Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:26 - ಕನ್ನಡ ಸಮಕಾಲಿಕ ಅನುವಾದ

26 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಮೊದಲಿದ್ದ ಹಾಗೆಯೇ ಇರುವುದಿಲ್ಲ; ತಗ್ಗಿಸಿಕೊಂಡವನನ್ನು ಹೆಚ್ಚಿಸಿ, ಹೆಚ್ಚಿಸಿಕೊಂಡವನನ್ನು ತಗ್ಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಮುಂಡಾಸವನ್ನು ಕಿತ್ತುಬಿಡು! ಕಿರೀಟವನ್ನು ತೆಗೆದುಹಾಕು! ಅದು ಹಾಗೆಯೇ ಇರುವುದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ, ಹೆಚ್ಚಿಸಲ್ಪಟ್ಟವನನ್ನು ತಗ್ಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿನ್ನ ರುಮಾಲನ್ನು ಕಿತ್ತುಬಿಡು, ಕಿರೀಟವನ್ನು ತೆಗೆದುಹಾಕು. ಎಲ್ಲವೂ ಮೊದಲಿದ್ದ ಹಾಗೆ ಇರುವುದಿಲ್ಲ; ಕೆಳಗಿರುವುದನ್ನು ಮೇಲೆ ಸೇರಿಸಲಾಗುವುದು, ಮೇಲಿರುವುದನ್ನು ಕೆಳಕ್ಕಿಳಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಮುಂಡಾಸವನ್ನು ಕಿತ್ತುಬಿಡು! ಕಿರೀಟವನ್ನು ಎತ್ತಿಹಾಕು! ಎಲ್ಲವೂ ವ್ಯತ್ಯಸ್ತವಾಗಲಿ; ಕೆಳಗಿನದನ್ನು ಮೇಲೆ ಮಾಡು, ಮೇಲಿನದನ್ನು ಕೆಳಗೆ ಮಾಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಿನ್ನ ಮುಂಡಾಸವನ್ನು ತೆಗೆ! ನಿನ್ನ ಕಿರೀಟವನ್ನು ತೆಗೆ! ಈಗ ಇರುವಂತೆಯೇ ಸಂಗತಿಗಳು ಇರುವುದಿಲ್ಲ. ಮುಖ್ಯಾಧಿಕಾರಿಗಳು ತಗ್ಗಿಸಲ್ಪಡುವರು. ಈಗ ಸಾಧಾರಣ ವ್ಯಕ್ತಿಗಳಾಗಿರುವವರು ಪ್ರಮುಖ ನಾಯಕರುಗಳಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:26
18 ತಿಳಿವುಗಳ ಹೋಲಿಕೆ  

ಯೆಹೋವ ದೇವರಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರ ಪಡಿಸಿ, ಹಸುರಾಗಿರುವುದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ, ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವುದು. “ ‘ಯೆಹೋವ ದೇವರಾದ ನಾನೇ ಮಾತನಾಡಿ, ಅದನ್ನು ನಡೆಸಿದ್ದೇನೆ.’ ”


ಆದರೆ ದೇವರು ನ್ಯಾಯತೀರಿಸುವವರಾಗಿದ್ದಾರೆ. ದೇವರು ಒಬ್ಬನನ್ನು ತಗ್ಗಿಸುತ್ತಾರೆ, ಒಬ್ಬನನ್ನು ಎತ್ತುತ್ತಾರೆ.


ರಾಜನಿಗೂ ರಾಜಮಾತೆಗೂ ಹೀಗೆ ಹೇಳಿರಿ, “ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ.”


ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗೆ ದಬ್ಬಿ, ದೀನರನ್ನು ಮೇಲಕ್ಕೆ ಎತ್ತಿದ್ದಾರೆ.


ನಿನ್ನ ಮೂಗಿಗೆ ಮೂಗುತಿಯನ್ನೂ, ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ, ನಿನ್ನ ತಲೆಯ ಮೇಲೆ ಸುಂದರ ಕಿರೀಟವನ್ನೂ ಇಟ್ಟೆನು.


ಕಿರೀಟವು ನಮ್ಮ ತಲೆಯ ಮೇಲಿನಿಂದ ಬಿದ್ದುಹೋಯಿತು. ಅಯ್ಯೋ, ನಾವು ಪಾಪಮಾಡಿದ್ದೇವೆ.


ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿವಸದಲ್ಲಿ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು.


ಅವರು ಅರಸನನ್ನು ಹಿಡಿದುಕೊಂಡರು. ರಿಬ್ಲದಲ್ಲಿರುವ ಬಾಬಿಲೋನಿನ ಅರಸನ ಬಳಿಗೆ ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.


ಕರ್ತದೇವರ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆಗ ಅವರು ನಿಮ್ಮನ್ನು ಮೇಲಕ್ಕೆತ್ತುವರು.


ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ತಲತಲಾಂತರಕ್ಕೂ ಇರುವುದಿಲ್ಲ.


ಈ ಮೀಕ ಎಂಬವನಿಗೆ ದೇವರ ಮನೆ ಇದ್ದುದರಿಂದ ಅವನು ಒಂದು ಏಫೋದನ್ನೂ, ಪ್ರತಿಮೆಗಳನ್ನೂ ಮಾಡಿ, ತನ್ನ ಪುತ್ರರಲ್ಲಿ ಒಬ್ಬನನ್ನು ಯಾಜಕ ಸೇವೆಗೆ ಪ್ರತಿಷ್ಠೆ ಮಾಡಿದನು.


ನಿನ್ನ ಮಾಟಗಳ ಸಂಗಡ ನಿಂತುಕೋ. ನಿನ್ನ ಬಾಲ್ಯಾರಭ್ಯ ಬೇಸತ್ತು, ಅಭ್ಯಾಸಿಸಿರುವ ನಿನ್ನ ಮಂತ್ರ ತಂತ್ರಗಳನ್ನೂ, ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು. ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ಭಯ ಉಂಟಾದೀತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು