4 ಆಮೇಲೆ ನಾನು ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವುದರಿಂದ ನನ್ನ ಖಡ್ಗವು ದಕ್ಷಿಣದಿಂದ ಮೊದಲುಗೊಂಡು ಉತ್ತರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆಯನ್ನು ಬಿಟ್ಟು ಹೋಗುವುದು.
ದಕ್ಷಿಣದ ಮರುಭೂಮಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರ ವಾಕ್ಯವನ್ನು ಕೇಳು. ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ. ಅದು ನಿನ್ನಲ್ಲಿರುವ ಎಲ್ಲಾ ಹಸಿಮರಗಳನ್ನು ಮತ್ತು ಎಲ್ಲಾ ಒಣ ಮರಗಳನ್ನು ತಿಂದುಬಿಡುವುದು. ಉರಿಯುವ ಜ್ವಾಲೆ ಆರಿಹೋಗುವುದಿಲ್ಲ. ದಕ್ಷಿಣ ಮೊದಲುಗೊಂಡು ಉತ್ತರದವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟುಹೋಗುವುವು.
ಮರುಭೂಮಿಯಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ನಾಶಮಾಡುವವರು ಬಂದಿದ್ದಾರೆ. ಏಕೆಂದರೆ, ಯೆಹೋವ ದೇವರ ಖಡ್ಗವು ದೇಶದ ಒಂದು ಕಡೆಯಿಂದ ದೇಶದ ಇನ್ನೊಂದು ಕಡೆಯವರೆಗೂ ನುಂಗಿಬಿಡುತ್ತದೆ. ಯಾವ ಮನುಷ್ಯನೂ ಸುರಕ್ಷಿತವಾಗಿ ಉಳಿಯುವುದಿಲ್ಲ.
“ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರಿ.’
ಸಂಹರಿಸಲು ಸಾಣೆಹಿಡಿದಿದೆ; ಮಿಂಚುವಂತೆ ಮಸೆಯಲಾಗಿದೆ. “ ‘ಹಾಗಾದರೆ ನನ್ನ ಮಗ ಯೆಹೂದದ ರಾಜದಂಡದಲ್ಲಿ ನಾವು ಸಂತೋಷ ಪಡಬಹುದೋ? ಅಂಥ ಪ್ರತಿಯೊಂದು ಬೆತ್ತವನ್ನೂ ಖಡ್ಗವು ತಿರಸ್ಕರಿಸುತ್ತದೆ.