿಯನ್ನು ಪಡೆಯುವುದಕ್ಕಾಗಿ ನಮ್ಮ ದೇಹಗಳ ಬಿಡುಗಡೆಗಾಗಿ ಎದುರುನೋಡುತ್ತಾ ಆತುರದಿಂದ ನರಳುತ್ತಾ ಇದ್ದೇವೆ.


ಅರೌನನು ಇವುಗಳನ್ನೆಲ್ಲಾ ಅರಸನಿಗೆ ಕೊಟ್ಟನು. ಇದಲ್ಲದೆ ಅರೌನನು ಅರಸನಿಗೆ, “ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಂಗೀಕರಿಸಲಿ,” ಎಂದನು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು. ಇದರ ತುದಿಯಲ್ಲಿರುವ ಎಳೆಯದಾದ ಕೊಂಬೆಯನ್ನು ಕತ್ತರಿಸಿ, ಎತ್ತರವಾದ ಪರ್ವತದ ಮೇಲೆ ನಾಟುವೆನು.


ನೀನು ರಕ್ಷಕ ಕೆರೂಬಿಯಾಗಿ ಅಭಿಷೇಕಹೊಂದಿದೆ. ನಾನೇ ನಿನ್ನನ್ನು ನೇಮಿಸಿದ್ದೇನೆ. ನೀನು ದೇವರ ಪರಿಶುದ್ಧ ಪರ್ವತದ ಮೇಲೆ ಇದ್ದೆ; ನೀನು ಉರಿಯುತ್ತಿರುವ ಕಲ್ಲುಗಳ ನಡುವೆ ನಡೆದೆ.


ದೇವರ ದರ್ಶನಗಳಲ್ಲಿ ಅವರು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ನಿಲ್ಲಿಸಿದರು. ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.


“ಇದು ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿ ಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧವಾಗಿದೆ. ಇಗೋ, ಇದೇ ಆ ಆಲಯದ ನಿಯಮವಾಗಿದೆ.


ಆ ದಿವಸದಲ್ಲಿ ನೀನು ನನಗೆ ವಿರೋಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನಾಚಿಕೆಗೆ ಗುರಿಯಾಗುವುದಿಲ್ಲ; ಏಕೆಂದರೆ ಆಗ ಗರ್ವದಿಂದ ಹೊಗಳಿಕೊಳ್ಳುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕುವೆನು. ನನ್ನ ಪರಿಶುದ್ಧ ಪರ್ವತದಲ್ಲಿ ಇನ್ನು ಮೇಲೆ ನೀನು ಗರ್ವಪಡದೇ ಬಾಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು