Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:49 - ಕನ್ನಡ ಸಮಕಾಲಿಕ ಅನುವಾದ

49 ಆಗ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ‘ಅವನು ಸಾಮ್ಯಗಳನ್ನು ಹೇಳುವುದಿಲ್ಲವೇ?’ ಎಂದು ನನ್ನ ವಿಷಯದಲ್ಲಿ ಅವರು ಹೇಳುತ್ತಾರೆ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 “ಆಗ ನಾನು, ‘ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೇ?’ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ” ಎಂಬುದಾಗಿ ಅರಿಕೆಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಆಗ ನಾನು - “ಅಯ್ಯೋ, ಸರ್ವೇಶ್ವರನಾದ ದೇವರೇ, ‘ಅವನು ಒಗಟುಗಾರನಲ್ಲವೆ?’ ಎಂದು ಈ ಜನರು ನನ್ನ ಬಗ್ಗೆ ಆಡಿಕೊಳ್ಳುತ್ತಾರೆ” ಎಂದು ಅರಿಕೆಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಆಗ ನಾನು - ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೆ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ ಎಂಬದಾಗಿ ಅರಿಕೆಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಆಗ ನಾನು (ಯೆಹೆಜ್ಕೇಲ್), “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಇದನ್ನೆಲ್ಲಾ ಹೇಳಿದರೆ, ನಿಗೂಢವಾದ ಕಥೆಗಳನ್ನು ಹೇಳುತ್ತಿದ್ದೇನೆಂದು ಹೇಳುವರು. ಮತ್ತು ನನಗೆ ಇನ್ನೆಂದಿಗೂ ಕಿವಿಗೊಡುವದಿಲ್ಲ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:49
10 ತಿಳಿವುಗಳ ಹೋಲಿಕೆ  

“ಇವುಗಳನ್ನು ನಾನು ಸೂಚಕವಾಗಿ ನಿಮ್ಮೊಡನೆ ಮಾತನಾಡಿದ್ದೇನೆ. ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯವಾಗಿ ನಿಮಗೆ ಸ್ಪಷ್ಟವಾಗಿ ಪ್ರಕಟಿಸುವ ಗಳಿಗೆಯು ಬರುತ್ತದೆ.


ಆದರೆ ಎಪಿಕೂರಿಯರು ಹಾಗೂ ಸ್ತೋಯಿಕರು ಎಂಬ ತತ್ವಜ್ಞಾನಿಗಳಲ್ಲಿ ಸಹ ಕೆಲವರು ಅವನೊಂದಿಗೆ ವಾಗ್ವಾದ ಮಾಡಲು ಪ್ರಾರಂಭಿಸಿ, “ಈ ಬಾಯಿಬಡುಕ ಏನು ಹೇಳಬೇಕೆಂದಿದ್ದಾನೆ?” ಎಂದರು. ಇನ್ನೂ ಕೆಲವರು, “ಅವನು ವಿದೇಶದ ದೇವರುಗಳ ಬಗ್ಗೆ ಪ್ರಸ್ತಾಪಿಸುವಂತೆ ತೋರುತ್ತದೆ,” ಎಂದರು. ಏಕೆಂದರೆ ಅವನು ಯೇಸುವನ್ನು ಮತ್ತು ಪುನರುತ್ಥಾನವನ್ನು ಕುರಿತ ಸುವಾರ್ತೆ ಸಾರುತ್ತಿದ್ದನು.


“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನ್ನು ಒಗಟಾಗಿ ಹೇಳು.


ಅದಕ್ಕೆ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದ ದಿನದಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ. ಯಾವ ಅಸಹ್ಯ ಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.


“ಮನುಷ್ಯಪುತ್ರನೇ, ದ್ರೋಹಿ ವಂಶದವರಾದ ಇಸ್ರಾಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೇ?


ಯೆಹೋವ ದೇವರ ವಾಕ್ಯವು ನನಗೆ ಬಂದಿತು,


ದಂಗೆಕೋರ ಮನೆತನದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಟ್ಟು ಅದರಲ್ಲಿ ನೀರನ್ನು ಸುರಿ.


“ ‘ಇದರ ಅರ್ಥವೇನೆಂದು ನೀನು ನಮಗೆ ಹೇಳುವುದಿಲ್ಲವೋ?’ ಎಂದು ನಿನ್ನ ದೇಶದ ಜನರು ನಿನ್ನನ್ನು ಪ್ರಶ್ನಿಸುವಾಗ,


ನಾನು ಪ್ರವಾದಿಗಳೊಂದಿಗೆ ಮಾತನಾಡಿದ್ದೇನೆ. ಅವರಿಗೆ ಹಲವಾರು ದರ್ಶನಗಳನ್ನು ದಯಪಾಲಿಸಿದ್ದೇನೆ. ಅವರ ಮುಖಾಂತರ ಸಾಮ್ಯಗಳನ್ನು ಜನರಿಗೆ ಹೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು