ಯೆಹೆಜ್ಕೇಲನು 20:44 - ಕನ್ನಡ ಸಮಕಾಲಿಕ ಅನುವಾದ44 ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗಗಳ ಪ್ರಕಾರವಲ್ಲ, ನಿಮ್ಮ ದುಷ್ಕೃತ್ಯಗಳ ಪ್ರಕಾರವಲ್ಲ, ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಸಹಿಸಿಕೊಂಡಿರುವಾಗ, ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ, ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ, ನನ್ನ ಹೆಸರಿನ ನಿಮಿತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಇಸ್ರಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ, ನಾನೇ ಸರ್ವೇಶ್ವರ ಎಂದು ನಿಮಗೆ ತಿಳಿಯುವುದು; ಇದು ಸರ್ವೇಶ್ವರನಾದ ದೇವರ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ ನನ್ನ ಹೆಸರಿನ ನಿವಿುತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಇಸ್ರೇಲ್ ಜನಾಂಗಗಳೇ, ನೀವು ಅನೇಕ ಕೆಟ್ಟ ವಿಷಯಗಳನ್ನು ಮಾಡಿರುತ್ತೀರಿ. ಆ ದುಷ್ಕೃತ್ಯಗಳಿಗಾಗಿ ನೀವು ನಾಶವಾಗಿ ಹೋಗಬೇಕಾಗಿತ್ತು. ಆದರೆ ನನ್ನ ಒಳ್ಳೆಯ ಹೆಸರಿನ ಸಲುವಾಗಿ ನೀವು ಹೊಂದಬೇಕಾದ ಶಿಕ್ಷೆಯನ್ನು ನಾನು ನಿಮಗೆ ವಿಧಿಸುವುದಿಲ್ಲ. ಆಗ ನಾನೇ ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿ |