ಯೆಹೆಜ್ಕೇಲನು 20:43 - ಕನ್ನಡ ಸಮಕಾಲಿಕ ಅನುವಾದ43 ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು, ನೀವು ಯಾವ ಸಂಗತಿಗಳಿಂದ ಅಶುದ್ಧವಾಗಿದ್ದೀರೋ, ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕ ಮಾಡಿಕೊಳ್ಳುವಿರಿ. ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿಯಲ್ಲಿಯೇ ನೀವು ಅಸಹ್ಯರಾಗುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ನೀವು ನಿಮ್ಮನ್ನು ಹೊಲಸು ಮಾಡಿಕೊಂಡಿರುವ ನಿಮ್ಮ ನಡತೆಯನ್ನೂ, ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ನಿಮ್ಮನ್ನು ಅಪವಿತ್ರಗೊಳಿಸಿರುವ ನಿಮ್ಮ ನಡತೆಯನ್ನೂ ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ನೆನಪಿಗೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ನೀವು ನಿಮ್ಮನ್ನು ಹೊಲಸುಮಾಡಿಕೊಂಡಿರುವ ನಿಮ್ಮ ನಡತೆಯನ್ನೂ ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು ನೀವು ನಡಿಸಿರುವ ಸಕಲ ದುಷ್ಕೃತ್ಯಗಳ ನಿವಿುತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ನಿಮ್ಮನ್ನು ನಿಮ್ಮ ದುಷ್ಟತ್ವದಿಂದ ಹೊಲಸು ಮಾಡಿಕೊಂಡದ್ದನ್ನು ಅಲ್ಲಿ ಜ್ಞಾಪಕಮಾಡಿಕೊಳ್ಳುವಿರಿ. ಆಗ ನೀವು ನಾಚಿಕೆಪಡುವಿರಿ. ಅಧ್ಯಾಯವನ್ನು ನೋಡಿ |
ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.