10 ಸಂಹರಿಸಲು ಸಾಣೆಹಿಡಿದಿದೆ; ಮಿಂಚುವಂತೆ ಮಸೆಯಲಾಗಿದೆ. “ ‘ಹಾಗಾದರೆ ನನ್ನ ಮಗ ಯೆಹೂದದ ರಾಜದಂಡದಲ್ಲಿ ನಾವು ಸಂತೋಷ ಪಡಬಹುದೋ? ಅಂಥ ಪ್ರತಿಯೊಂದು ಬೆತ್ತವನ್ನೂ ಖಡ್ಗವು ತಿರಸ್ಕರಿಸುತ್ತದೆ.
10 ಕೊಲ್ಲುವದಕ್ಕಾಗಿ ಆ ಖಡ್ಗವು ಹರಿತಮಾಡಲ್ಪಟ್ಟಿದೆ, ಮಿಂಚಿನಂತೆ ಹೊಳೆಯುತ್ತಿದೆ. ನನ್ನ ಮಗನೇ, ನಾನು ನಿನ್ನನ್ನು ಶಿಕ್ಷಿಸುತ್ತಿದ್ದ ಬೆತ್ತದಿಂದ ನೀನು ಓಡಿಹೋದೆ. ಬೆತ್ತದ ಶಿಕ್ಷೆಯನ್ನು ಅನುಭವಿಸಲು ನೀನು ಒಪ್ಪಲಿಲ್ಲ.
ದಕ್ಷಿಣದ ಮರುಭೂಮಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರ ವಾಕ್ಯವನ್ನು ಕೇಳು. ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ. ಅದು ನಿನ್ನಲ್ಲಿರುವ ಎಲ್ಲಾ ಹಸಿಮರಗಳನ್ನು ಮತ್ತು ಎಲ್ಲಾ ಒಣ ಮರಗಳನ್ನು ತಿಂದುಬಿಡುವುದು. ಉರಿಯುವ ಜ್ವಾಲೆ ಆರಿಹೋಗುವುದಿಲ್ಲ. ದಕ್ಷಿಣ ಮೊದಲುಗೊಂಡು ಉತ್ತರದವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟುಹೋಗುವುವು.
ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನಿನ ಅರಮನೆಯಲ್ಲಿಂದ ಆ ಆಜ್ಞೆಯು ಹೊರಡಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವೋ ತಳಮಳಗೊಂಡಿತ್ತು.
ನಾನು ಆತನ ತಂದೆಯಾಗಿರುವೆನು. ಆತನು ನನಗೆ ಮಗನಾಗಿರುವನು. ಅವನು ಕೆಟ್ಟದ್ದನ್ನು ಮಾಡಿದರೆ, ನಾನು ಅವನನ್ನು ಮನುಷ್ಯರಿಂದ ಬೆಸುಗೆ ಹಾಕಿದ ಕೋಲಿನಿಂದಲೂ ಮನುಷ್ಯರ ಕೈಗಳಿಂದ ಹೊಡೆದ ಹೊಡೆತದಿಂದ ದಂಡಿಸುವೆನು.