8 “ ‘ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ಕಣ್ಣಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ. ಅವರು ಈಜಿಪ್ಟಿನ ವಿಗ್ರಹಗಳನ್ನು ಬಿಡಲಿಲ್ಲ. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಈಜಿಪ್ಟ್ ದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.
8 “‘ಅವರಾದರೋ ನನ್ನ ಮಾತನ್ನು ನಿರಾಕರಿಸಿ, ನನ್ನ ಮೇಲೆ ತಿರುಗಿ ಬಿದ್ದರು; ತಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ, ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತ ದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಅಂದುಕೊಂಡೆನು.
8 ಅವರಾದರೋ ನನ್ನ ಮಾತನ್ನು ಲೆಕ್ಕಿಸದೆ ನನ್ನ ವಿರುದ್ಧ ದಂಗೆಯೆದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತ್ಯಜಿಸಲಿಲ್ಲ. ಆಗ ನಾನು ಈಜಿಪ್ಟ್ ದೇಶದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಎಂದುಕೊಂಡೆ.
8 ಅವರಾದರೋ ನನ್ನ ಮಾತನ್ನು ಕೇಳಲೊಲ್ಲದೆ ನನ್ನ ಮೇಲೆ ತಿರುಗಿಬಿದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಟುಬಿಡಲಿಲ್ಲ. ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.
8 ಆದರೆ ಅವರು ನನ್ನ ವಿರುದ್ಧವಾಗಿ ಎದ್ದು ನನ್ನ ಮಾತುಗಳನ್ನು ಕೇಳದೆ ಹೋದರು. ತಮ್ಮ ವಿಗ್ರಹಗಳನ್ನು ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಆದ್ದರಿಂದ ನಾನು ಅವರನ್ನು (ಇಸ್ರೇಲರನ್ನು) ಈಜಿಪ್ಟಿನಲ್ಲಿಯೇ ನಾಶಮಾಡಿ ನನ್ನ ರೋಷಾಗ್ನಿಯನ್ನು ತೀರಿಸಿಕೊಳ್ಳಲು ಆಲೋಚಿಸಿದೆನು.
“ ‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು.
ಆಮೇಲೆ ನಾನು ಅವರಿಗೆ, “ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳ ಮುಂದೆ ಅಸಹ್ಯವಾದವುಗಳನ್ನು ಬಿಸಾಡಿ ಬಿಡಿರಿ. ಈಜಿಪ್ಟಿನ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನಾಗಿರುವೆನು.”
ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು. ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು. ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು.
“ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ರೋಷವನ್ನು ಅವರ ಮೇಲೆ ಕಾರಿ, ಸಮಾಧಾನ ಹೊಂದುವೆನು. ಹೀಗೆ ನಾನು ನನ್ನ ರೋಷವನ್ನು ಅವರ ಮೇಲೆ ತೀರಿಸಿದ ತರುವಾಯ, ಯೆಹೋವ ದೇವರಾದ ನಾನು ರೋಷದಿಂದ ಮಾತನಾಡಿದ್ದೇನೆ ಎಂದು ಅವರು ತಿಳಿಯುವರು.
“ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು.
ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ. ಮರೆಯಬೇಡಿರಿ. ನೀವು ಈಜಿಪ್ಟ್ ದೇಶದಿಂದ ಹೊರಟ ದಿವಸ ಮೊದಲ್ಗೊಂಡು ಈ ಸ್ಥಳಕ್ಕೆ ಬರುವವರೆಗೆ ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುತ್ತಿದ್ದೀರಿ.
“ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.
ಮೋಶೆಯು ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲರು ನೋಡಿದಾಗ, ಅವರು ಆರೋನನ ಬಳಿಗೆ ಕೂಡಿಬಂದು ಅವನಿಗೆ, “ನೀನು ಎದ್ದು ನಮ್ಮನ್ನು ಮುನ್ನಡೆಸಿಕೊಂಡು ಹೋಗುವ ದೇವರುಗಳನ್ನು ನಮಗಾಗಿ ಮಾಡು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು,” ಎಂದರು.
ನೀವು ವಾಸವಾಗಿದ್ದ ಈಜಿಪ್ಟ್ ದೇಶದ ಆಚಾರಗಳನ್ನು ಅನುಸರಿಸಬಾರದು. ನಿಮ್ಮನ್ನು ಸೇರಿಸಲಿರುವ ಕಾನಾನ್ ದೇಶದವರ ಆಚಾರಗಳನ್ನು ನೀವು ಮಾಡಬಾರದು. ಇಲ್ಲವೆ ನೀವು ಅವರ ಪದ್ಧತಿಗಳನುಸಾರ ನಡೆಯಬಾರದು.
ಆದ್ದರಿಂದ ದೇವರು ಅವರಿಗೆ ಪೂರ್ಣದಂಡನೆ ಕೊಡುವುದಾಗಿ ಹೇಳಿದರು. ಆದರೆ ಅವರು ಆಯ್ದುಕೊಂಡ ಮೋಶೆಯು, ದೇವರ ಕಠಿಣ ತೀರ್ಮಾನವನ್ನು ಶಾಂತಪಡಿಸಲು ಆಪತ್ತಿನಲ್ಲಿ ದೇವರ ಮುಂದೆ ಮಧ್ಯಸ್ಥನಾಗಿ ನಿಂತುಕೊಂಡನು.
ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡೆದುಕೊಂಡರು. ಆದ್ದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.’ ”
“ನಾನು ಮರುಭೂಮಿಯಲ್ಲಿ ದ್ರಾಕ್ಷಾಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು. ಆದರೆ ಅವರು ಬಾಳ್ ಪೆಯೋರನ ಹತ್ತಿರ ಬಂದು ನಾಚಿಕೆಯ ವಿಗ್ರಹಕ್ಕೆ ತಮ್ಮನ್ನು ಪ್ರತ್ಯೇಕಿಸಿಕೊಂಡರು. ಅವರು ಪ್ರೀತಿಸಿದ ವಿಗ್ರಹಗಳ ಹಾಗೆ ಅಸಹ್ಯರಾದರು.
ಆಗ ಅವರು ತಮ್ಮ ಪಿತೃಗಳ ಹಾಗೆ ಹಟಮಾರಿ ಮತ್ತು ದಂಗೆಕೋರ ಸಂತತಿಯವರು ಆಗಿರುವುದಿಲ್ಲ, ಅವರ ಹೃದಯವು ದೇವರಿಗೆ ಸತ್ಯವಾಗಿರಲಿಲ್ಲ, ಅವರ ಆತ್ಮವು ದೇವರಲ್ಲಿ ನಂಬಿಗಸ್ತಿಕೆಯಿಂದಲೂ ಇರಲಿಲ್ಲ.
ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ.