ಯೆಹೆಜ್ಕೇಲನು 22:11 - ಕನ್ನಡ ಸಮಕಾಲಿಕ ಅನುವಾದ11 ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ಅಸಹ್ಯಕರವಾದದ್ದನ್ನು ಮಾಡಿದ್ದಾನೆ; ಮತ್ತೊಬ್ಬನು ಅತ್ಯಾಚಾರದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಮಾನಭಂಗಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯಲ್ಲಿ ದುರಾಚಾರ ನಡಿಸಿದ್ದಾನೆ; ಇನ್ನೊಬ್ಬನು ಅತ್ಯಾಚಾರ ಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯೊಡನೆ ದುರಾಚಾರ ನಡೆಸಿದ್ದಾನೆ; ಇನ್ನೊಬ್ಬನು ಅತ್ಯಾಚಾರಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯಲ್ಲಿ ದುರಾಚಾರ ನಡಿಸಿದ್ದಾನೆ; ಇನ್ನೊಬ್ಬನು ಅಕೃತ್ಯಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನವನ್ನು ಭಂಗಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಇಂತಹ ಪಾಪಗಳನ್ನು ತಮ್ಮ ನೆರೆಯವನ ಹೆಂಡತಿಯೊಂದಿಗೆ ನಡಿಸುತ್ತಾರೆ. ಒಬ್ಬನು ತನ್ನ ಸ್ವಂತ ಸೊಸೆಯೊಂದಿಗೆ ಮಲಗಿ ಆಕೆಯನ್ನು ಅಶುದ್ಧಳನ್ನಾಗಿ ಮಾಡಿದನು. ಮತ್ತೊಬ್ಬನು ತನ್ನ ತಂದೆಯ ಮಗಳು, ತನ್ನ ತಂಗಿಯನ್ನೇ ಬಲವಂತದಿಂದ ಕೆಡಿಸಿರುತ್ತಾನೆ. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.