Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:2 - ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖವಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ನೀನು ಯೆರೂಸಲೇಮಿನ ಅಭಿಮುಖನಾಗಿ ಅಲ್ಲಿನ ಪವಿತ್ರ ಸ್ಥಾನಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶ ಕುರಿತು ಪ್ರವಾದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ನೀನು ಜೆರುಸಲೇಮಿಗೆ ಅಭಿಮುಖನಾಗಿ, ಅಲ್ಲಿನ ಪವಿತ್ರಸ್ಥಳಗಳ ಕಡೆಗೆ ಮಾತಾಡುತ್ತಾ , ಇಸ್ರಯೇಲ್ ನಾಡಿನ ಪ್ರಸ್ತಾಪವನ್ನೆತ್ತಿ ಆ ನಾಡಿಗೆ ಹೀಗೆ ಪ್ರವಾದಿಸು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ನೀನು ಯೆರೂಸಲೇವಿುಗೆ ಅಭಿಮುಖನಾಗಿ ಅಲ್ಲಿನ ಪವಿತ್ರಸ್ಥಾನಗಳ ಕಡೆಗೆ ಮಾತಾಡುತ್ತಾ ಇಸ್ರಾಯೇಲ್ ದೇಶದ ಪ್ರಸ್ತಾಪವನ್ನೆತ್ತಿ ಆ ದೇಶಕ್ಕೆ ಹೀಗೆ ಸಾರಿಹೇಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ಜೆರುಸಲೇಮಿನ ಕಡೆಗೆ ನೋಡಿ ಅವರ ಪವಿತ್ರ ಸ್ಥಳಗಳಿಗೆ ವಿರುದ್ಧವಾಗಿ ಹೇಳು. ನನ್ನ ಪರವಾಗಿ ಇಸ್ರೇಲ್ ದೇಶದ ವಿರುದ್ಧವಾಗಿ ಮಾತನಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:2
21 ತಿಳಿವುಗಳ ಹೋಲಿಕೆ  

“ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ, ದಕ್ಷಿಣದ ಕಡೆಗೆ ಮಾತನಾಡು. ದಕ್ಷಿಣ ಬಯಲು ಮರುಭೂಮಿಗೆ ವಿರೋಧವಾಗಿ ಪ್ರವಾದಿಸು.


ನೀನು ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು. ನಿನ್ನ ಭುಜವನ್ನು ನೀನು ಬರಿದುಮಾಡಿಕೊಂಡು, ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು.


“ಮನುಷ್ಯಪುತ್ರನೇ, ನೀನು ಸೀದೋನಿಗೆ ಅಭಿಮುಖವಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.


“ಮನುಷ್ಯಪುತ್ರನೇ, ನೀನು ಅಮ್ಮೋನ್ಯರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು.


ನಾನು ಬಾಯಿ ತೆರೆಯುವಾಗ ಸುವಾರ್ತೆಯ ರಹಸ್ಯವನ್ನು ಧೈರ್ಯವಾಗಿ ತಿಳಿಯಪಡಿಸುವುದಕ್ಕೆ ಮಾತನ್ನು ನನಗೆ ದಯಪಾಲಿಸಬೇಕೆಂದು ಪ್ರಾರ್ಥಿಸಿರಿ.


ಒಬ್ಬ ಸುಳ್ಳುಗಾರನೂ ಮೋಸಗಾರನೂ ಬಂದು, ‘ನಿನಗೆ ದ್ರಾಕ್ಷಾರಸವೂ ಮದ್ಯಪಾನವೂ ಯಥೇಚ್ಛವಾಗಿ ದೊರೆಯುವುದೆಂದು ನಾನು ಪ್ರವಾದಿಸುವೆನು,’ ಎಂದು ಹೇಳಿದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.


“ಪ್ರವಾದಿಸಬೇಡ, ಈ ಸಂಗತಿಗಳ ಬಗ್ಗೆ ಪ್ರವಾದನೆ ಹೇಳಬೇಡ. ಅವಮಾನ ನಮ್ಮ ಮೇಲೆ ಬರುವುದೇ ಇಲ್ಲ,” ಎಂದು ಅವರ ಪ್ರವಾದಿಗಳು ಹೇಳುತ್ತಾರೆ.


ಹೀಗಿರುವುದರಿಂದ ನೀನು ಈಗ ಯೆಹೋವ ದೇವರ ವಾಕ್ಯವನ್ನು ಕೇಳು: ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ, ಇಸಾಕನ ಮನೆತನಕ್ಕೆ ವಿರೋಧವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವೆಯಲ್ಲಾ.


“ಓ ಮನುಷ್ಯಪುತ್ರನೇ, ರೋಷ್, ಮೆಷೆಕ್ ಮತ್ತು ತೂಬಲ್‌ನ ಮುಖ್ಯ ರಾಜಕುಮಾರನಾದ ಮಾಗೋಗ್ ದೇಶದ ಗೋಗನ ಕಡೆಗೆ ನಿನ್ನ ಮುಖವನ್ನು ತಿರುಗಿಸು; ಮತ್ತು ಅವನ ವಿರುದ್ಧವಾಗಿ ಪ್ರವಾದಿಸು.


“ನರಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು. ಹೇಳು, ‘ಇಸ್ರಾಯೇಲ್ ಪರ್ವತಗಳೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ.


“ನರಪುತ್ರನೇ, ನೀನು ಈಜಿಪ್ಟಿನ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನಿಗೂ ಸಮಸ್ತ ಈಜಿಪ್ಟಿಗೂ ವಿರೋಧವಾಗಿ ಪ್ರವಾದಿಸು.


“ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು, ಅವುಗಳಿಗೆ ವಿರೋಧವಾಗಿ ಹೀಗೆ ಪ್ರವಾದಿಸು,


ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು, ಅದನ್ನು ನಿನಗೂ, ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ, ಆ ಪಟ್ಟಣದ ಮೇಲೆ ದೃಷ್ಟಿಯಿಡು, ಅದು ಮುತ್ತಲಾಗುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಾಯೇಲಿನ ಜನರಿಗೆ ಒಂದು ಸಂಕೇತ.


ನನ್ನ ಬೋಧನೆ ಮಳೆಯಂತೆ ಸುರಿಯುವುದು. ನನ್ನ ಮಾತು ಮಂಜಿನಂತೆಯೂ, ಹುಲ್ಲಿನ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವುದು.


ನನ್ನ ಮಾತಿನ ಮೇಲೆ ಅವರು ಬೇರೆ ಮಾತನಾಡುತ್ತಿರಲಿಲ್ಲ; ನನ್ನ ನುಡಿ ಅವರ ಕಿವಿಗೆ ಬೀಳುತ್ತಿತ್ತು.


ಯೆಹೋವ ದೇವರ ವಾಕ್ಯವು ನನಗೆ ಬಂದಿತು,


ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು, ‘ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಉನ್ನತವಾದ ಸ್ಥಳವನ್ನೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.


ಆದ್ದರಿಂದ ಮನುಷ್ಯಪುತ್ರನೇ, ಅವರಿಗೆ ವಿರೋಧವಾಗಿ ಪ್ರವಾದಿಸು.”


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಆ ರಕ್ತಾಪರಾಧವುಳ್ಳ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು