Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:21 - ಕನ್ನಡ ಸಮಕಾಲಿಕ ಅನುವಾದ

21 ಬಾಬಿಲೋನಿನ ಅರಸನು, ಮಾರ್ಗವು ಒಡೆಯುವ ಸ್ಥಳದಲ್ಲಿ ಶಕುನವನ್ನು ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿದನು; ಮೂರ್ತಿಗಳ ಹತ್ತಿರ ವಿಚಾರಿಸಿದನು; ಅವನು ಹತ್ಯೆ ಮಾಡಿದ ಪ್ರಾಣಿಯ ಯಕೃತ್ತನ್ನು ಪರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮಾರ್ಗ ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಪ್ರಾರಂಭದಲ್ಲಿ ಬಾಬಿಲೋನಿನ ಅರಸ ಶಕುನ ನೋಡಲು ನಿಂತಿರುವನು. ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆ ಕೇಳಿ, ಹಸ್ತರೇಖೆಯನ್ನು ಪರೀಕ್ಷಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮಾರ್ಗವು ಒಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನನೋಡುವದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ ವಿಗ್ರಹಗಳನ್ನು ಪ್ರಶ್ನೆಕೇಳಿ ಕಾಳಿಜವನ್ನು ಪರೀಕ್ಷಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಇದರ ಅರ್ಥವೇನೆಂದರೆ, ರಸ್ತೆಯು ಶಾಖೆಗಳಾಗಿ ಒಡೆಯುವ ಸ್ಥಳದಲ್ಲಿ ಬಾಬಿಲೋನಿನ ರಾಜನು ಶಕುನವನ್ನು ಕೇಳಲು ನಿಂತಿದ್ದಾನೆ. ಅವನು ಕೆಲವು ಬಾಣಗಳನ್ನು ಅಲುಗಾಡಿಸಿದ್ದಾನೆ. ಅವನು ಕೆಲವು ಬಾಣಗಳನ್ನು ಚದರಿಸಿ, ತನ್ನ ವಂಶದ ವಿಗ್ರಹಗಳಿಗೆ ಕೆಲವು ಪ್ರಶ್ನೆಗಳನ್ನು ಕೇಳಿದನು, ಮತ್ತು ತಾನು ಕೊಂದ ಪ್ರಾಣಿಯ ಕಾಳಿಜವನ್ನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:21
22 ತಿಳಿವುಗಳ ಹೋಲಿಕೆ  

ಉಡಿಯಲ್ಲಿ ಚೀಟು ಹಾಕಬಹುದು, ಆದರೆ ಪ್ರತಿ ತೀರ್ಪು ಯೆಹೋವ ದೇವರದ್ದೇ.


ಆಗ ಯಾಜಕನು ಸಂತೋಷಪಟ್ಟು ಏಫೋದನ್ನೂ, ಪ್ರತಿಮೆಗಳನ್ನೂ, ಕೆತ್ತಿದ ವಿಗ್ರಹವನ್ನೂ ತೆಗೆದುಕೊಂಡು ಜನರ ಮಧ್ಯದಲ್ಲಿ ಹೋದನು.


ಈ ಮೀಕ ಎಂಬವನಿಗೆ ದೇವರ ಮನೆ ಇದ್ದುದರಿಂದ ಅವನು ಒಂದು ಏಫೋದನ್ನೂ, ಪ್ರತಿಮೆಗಳನ್ನೂ ಮಾಡಿ, ತನ್ನ ಪುತ್ರರಲ್ಲಿ ಒಬ್ಬನನ್ನು ಯಾಜಕ ಸೇವೆಗೆ ಪ್ರತಿಷ್ಠೆ ಮಾಡಿದನು.


ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಹಾರೈಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದನು.


ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವುದಕ್ಕೆ ಹೋಗಿದ್ದನು. ಆಗ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.


ಒಂದು ದಿನ ನಾವು ಪ್ರಾರ್ಥನೆಯ ಸ್ಥಳಕ್ಕೆ ಹೋಗುತ್ತಿದ್ದೆವು, ಆಗ ಭವಿಷ್ಯ ಹೇಳುವ ದುರಾತ್ಮವುಳ್ಳ ದಾಸಿಯೊಬ್ಬಳು ನಮ್ಮನ್ನು ಭೇಟಿಯಾದಳು. ಭವಿಷ್ಯ ಹೇಳುವುದರಿಂದ ಆಕೆ ತನ್ನ ಯಜಮಾನನಿಗೆ ಬಹಳ ಹಣ ಸಂಪಾದಿಸುತ್ತಿದ್ದಳು.


ವಿಗ್ರಹಗಳು ವ್ಯರ್ಥವಾಗಿ ಮಾತನಾಡುವವು. ಶಕುನಗಾರರು ಸುಳ್ಳು ದರ್ಶನವನ್ನು ಕಾಣುವರು. ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ. ವ್ಯರ್ಥವಾಗಿ ಆದರಿಸುತ್ತಾರೆ, ಆದ್ದರಿಂದ ಕುರಿಗಳಂತೆ ಚದರಿದ್ದಾರೆ, ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.


ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ. ಹಿಡಿದ ಕೋಲಿನಿಂದ ಉತ್ತರ ಪಡೆಯಲು ಯತ್ನಿಸುತ್ತಾರೆ. ಏಕೆಂದರೆ ವ್ಯಭಿಚಾರದ ಆತ್ಮವು ಅವರನ್ನು ತಪ್ಪಿಸಿಬಿಟ್ಟಿದೆ. ಅವರು ತಮ್ಮ ದೇವರಿಗೆ ಅಪನಂಬಿಗಸ್ತರಾಗಿ ದ್ರೋಹ ಮಾಡಿದ್ದಾರೆ.


ಇಸ್ರಾಯೇಲರು ಬಹಳ ದಿವಸಗಳವರೆಗೆ ಅರಸನಿಲ್ಲದೆ, ರಾಜಕುಮಾರನಿಲ್ಲದೆ, ಬಲಿ ಇಲ್ಲದೆ, ಪವಿತ್ರ ಕಲ್ಲುಗಳಿಲ್ಲದೆ, ಏಫೋದ್ ಇಲ್ಲದೆ ಮತ್ತು ವಿಗ್ರಹಗಳು ಇಲ್ಲದೆ ಇರುವರು.


ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.


ಅರಸನ ತುಟಿಗಳಲ್ಲಿ ದೈವೋಕ್ತಿ. ನ್ಯಾಯತೀರ್ಪಿನಲ್ಲಿ ಅವನ ಬಾಯಿಯು ದೋಷ ಮಾಡುವುದಿಲ್ಲ.


ಇದಲ್ಲದೆ ಯಾಜಕನಾದ ಹಿಲ್ಕೀಯನು ಯೆಹೋವ ದೇವರ ಆಲಯದಲ್ಲಿ ಕಂಡುಕೊಂಡ ಗ್ರಂಥದಲ್ಲಿ ಬರೆದಿದ್ದ ನಿಯಮದ ಮಾತುಗಳನ್ನು ಯೋಷೀಯನು ಈಡೇರಿಸುವಂತೆ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನಲ್ಲಿಯೂ ಭೂತಪ್ರೇತಗಳನ್ನು ವಿಚಾರಿಸುವವರನ್ನೂ, ಮಂತ್ರಗಾರರನ್ನೂ, ಮನೆದೇವರುಗಳನ್ನೂ, ವಿಗ್ರಹಗಳನ್ನೂ, ಸಮಸ್ತ ಅಸಹ್ಯಕರವಾದವುಗಳನ್ನೂ ತೆಗೆದುಹಾಕಿಬಿಟ್ಟನು.


ಏಕೆಂದರೆ ಪ್ರತಿಭಟಿಸುವುದು ಮಂತ್ರತಂತ್ರಗಳಷ್ಟು ಪಾಪವಾಗಿದೆ. ಹಟಮಾರಿತನವು ದುಷ್ಟತನಕ್ಕೂ ವಿಗ್ರಹಾರಾಧನೆಗೂ ಸಮಾನವಾಗಿದೆ. ನೀನು ಯೆಹೋವ ದೇವರ ವಾಕ್ಯವನ್ನು ಅಲಕ್ಷ್ಯಮಾಡಿದ್ದರಿಂದ ಅವರು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕರಿಸಿಬಿಟ್ಟಿದ್ದಾರೆ.”


ಅವನು, “ನಾನು ಮಾಡಿಕೊಂಡ ನನ್ನ ದೇವರುಗಳನ್ನೂ, ಯಾಜಕನನ್ನೂ ತೆಗೆದುಕೊಂಡು ಹೋದಿರಿ. ಇನ್ನು ನನಗೆ ಏನಿದೆ? ನೀವು ನನ್ನನ್ನು, ‘ನಿನಗೆ ಏನಾಯಿತೆಂದು ಕೇಳುವುದೇನು?’ ಎಂದನು.”


ಅವರು ಮೀಕನ ಮನೆಗೆ ಬಂದು, ಏಫೋದನ್ನೂ, ಪ್ರತಿಮೆಗಳನ್ನೂ, ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ತೆಗೆದುಕೊಂಡಾಗ, ಯಾಜಕನು ಅವರಿಗೆ, “ನೀವು ಏನು ಮಾಡುತ್ತೀರಿ?” ಎಂದನು.


ಆಗ ಲಯಿಷಿನ ದೇಶವನ್ನು ಸಂಚರಿಸಿ ನೋಡಿ ಬಂದ ಆ ಐದು ಮಂದಿ ಜನರು ತಮ್ಮ ಸಹೋದರರಿಗೆ ಉತ್ತರಕೊಟ್ಟು, “ಈ ಮನೆಗಳಲ್ಲಿ ಏಫೋದೂ, ಪ್ರತಿಮೆಗಳೂ, ಕೆತ್ತಿದ ವಿಗ್ರಹವೂ, ಎರಕದ ವಿಗ್ರಹವೂ ಉಂಟೆಂದು ನಿಮಗೆ ಗೊತ್ತುಂಟೋ? ನೀವು ಈಗ ಮಾಡಬೇಕಾದದ್ದೇನೆಂದು ತಿಳಿದುಕೊಳ್ಳಿರಿ,” ಎಂದರು.


ತನ್ನ ಮಗನನ್ನು ಇಲ್ಲವೆ ಮಗಳನ್ನು ಆಹುತಿ ಕೊಡುವವನೂ, ಕಣಿ ಹೇಳುವವನೂ, ಶಕುನ ನೋಡುವವನೂ, ಸರ್ಪ ಮಂತ್ರದವನೂ, ಮಾಟಗಾರನೂ,


ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿಯ ತುದಿಗೆ ಕರೆದುಕೊಂಡು ಹೋದನು.


ನಿಶ್ಚಯವಾಗಿ ಯಾಕೋಬನಲ್ಲಿ ಕಣಿಕೇಳುವದು ಇಲ್ಲ. ಇಸ್ರಾಯೇಲರಲ್ಲಿ ಶಕುನನೋಡುವದು ಇಲ್ಲ. ‘ನೋಡಿರಿ, ದೇವರು ಎಂತಹ ಮಹತ್ಕಾರ್ಯವನ್ನು ಮಾಡಿದ್ದಾರೆ,’ ಎಂದು ಯಾಕೋಬನ ವಿಷಯವಾಗಿಯೂ, ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.


ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಗಳನ್ನು ತೆಗೆದುಕೊಂಡು ಹೋದರು. ಅವರು ಬಿಳಾಮನ ಬಳಿಗೆ ಬಂದು, ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.


ಆದ್ದರಿಂದ ನೀವು ಮುಖ್ಯ ಬೀದಿಗಳಿಗೆ ಹೊರಟುಹೋಗಿ ಅಲ್ಲಿ ಕಂಡವರನ್ನೆಲ್ಲಾ ಮದುವೆಗೆ ಆಹ್ವಾನಿಸಿರಿ,’ ಎಂದನು.


ಆದರೆ ದೇಶವನ್ನು ಸಂಚರಿಸಿ ನೋಡಿ ಬಂದ ಆ ಐದು ಮಂದಿ ಒಳಗೆ ಹೋಗಿ, ಕೆತ್ತಿದ ವಿಗ್ರಹವನ್ನೂ, ಏಫೋದನ್ನೂ, ಪ್ರತಿಮೆಗಳನ್ನೂ, ಎರಕದ ವಿಗ್ರಹವನ್ನೂ ತೆಗೆದುಕೊಂಡರು. ಆಗ ಯಾಜಕನೂ, ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಬಾಗಿಲ ಬಳಿಯಲ್ಲಿ ನಿಂತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು