Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:5 - ಕನ್ನಡ ಸಮಕಾಲಿಕ ಅನುವಾದ

5 ಆಗ ಯೆಹೋವ ದೇವರಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹೊರಗೆ ತೆಗೆದೆನೆಂದು ಜನರೆಲ್ಲರಿಗೂ ತಿಳಿಯುವುದು, ಅದು ಮತ್ತೆ ತಿರುಗಿ ಬರುವುದೇ ಇಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ’ ಎಂಬುದು ಎಲ್ಲಾ ನರಮನುಷ್ಯರಿಗೂ ಗೊತ್ತಾಗುವುದು; ಅದು ಪುನಃ ಒರೆಗೆ ಸೇರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಸರ್ವೇಶ್ವರನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ ಎಂಬುದು ಎಲ್ಲ ನರಮಾನವರಿಗೂ ತಿಳಿಯುವುದು; ಅದು ಪುನಃ ಒರೆಗೆ ಸೇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ ಎಂಬದು ಎಲ್ಲಾ ನರಮನುಷ್ಯರಿಗೂ ಗೊತ್ತಾಗುವದು; ಅದು ಪುನಃ ಒರೆಗೆ ಸೇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ, ಯೆಹೋವನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ತೆಗೆದಿದ್ದೇನೆಂದು ಎಲ್ಲಾ ಜನರಿಗೆ ಗೊತ್ತಾಗುವುದು. ನನ್ನ ಖಡ್ಗವು ತನ್ನ ಕಾರ್ಯಮಾಡದೆ ತಿರುಗಿ ಒರೆಯೊಳಗೆ ಹೋಗುವದಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:5
14 ತಿಳಿವುಗಳ ಹೋಲಿಕೆ  

“ ‘ಖಡ್ಗವನ್ನು ಒರೆಗೆ ಸೇರಿಸು, ನೀನು ಸೃಷ್ಟಿಯಾದ ಸ್ಥಳದಲ್ಲಿಯೇ ನಿನ್ನ ಪೂರ್ವಜರ ನಾಡಿನಲ್ಲಿಯೇ ನಿನಗೆ ನ್ಯಾಯತೀರಿಸುವೆನು.


ಯೆಹೋವ ದೇವರಿಗೆ ವಿರೋಧವಾಗಿ ಅವರು ಏನೇನು ಯೋಚಿಸಿರುವರೋ, ಅದನ್ನು ಅವರು ಅಂತ್ಯಗೊಳಿಸುವರು. ತೊಂದರೆಯು ಎರಡು ಸಾರಿ ಏಳದು.


ಯೆಹೋವ ದೇವರಾದ ನಾನೇ ಅದನ್ನು ಹಚ್ಚಿದೆನೆಂದು ಪ್ರತಿಯೊಬ್ಬರೂ ತಿಳಿದುಕೊಳ್ಳುವರು, ಅದು ಆರಿಹೋಗುವುದಿಲ್ಲ.’ ”


ಆತನು ತನ್ನ ಹೃದಯದ ಆಲೋಚನೆಗಳನ್ನು ನಡೆಸಿ ತೀರಿಸುವವರೆಗೂ ಯೆಹೋವ ದೇವರ ಕೋಪವು ತಿರುಗುವುದಿಲ್ಲ. ಅಂತ್ಯ ದಿವಸಗಳಲ್ಲಿ ನೀವು ಅದನ್ನು ಸಂಪೂರ್ಣವಾಗಿ ಗ್ರಹಿಸುವಿರಿ.


ಏಕೆಂದರೆ ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ. ನಾನು ಆರಂಭಿಸಿದ ಹಾಗೆ ಅಂತ್ಯವನ್ನು ಮಾಡುವೆನು.


ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.


ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ. ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ. ಅದು ಹಿಂದಿರುಗದು. ಪ್ರತಿಯೊಬ್ಬರು ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ಪ್ರತಿಜ್ಞೆ ಮಾಡುವುದು.


ಆಕಾಶದ ಕಡೆ ನನ್ನ ಕೈಯೆತ್ತಿ, ನಾನು ನಿತ್ಯವಾಗಿ ಬದುಕುವಾತನು ಎಂದು ಹೇಳುತ್ತೇನೆ.


“ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರಿ.’


“ಆದ್ದರಿಂದ ಮನುಷ್ಯಪುತ್ರನೇ, ನರಳಾಡು! ಮುರಿದ ಹೃದಯ ಮತ್ತು ಕಹಿ ದುಃಖದಿಂದ ಅವರ ಮುಂದೆ ನರಳಾಡು.


“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನ್ನು ಒಗಟಾಗಿ ಹೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು