Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:19 - ಕನ್ನಡ ಸಮಕಾಲಿಕ ಅನುವಾದ

19 “ಮನುಷ್ಯಪುತ್ರನೇ, ಬಾಬಿಲೋನಿನ ಅರಸನ ಖಡ್ಗವು ಬರುವ ಹಾಗೆ ನೀನು ಎರಡು ಮಾರ್ಗಗಳನ್ನು ನೇಮಿಸಿಕೋ. ಅವೆರಡು ದಾರಿಗಳು ಒಂದೇ ದೇಶದಿಂದ ಹೊರಟ ಹಾಗಿರಲಿ. ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ನರಪುತ್ರನೇ, ಬಾಬೆಲಿನ ಅರಸನ ಖಡ್ಗವು ಬರುವುದಕ್ಕೆ ಎರಡು ದಾರಿಗಳ ನಕ್ಷೆಯನ್ನು ಬರೆ; ಅವೆರಡು ಒಂದೇ ದೇಶದಿಂದ ಹೊರಟ ಹಾಗಿರಲಿ; ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಬಾಬಿಲೋನಿನ ಅರಸನ ಖಡ್ಗ ಬರುವುದಕ್ಕೆ ಎರಡು ದಾರಿಗಳುಳ್ಳ ನಕ್ಷೆಯನ್ನು ಬರೆ; ಅವೆರಡು ದಾರಿಗಳು ಒಂದೇ ದೇಶದಿಂದ ಹೊರಟಹಾಗಿರಲಿ; ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನರಪುತ್ರನೇ, ಬಾಬೆಲಿನ ಅರಸನ ಖಡ್ಗವು ಬರುವದಕ್ಕೆ ಎರಡು ದಾರಿಗಳ ನಕ್ಷೆಯನ್ನು ಬರೆ; ಅವೆರಡು ಒಂದೇ ದೇಶದಿಂದ ಹೊರಟಹಾಗಿರಲಿ; ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನರಪುತ್ರನೇ, ಬಾಬಿಲೋನಿನ ರಾಜನ ಖಡ್ಗವು ಇಸ್ರೇಲಿಗೆ ಬರಲು ಎರಡು ಮಾರ್ಗಗಳ ನಕ್ಷೆಯನ್ನು ರಚಿಸು. ಅವರೆಡೂ ಒಂದೇ ಪ್ರದೇಶದಿಂದ (ಬಾಬಿಲೋನಿನಿಂದ) ಆರಂಭವಾಗುತ್ತವೆ. ಪ್ರತಿಯೊಂದು ರಸ್ತೆಯ ಆರಂಭದಲ್ಲಿ ಸೂಚನೆ ಕಂಬವನ್ನು ಚಿತ್ರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:19
9 ತಿಳಿವುಗಳ ಹೋಲಿಕೆ  

ನೋಡು, ಈ ಹೊತ್ತು ನೀನು ಕೀಳುವುದಕ್ಕೂ, ಕೆಳಗೆ ಹಾಕಿಬಿಡುವುದಕ್ಕೂ, ನಾಶಮಾಡುವುದಕ್ಕೂ, ಕೆಡವಿ ಹಾಕುವುದಕ್ಕೂ, ಕಟ್ಟುವುದಕ್ಕೂ, ನೆಡುವುದಕ್ಕೂ ನಾನು ನಿನ್ನನ್ನು ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ನಿನ್ನನ್ನು ನೇಮಿಸಿದ್ದೇನೆ,” ಎಂದರು.


ಅವರ ಹೃದಯವು ಕರಗುವ ಹಾಗೆಯೂ, ಅವರ ಎಲ್ಲಾ ಬಾಗಿಲುಗಳಲ್ಲಿ ಪತನವು ಹೆಚ್ಚಾಗುವ ಹಾಗೆಯೂ ಖಡ್ಗದ ಮೊನೆ ಇಟ್ಟಿದ್ದೇನೆ. ಆಹಾ, ಮಿಂಚಿನಂತೆ ಹೊಡೆಯಲು ಈ ಬಲೆ ಹೆಣೆಯಲಾಗಿದೆ ಅದನ್ನು ಕೊಲೆಮಾಡುವುದಕ್ಕೆ ಮಸೆಯಲಾಗಿದೆ.


ಯೆಹೋವ ದೇವರ ವಾಕ್ಯವು ನನಗೆ ಬಂದಿತು:


ಬಾಬಿಲೋನಿನವರು ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು, ಎಲ್ಲಾ ಅಸ್ಸೀರಿಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿ ಹೊಂದಿದವರೂ ಎಲ್ಲರೂ ಕುದುರೆಗಳ ಮೇಲೆ ಬೀಳುವಂತೆ ಮಾಡುವೆನು.


“ ‘ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು, “ಆಹಾ!” ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.


“ ‘ಖಡ್ಗವು ಕೈಯಲ್ಲಿ ಅದು ಹಿಡಿಯಲಾಗುವ ಹಾಗೆ ಮಸೆಯಲು ಕೊಡಲಾಗಿದೆ. ಕೊಲ್ಲುವವನ ಕೈಗೆ ಕೊಡುವ ಹಾಗೆ ಆ ಖಡ್ಗಕ್ಕೆ ಹದವನ್ನೂ, ಸಾಣೆಯನ್ನೂ ಮಾಡಲಾಗಿದೆ.


“ ‘ಆದ್ದರಿಂದ ನೀನು ಮಾಡಿದ ಈ ದುರ್ಲಾಭದಿಂದಲೂ, ನಿನ್ನಲ್ಲಿರುವ ನಿನ್ನ ರಕ್ತಾಪರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು