ಯೆಹೆಜ್ಕೇಲನು 21:6 - ಕನ್ನಡ ಸಮಕಾಲಿಕ ಅನುವಾದ6 “ಆದ್ದರಿಂದ ಮನುಷ್ಯಪುತ್ರನೇ, ನರಳಾಡು! ಮುರಿದ ಹೃದಯ ಮತ್ತು ಕಹಿ ದುಃಖದಿಂದ ಅವರ ಮುಂದೆ ನರಳಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವರು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಹೃದಯ ಒಡೆದ ಮನುಷ್ಯನು ದುಃಖದಿಂದಿರುವಾಗ ಅಳುವ ಶಬ್ದವನ್ನು ಮಾಡು. ಈ ಶಬ್ದವನ್ನು ಜನರ ಮುಂದೆ ಮಾಡು. ಅಧ್ಯಾಯವನ್ನು ನೋಡಿ |
‘ನೀನು ಏಕೆ ನರಳಾಡುತ್ತೀ?’ ಎಂದು ಅವರು ನಿನಗೆ ಕೇಳಿದಾಗ, ನೀನು ಹೇಳಬೇಕಾದದ್ದೇನೆಂದರೆ, ‘ಆ ಸುದ್ದಿಯ ನಿಮಿತ್ತವೇ ಅದು ಬರುವುದು. ಏಕೆಂದರೆ ಆಗ ಹೃದಯಗಳೆಲ್ಲಾ ಕರಗುವುವು. ಕೈಗಳೆಲ್ಲಾ ನಿತ್ರಾಣವಾಗುವುವು. ಪ್ರತಿಯೊಂದು ಆತ್ಮವು ಕುಂದುವದು. ಎಲ್ಲಾ ಮೊಣಕಾಲುಗಳು ನೀರಿನಂತೆ ತೇವವಾಗಿರುತ್ತವೆ. ಅದು ಬರುತ್ತದೆ, ಅದು ತರಲಾಗುತ್ತದೆ,’ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”