Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:12 - ಕನ್ನಡ ಸಮಕಾಲಿಕ ಅನುವಾದ

12 ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು. ಏಕೆಂದರೆ ಅದು ನನ್ನ ಜನರ ಮೇಲೆಯೂ, ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಇರುವುದು. ಖಡ್ಗದ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವುದು. ಆದ್ದರಿಂದ ನಿನ್ನ ಎದೆಯನ್ನು ಬಡಿದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನರಪುತ್ರನೇ, ಕೂಗು, ಗೋಳಾಡು, ಬಡಿದುಕೋ ಎದೆ! ಎರಗಿದೆ ಆ ಖಡ್ಗ ನನ್ನ ಜನರ ಮೇಲೆ ಇಸ್ರಯೇಲಿನ ಅರಸರೆಲ್ಲರ ಮೇಲೆ ತುತ್ತಾಗುವರು ಅದಕ್ಕೆ ಜನನಾಯಕರು ಜನರೊಂದಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನರಪುತ್ರನೇ, ಕೂಗಿಕೋ, ಗೋಳಾಡು! ಖಡ್ಗವು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಬಿದ್ದಿದೆ; ಆ ಪ್ರಭುಗಳು ನನ್ನ ಜನರೊಂದಿಗೆ ಖಡ್ಗಕ್ಕೆ ತುತ್ತಾಗಿದ್ದಾರೆ; ತೊಡೆಯನ್ನು ಬಡಿದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “‘ಬೊಬ್ಬೆಹಾಕು, ಕಿರುಚು, ಓ ನರಪುತ್ರನೇ, ಯಾಕೆಂದರೆ ಖಡ್ಗವು ನನ್ನ ಜನರ ಮೇಲೆ ಮತ್ತು ಇಸ್ರೇಲಿನ ಎಲ್ಲಾ ಅಧಿಪತಿಗಳ ಮೇಲೆ ಉಪಯೋಗಿಸಲ್ಪಡುವುದು. ಇಸ್ರೇಲನ್ನು ಆಳುವವರಿಗೆ ಯುದ್ಧವು ಬೇಕು. ಆಗ ಅವರು ಖಡ್ಗವು ಬಂದಾಗ ನನ್ನ ಜನರೊಂದಿಗೆ ಇರಬಹುದು. ಆದ್ದರಿಂದ ನಿನ್ನ ತೊಡೆಗೆ ಬಡಿದು ಗಟ್ಟಿಯಾದ ಸ್ವರದಿಂದ ನಿನ್ನ ದುಃಖವನ್ನು ಪ್ರದರ್ಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:12
17 ತಿಳಿವುಗಳ ಹೋಲಿಕೆ  

“ಆದ್ದರಿಂದ ಮನುಷ್ಯಪುತ್ರನೇ, ನರಳಾಡು! ಮುರಿದ ಹೃದಯ ಮತ್ತು ಕಹಿ ದುಃಖದಿಂದ ಅವರ ಮುಂದೆ ನರಳಾಡು.


ಯಾಜಕರೇ, ಗೋಣಿತಟ್ಟು ಕಟ್ಟಿಕೊಂಡು ಗೋಳಾಡಿರಿ. ಬಲಿಪೀಠದ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟಿನಲ್ಲಿ ರಾತ್ರಿಯೆಲ್ಲಾ ಕಳೆಯಿರಿ. ಏಕೆಂದರೆ, ಧಾನ್ಯ ಸಮರ್ಪಣೆಯೂ ಪಾನಾರ್ಪಣೆಯೂ ನಿಮ್ಮ ದೇವರ ಆಲಯದಿಂದ ನಿಂತುಹೋಗಿವೆ.


ಆದ್ದರಿಂದ ನಾನು ಗೋಳಾಡಿ ಅರಚುವೆನು. ಬರಿಗಾಲಿನಲ್ಲಿಯೂ ಬೆತ್ತಲೆಯಾಗಿಯೂ ಹೋಗುವೆನು. ನರಿಗಳ ಹಾಗೆ ಕೂಗುವೆನು, ಉಷ್ಟ್ರಪಕ್ಷಿಯಂತೆ ನರಳುವೆನು.


“ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ “ಅಯ್ಯೋ ಆ ದಿನ!” ಎಂದು, ಅಳುತ್ತಾ ಹೇಳಿರಿ.


“ಆದ್ದರಿಂದ ನೀನು ಮನುಷ್ಯಪುತ್ರನೇ, ಕೈಗೆ ಕೈತಟ್ಟಿ ಪ್ರವಾದಿಸು. ಹತರಾದವರ ಖಡ್ಗವಾದ ಆ ಖಡ್ಗವೇ ಎರಡರಷ್ಟು, ಮೂರರಷ್ಟು ಸಂಹರಿಸಲಿ. ಪ್ರಜೆಯನ್ನು ಹತಿಸುವ ಆ ಖಡ್ಗ ಸುತ್ತಲೂ ಬೀಸಿ ಆ ಕೊಠಡಿಗಳಲ್ಲಿ ಸೇರುವವರನ್ನು ಆ ದೊಡ್ಡ ಖಡ್ಗ ಸಂಹರಿಸುವುದು.


ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನೀವು ಯೆರೂಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿರಾ?” ಎಂದೆನು.


“ ‘ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು, “ಆಹಾ!” ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.


ನಾನು ನಿಮ್ಮಿಂದ ದೂರವಾದ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳುವಳಿಕೆ ಹೊಂದಿದ ಮೇಲೆಯೇ ದುಃಖದಿಂದ ನನ್ನ ಎದೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ನಾನು ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವ ದೇವರು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದಂತೆ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಮುಂದೆ ದುಃಖಪಡುವುದಿಲ್ಲ.


ಕುರುಬರೇ, ಗೋಳಿಟ್ಟು ಕೂಗಿರಿ. ಮಂದೆಯಲ್ಲಿನ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ. ಏಕೆಂದರೆ ನಿಮ್ಮನ್ನು ಕೊಲ್ಲುವುದಕ್ಕೂ, ಚದರಿಸುವುದಕ್ಕೂ ದಿನಗಳು ತುಂಬಿ ಇವೆ. ಆಗ ನೀವು ಒಡೆದುಹೋದ ಅಂದವಾದ ಪಾತ್ರೆಯಂತೆ ಬೀಳುವಿರಿ.


“ ‘ಖಡ್ಗವು ಕೈಯಲ್ಲಿ ಅದು ಹಿಡಿಯಲಾಗುವ ಹಾಗೆ ಮಸೆಯಲು ಕೊಡಲಾಗಿದೆ. ಕೊಲ್ಲುವವನ ಕೈಗೆ ಕೊಡುವ ಹಾಗೆ ಆ ಖಡ್ಗಕ್ಕೆ ಹದವನ್ನೂ, ಸಾಣೆಯನ್ನೂ ಮಾಡಲಾಗಿದೆ.


“ ‘ಪರಿಶೋಧನೆಯು ಖಂಡಿತವಾಗಿ ಬರುವುದಿಲ್ಲ. ಖಡ್ಗವು ತಿರಸ್ಕರಿಸುವ ಯೆಹೂದದ ರಾಜದಂಡವು ಮುಂದುವರಿಯದಿದ್ದರೆ ಹೇಗೆ? ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’


“ ‘ದುಷ್ಟನಾದ ಭ್ರಷ್ಟ ಇಸ್ರಾಯೇಲಿನ ರಾಜಕುಮಾರನೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.


“ ‘ಇಸ್ರಾಯೇಲಿನ ಅರಸರು ಪ್ರತಿಯೊಬ್ಬನು ತಮ್ಮ ತಮ್ಮ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾರೆ.


ಆದಕಾರಣ ಎಲ್ಲಾ ಕೈಗಳು ಜೋಲು ಬೀಳುವುವು ಮತ್ತು ಪ್ರತಿಯೊಬ್ಬನ ಹೃದಯವು ಕರಗುವುದು.


ಕೈಗಳೆಲ್ಲಾ ಜೋತಾಡುವುವು, ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ಆಗುವುವು.


ನೀವು ಚೀಯೋನಿನಲ್ಲಿ ಕೊಂಬು ಊದಿರಿ. ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ. ದೇಶದ ನಿವಾಸಿಗಳೆಲ್ಲರು ನಡುಗಲಿ. ಏಕೆಂದರೆ ಯೆಹೋವ ದೇವರ ದಿವಸವು ಬರುತ್ತದೆ. ಅದು ಸಮೀಪವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು