ಯೆಹೆಜ್ಕೇಲನು 21:29 - ಕನ್ನಡ ಸಮಕಾಲಿಕ ಅನುವಾದ29 ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ, ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಹೀಗೆ ನಿನ್ನನ್ನು ಹತರಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ. ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅಮ್ಮೋನೇ, ಪ್ರವಾದಿಗಳೆಂದು ಹೇಳಿಕೊಳ್ಳುತ್ತಿರುವ ನಿನ್ನವರು ದರ್ಶನವನ್ನು ನೋಡಿದೆವು ಎಂದು ಸುಳ್ಳು ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಸಮಯವು ಹತ್ತಿರವಾಗಿ, ಅಪರಾಧದ ಕಡೆಗಾಲವು ಸಂಭವಿಸಿ, ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿ ಬೀಳುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅಮ್ಮೋನೇ, ನಿನ್ನ ಜೋಯಿಸರು ಮಿಥ್ಯೆಯನ್ನು ಕಲ್ಪಿಸಿಕೊಂಡು ಸುಳ್ಳುಸುಳ್ಳಾಗಿ ಕಣಿ ಹೇಳುತ್ತಿದ್ದಾರೆ. ಸಮಯವು ಸಮೀಪಿಸಿ ಅಪರಾಧದ ಕಡೆಗಾಲವು ಸಂಭವಿಸಿ ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು; ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಬೀಳುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 [ಅಮ್ಮೋನೇ,] ನಿನ್ನ ಜೋಯಿಸರು ವಿುಥ್ಯೆಯನ್ನು ಸಾಕ್ಷಾತ್ಕರಿಸಿ ಸುಳ್ಳುಸುಳ್ಳಾಗಿ ಕಣಿ ಹೇಳುತ್ತಿದ್ದಾರೆ. ಸಮಯವು ಹತ್ತರಿಸಿ ಅಪರಾಧದ ಕಡೆಗಾಲವು ಸಂಭವಿಸಿ ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿಹೋಗುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “‘ಓ ಖಡ್ಗವೇ, ನಿನ್ನ ಕುರಿತು ಅವರು ಸುಳ್ಳುದರ್ಶನಗಳನ್ನು ಕಾಣುವರು. ನಿನ್ನ ಕುರಿತು ಅವರು ಹೇಳುವ ಕಣಿಯು ದಾರಿ ತಪ್ಪಿಸುತ್ತದೆ. ಅದು ಕೇವಲ ಸುಳ್ಳುಗಳ ಕಂತೆ. ಓ ಖಡ್ಗವೇ, ನಿನ್ನನ್ನು ದುಷ್ಟರ ಕುತ್ತಿಗೆಗಳ ಮೇಲೆ ಇರಿಸಲಾಗುವುದು. ಬೇಗನೇ ಅವರು ಹೆಣಗಳಾಗಿ ಬೀಳುವರು. ಅವರ ಸಮಯವು ಬಂದಿದೆ. ಇದು ಅವರ ಅಂತ್ಯದಂಡನೆಯ ಸಮಯವಾಗಿದೆ. ಅಧ್ಯಾಯವನ್ನು ನೋಡಿ |