ಯೆಹೆಜ್ಕೇಲನು 21:24 - ಕನ್ನಡ ಸಮಕಾಲಿಕ ಅನುವಾದ24 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಿಮ್ಮ ದ್ರೋಹಗಳು ಪ್ರಕಟವಾಗಿ, ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ, ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಗೆ ಸಿಕ್ಕಿ ಬೀಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಅಪರಾಧಗಳು ಬಯಲಿಗೆ ಬಂದು, ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ತಲೆದೋರಿ, ನೀವು ನಿಮ್ಮ ಅಧರ್ಮವನ್ನು ನನ್ನ ಜ್ಞಾಪಕಕ್ಕೆ ತಂದು, ಪಾಪಿಗಳಾಗಿ ನನ್ನ ನೆನಪಿಗೆ ತಂದಿರುವಿರಿ. ಆದುದರಿಂದ ಶತ್ರುವಿನ ಕೈಗೆ ಸಿಕ್ಕಿ ಬೀಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಿಮ್ಮ ಅಪರಾಧಗಳು ಬೆಳಕಿಗೆ ಬಂದು, ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ಪ್ರತ್ಯಕ್ಷವಾಗಿ, ನೀವು ನಿಮ್ಮ ಅಧರ್ಮವನ್ನು ನನ್ನ ನೆನಪಿಗೆ ತಂದಿರುವಿರಿ; ಆದಕಾರಣ ಶತ್ರುವಿನ ಕೈಗೆ ಸಿಕ್ಕಿಬೀಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಅಪರಾಧಗಳು ಬೈಲಿಗೆ ಬಂದು ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ತಲೆದೋರಿ ನೀವು ನಿಮ್ಮ ಅಧರ್ಮವನ್ನು ನನ್ನ ಜ್ಞಾಪಕಕ್ಕೆ ತಂದು [ಪಾಪಿಗಳಾಗಿ] ನನ್ನ ನೆನಪಿಗೆ ಬಂದಿರಾದ ಕಾರಣ ಶತ್ರುವಿನ ಕೈಗೆ ಸಿಕ್ಕಿಬೀಳುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನೀನು ಅನೇಕ ದುಷ್ಕೃತ್ಯಗಳನ್ನು ಮಾಡಿರುವೆ. ನಿನ್ನ ಪಾಪಗಳು ಬಹಳ ಸ್ಪಷ್ಟವಾಗಿವೆ. ನೀನು ದೋಷಿ ಎಂಬುದನ್ನು ನಾನು ನೆನಪುಮಾಡಿಕೊಳ್ಳುವಂತೆ ಮಾಡುವೆ. ವೈರಿಯು ನಿನ್ನನ್ನು ಹಿಡಿಯುವನು. ಅಧ್ಯಾಯವನ್ನು ನೋಡಿ |