14 ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿ ಮಾಡಿಕೊಂಡಿರುವೆಯೋ? ಕೈಗಳನ್ನು ಬಲಪಡಿಸಿಕೊಂಡಿರುವೆಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ಅದರಂತೆ ನಡೆಸುತ್ತೇನೆ.
14 ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿಮಾಡಿಕೊಂಡಿರುವೆಯಾ? ಕೈಗಳನ್ನು ಬಲಪಡಿಸಿಕೊಂಡಿರುವೆಯಾ? ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ. ಅಂತೆಯೇ ನಡೆಸುತ್ತೇನೆ.
‘ನೀನು ಏಕೆ ನರಳಾಡುತ್ತೀ?’ ಎಂದು ಅವರು ನಿನಗೆ ಕೇಳಿದಾಗ, ನೀನು ಹೇಳಬೇಕಾದದ್ದೇನೆಂದರೆ, ‘ಆ ಸುದ್ದಿಯ ನಿಮಿತ್ತವೇ ಅದು ಬರುವುದು. ಏಕೆಂದರೆ ಆಗ ಹೃದಯಗಳೆಲ್ಲಾ ಕರಗುವುವು. ಕೈಗಳೆಲ್ಲಾ ನಿತ್ರಾಣವಾಗುವುವು. ಪ್ರತಿಯೊಂದು ಆತ್ಮವು ಕುಂದುವದು. ಎಲ್ಲಾ ಮೊಣಕಾಲುಗಳು ನೀರಿನಂತೆ ತೇವವಾಗಿರುತ್ತವೆ. ಅದು ಬರುತ್ತದೆ, ಅದು ತರಲಾಗುತ್ತದೆ,’ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”
“ ‘ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ. ನಾನು ಕೆಲಸ ಮಾಡುವ ಸಮಯ ಬಂದಿದೆ. ನಾನು ಅದನ್ನು ಮಾಡದೆ ಬಿಡುವುದಿಲ್ಲ. ಕಟಾಕ್ಷ ತೋರಿಸುವುದಿಲ್ಲ. ಹಿಂದೆಗೆಯೆನು. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯತೀರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”
“ತನ್ನನ್ನು ರೂಪಿಸಿದವನ ಸಂಗಡ ವಾದಮಾಡುವವನಿಗೆ ಕಷ್ಟ! ಅವನು ಸಹ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದೂ, ‘ನಾನು ನಿನ್ನ ಕೈ ಕೆಲಸವು ಅಲ್ಲ,’ ಎಂದೂ ಆ ಮಡಕೆ ಹೇಳುವುದುಂಟೇ?
ಈಜಿಪ್ಟಿನವರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮೂಳೆಮಾಂಸವೇ. ಹೀಗಿರುವುದರಿಂದ ಯೆಹೋವ ದೇವರು ತನ್ನ ಕೈಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯ ಪಡೆದವನೂ ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
“ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ರೋಷವನ್ನು ಅವರ ಮೇಲೆ ಕಾರಿ, ಸಮಾಧಾನ ಹೊಂದುವೆನು. ಹೀಗೆ ನಾನು ನನ್ನ ರೋಷವನ್ನು ಅವರ ಮೇಲೆ ತೀರಿಸಿದ ತರುವಾಯ, ಯೆಹೋವ ದೇವರಾದ ನಾನು ರೋಷದಿಂದ ಮಾತನಾಡಿದ್ದೇನೆ ಎಂದು ಅವರು ತಿಳಿಯುವರು.
ಯೆಹೋವ ದೇವರಾದ ನಾನೇ ಬಿದ್ದುಹೋದದ್ದನ್ನು ಕಟ್ಟಿ, ಹಾಳಾದದ್ದನ್ನು ಬೆಳೆಯಿಸಿದ್ದೇನೆ ಎಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ ಮತ್ತು ನಾನೇ ಇದನ್ನು ಮಾಡುತ್ತೇನೆ.’
ಯೆಹೋವ ದೇವರು ತಮ್ಮ ಸೈನ್ಯಕ್ಕೆ ಗುಡುಗಿನಂತೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ಬಹು ದೊಡ್ಡದಾಗಿದೆ. ಅವರ ಆಜ್ಞೆಯನ್ನು ಪಾಲಿಸುವವನು ಪರಾಕ್ರಮಿಯು. ಯೆಹೋವ ದೇವರ ದಿವಸವು ದೊಡ್ಡದು, ಮಹಾ ಭಯಂಕರವಾದದ್ದು. ಅದನ್ನು ಸಹಿಸಿಕೊಳ್ಳುವವರು ಯಾರು?
ಆದರೆ ಅವರ ಆಗಮನದ ದಿವಸದಲ್ಲಿ ಯಾರು ತಾಳುವರು? ಅವರು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಏಕೆಂದರೆ ಅವರು ಅಕ್ಕಸಾಲಿಗನ ಪರಿಶೋಧಿಸುವ ಬೆಂಕಿಯ ಹಾಗೆಯೂ, ಅಗಸನ ಸಾಬೂನಿನ ಹಾಗೆಯೂ ಇದ್ದಾರೆ.
ಹೀಗಿರುವುದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗಬೇಡಿರಿ. ಸರ್ವಶಕ್ತ ಆಗಿರುವ ಕರ್ತ ಯೆಹೋವ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರ ತರಲು ನಿರ್ಣಯಿಸಿದೆ, ಎಂಬ ತೀರ್ಪನ್ನು ನಾನು ಕೇಳಿದ್ದೇನೆ.
ನೀನು ಅದರಲ್ಲಿ ಸ್ವಲ್ಪವೂ ಉಳಿಯದಂತೆ ಹೀರಿ ಕುಡಿದು ಅದನ್ನು ಬೋಕಿಗಳ ಹಾಗೆ ಒಡೆದುಹಾಕುವೆ ಮತ್ತು ನೀನೇ ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವೆ; ಏಕೆಂದರೆ ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.