Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:12 - ಕನ್ನಡ ಸಮಕಾಲಿಕ ಅನುವಾದ

12 ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚ ತೆಗೆದುಕೊಂಡಿದ್ದಾರೆ. ಬಡ್ಡಿಯನ್ನು ಲಾಭವನ್ನೂ ತೆಗೆದುಕೊಂಡಿದ್ದಾರೆ. ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭ ಮಾಡಿಕೊಂಡಿದ್ದಾರೆ. ನನ್ನನ್ನು ಮರೆತುಬಿಟ್ಟಿದ್ದಾರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನಿನ್ನವರು ರಕ್ತ ಸುರಿಸುವುದಕ್ಕೆ ಲಂಚಪಡೆದಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ಸುಲಿಗೆಮಾಡಿ, ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನವರು ರಕ್ತಸುರಿಸುವದಕ್ಕೆ ಲಂಚತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ ದೋಚಿಕೊಂಡು ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜೆರುಸಲೇಮಿನಲ್ಲಿ ನೀವು ಕೊಲೆ ಮಾಡುವದಕ್ಕಾಗಿ ಹಣ ತೆಗೆದುಕೊಳ್ಳುತ್ತೀರಿ. ಸಾಲಕೊಟ್ಟು ಅದಕ್ಕೆ ಬಡ್ಡಿ ತೆಗೆದುಕೊಳ್ಳುತ್ತೀರಿ. ಸ್ವಲ್ಪ ಹಣ ಮಾಡುವದಕ್ಕಾಗಿ ನಿಮ್ಮ ನೆರೆಯವನನ್ನೆ ಮೋಸ ಮಾಡುತ್ತೀರಿ. ನನ್ನನ್ನು ನೀವು ಮರೆತುಬಿಟ್ಟಿರುವಿರಿ.’” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:12
40 ತಿಳಿವುಗಳ ಹೋಲಿಕೆ  

“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನಿನ ಮೇಲೆ ಮರೆಮಾಡಿದ ಮೇಲೆ ನೀನು ನಿನ್ನ ದುಷ್ಕರ್ಮವನ್ನೂ ವ್ಯಭಿಚಾರದ ಪ್ರತಿಫಲವನ್ನೂ ಅನುಭವಿಸಲೇಬೇಕು.”


ಅವರು, “ನಿರಪರಾಧಿಯನ್ನು ಕೊಲ್ಲಲು ಲಂಚ ತೆಗೆದುಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭ ಪಡೆಯುವವನು ಆಗಿದ್ದರೆ, ಅವನು ಬದುಕುವನೋ? ಅವನು ಬದುಕುವುದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿದ್ದರಿಂದ ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.


ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯದಿಂದ ತನ್ನ ಕೈಯನ್ನು ಹಿಂತೆಗೆದು ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


ಯುವತಿಯು ತನ್ನ ಆಭರಣಗಳನ್ನೂ ಇಲ್ಲವೆ ಮದಲಗಿತ್ತಿ ತನ್ನ ಒಡ್ಯಾಣವನ್ನು ಮರೆತುಬಿಡುವಳೋ? ಆದರೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.


ಅವರು ತಮ್ಮನ್ನು ರಕ್ಷಿಸಿದ ದೇವರನ್ನು ಬೇಗ ಮರೆತುಬಿಟ್ಟರು. ಹೌದು, ಈಜಿಪ್ಟ್ ದೇಶದಲ್ಲಿ ಮಹತ್ಕಾರ್ಯಗಳನ್ನೂ,


ಅವರು ಬಡವರಿಗೆ ಸಾಲ ಕೊಟ್ಟು ಬಡ್ಡಿಕೇಳದವರೂ; ನಿರಪರಾಧಿಯ ಕೇಡಿಗಾಗಿ ಲಂಚ ತೆಗೆದುಕೊಳ್ಳದವರೂ ಆಗಿರಬೇಕು. ಈ ರೀತಿಯಾಗಿ ಬಾಳುವವರು ಎಂದಿಗೂ ಕದಲುವುದಿಲ್ಲ.


ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವನ್ನಾಗಲಿ, ಬೇರೆ ಯಾವುದನ್ನಾಗಲಿ ಬಡ್ಡಿಗೆ ಕೊಡಬಾರದು.


ನೀವು ನ್ಯಾಯವನ್ನು ಕೆಡಿಸಬಾರದು. ನೀವು ಮುಖದಾಕ್ಷಿಣ್ಯ ನೋಡಬಾರದು, ಇಲ್ಲವೆ ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.


ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ!


ಅವನು ಮದ್ಯಪಾನ ಮಾಡುವವನಾಗಿರಬಾರದು, ಹೊಡೆದಾಡುವವನಾಗಿರಬಾರದು. ಆದರೆ ಸಾತ್ವಿಕನೂ ಕುತರ್ಕ ಮಾಡದವನೂ ಹಣದಾಶೆಯಿಲ್ಲದವನೂ ಆಗಿರಬೇಕು.


ಕಳ್ಳರು, ಲೋಭಿಗಳು, ಕುಡುಕರು, ಬೈಯ್ಯುವವರು, ಸುಲಿಗೆ ಮಾಡುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.


ಆದರೆ ಸಹೋದರಿ ಅಥವಾ ಸಹೋದರನೆನಿಸಿಕೊಂಡವನು ಜಾರನಾದರೂ ಲೋಭಿಯಾದರೂ ವಿಗ್ರಹಾರಾಧಕನಾದರೂ ಪರನಿಂದಕನಾದರೂ ಕುಡುಕನಾದರೂ ಸುಲಿಗೆ ಮಾಡುವವನಾದರೂ ಆಗಿದ್ದರೆ, ಅಂಥವರ ಸಹವಾಸ ಮಾಡಬೇಡಿರಿ. ಅಂಥವರ ಸಂಗಡ ಊಟ ಮಾಡಲೂ ಬೇಡಿರಿ ಎಂದು ಈಗ ಬರೆಯುತ್ತಿದ್ದೇನೆ.


ಆದರೆ ಜಕ್ಕಾಯನು ನಿಂತುಕೊಂಡು ಕರ್ತದೇವರಿಗೆ, “ಸ್ವಾಮೀ, ಇಗೋ, ನನ್ನ ಸ್ವತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಟ್ಟುಬಿಡುತ್ತೇನೆ. ನಾನು ಯಾರಿಗಾದರೂ ಏನಾದರೂ ಮೋಸಮಾಡಿ ಅವರಿಂದ ತೆಗೆದುಕೊಂಡಿದ್ದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಫರಿಸಾಯನು ನಿಂತುಕೊಂಡು: ‘ದೇವರೇ, ಸುಲಿಗೆ ಮಾಡುವವರು, ಅನೀತಿವಂತರು, ವ್ಯಭಿಚಾರಿಗಳು ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ನಾನಲ್ಲ. ಆದ್ದರಿಂದ ನಾನು ನಿನಗೆ ಸ್ತೋತ್ರ ಮಾಡುತ್ತೇನೆ.


ಅದಕ್ಕೆ ಯೋಹಾನನು ಅವರಿಗೆ, “ನಿಮಗೆ ಆಜ್ಞಾಪಿಸಿದ್ದಕ್ಕಿಂತ ಹೆಚ್ಚೇನೂ ವಸೂಲಿ ಮಾಡಬೇಡಿರಿ,” ಎಂದನು.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ, ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಿತು. ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿಕೆಗಳೇ. ಏಕೆಂದರೆ ಅವರು ತಮ್ಮ ಮಾರ್ಗವನ್ನು ಡೊಂಕು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟಿದ್ದರು.


ಹೌದು, ಎಂದಿಗೂ ಸಾಕೆನ್ನದ ಹೊಟ್ಟೆಬಾಕ ನಾಯಿಗಳು ಮತ್ತು ಅವರು ಗ್ರಹಿಕೆ ಇಲ್ಲದ ಕುರುಬರು, ಅವರೆಲ್ಲರೂ ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ, ಪ್ರತಿಯೊಬ್ಬನೂ ತನ್ನ ಲಾಭ ಸಿಕ್ಕುವ ಕಡೆಗೂ ತಿರುಗಿಕೊಳ್ಳುವನು.


ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.


ಅಕ್ರಮ ಲಾಭದ ಬೆನ್ನಟ್ಟಿ ಹೋಗುವವರೆಲ್ಲರ ಗತಿ ಇದೇ. ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವದು.


ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೇಷ್ಠರನ್ನೂ, ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೇ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ, ಅವರಿಗೆ ವಿರೋಧವಾಗಿ ಮಹಾ ಸಭೆಯನ್ನು ಕೂಡಿಸಿದೆ.


ತರುವಾಯ ಜನರೂ, ಅವರ ಹೆಂಡತಿಯರೂ ತಮ್ಮ ಸಹೋದರರಾದ ಯೆಹೂದ್ಯರ ವಿರುದ್ಧ ಬಹಳ ಗೋಳಾಡ ತೊಡಗಿದರು.


ನಿಮ್ಮನ್ನು ಹುಟ್ಟಿಸಿದ ರಕ್ಷಣಾಬಂಡೆಯನ್ನು ನೆನಸದೆ, ನಿಮ್ಮನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿರಿ.


“ ‘ನಿಮ್ಮ ನೆರೆಯವನನ್ನು ವಂಚಿಸಬಾರದು. “ ‘ಇಲ್ಲವೆ ಅವನನ್ನು ಸುಲಿದುಕೊಳ್ಳಬಾರದು. ಕೂಲಿಯಾಳಿನ ಕೂಲಿಯು ನಿಮ್ಮ ಬಳಿಯಲ್ಲಿ ರಾತ್ರಿಯೆಲ್ಲಾ ಮತ್ತು ಮುಂಜಾನೆಯವರೆಗೆ ಇರಬಾರದು.


ನನ್ನ ಜನರಾದ ಇಸ್ರಾಯೇಲ್ಯರನ್ನು ನಿಮ್ಮಲ್ಲಿ ವಾಸಿಸುವಂತೆ ಮಾಡುವೆನು. ಅವರು ನಿನ್ನನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ನೀವು ಅವರ ಸೊತ್ತಾಗಿರುವಿರಿ; ನೀವು ಎಂದಿಗೂ ಅವರ ಮಕ್ಕಳಿಂದ ವಂಚಿತರಾಗುವುದಿಲ್ಲ.


ನೀನು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ನಿನ್ನ ಆಹಾರವನ್ನು ಲಾಭಕ್ಕಾಗಿ ಸಾಲವಾಗಿ ಕೊಡಬೇಡ.


ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು, ನಿನ್ನ ಬಂಡೆಯೂ, ಕೋಟೆಯೂ ಆಗಿರುವವರನ್ನು ಮರೆತು ಬಿಟ್ಟಿದ್ದೀ. ನೀನು ರಮ್ಯವಾದ ಗಿಡಗಳನ್ನು ಮತ್ತು ದೇಶಾಂತರದ ದ್ರಾಕ್ಷಿಯ ಸಸಿಗಳನ್ನು ಹಾಕಿದ್ದರೂ,


“ಏಕೆಂದರೆ, ಅವರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರತನಕ, ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.


ಓ, ನನ್ನ ತಲೆ ಚಿಲುಮೆಯೂ, ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೆಯದು, ಆಗ ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲುರಾತ್ರಿ ಅಳುವೆನು.


ಬಡವರನ್ನು ನುಂಗುವವರೇ, ನಾಡಿನ ಬಡವರನ್ನು ಮುಗಿಸಿಬಿಡಬೇಕೆಂದಿರುವವರೇ, ಇದನ್ನು ಕೇಳಿರಿ.


ಬಡವರನ್ನು ಬೆಳ್ಳಿಗೂ ದರಿದ್ರರನ್ನು ಕೆರಗಳ ಜೋಡಿಗೂ ಕೊಂಡುಕೊಳ್ಳುವೆವು, ಹೌದು ಗೋಧಿಯ ಕಸವನ್ನು ಸಹ ಮಾರೋಣ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು