Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:2 - ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ಈಗ ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ? ಹಾಗಾದರೆ ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ರಕ್ತಮಯವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ರಕ್ತಸಿಕ್ತವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ಸ್ಥಿರಮನಸ್ಸು ಮಾಡಿರುವೆಯಾ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ರಕ್ತಮಯವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವೋ, ಸ್ಥಿರವಾಗಿದೆಯೋ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ನೀನು ಹಂತಕರ ನಗರಕ್ಕೆ ನ್ಯಾಯತೀರಿಸುವೆಯಾ? ಆಕೆಯ ಭಯಂಕರ ದುಷ್ಟತನದ ಬಗ್ಗೆ ಆಕೆಗೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:2
22 ತಿಳಿವುಗಳ ಹೋಲಿಕೆ  

ರಕ್ತಮಯ ಪಟ್ಟಣಕ್ಕೆ ಕಷ್ಟ, ಅದೆಲ್ಲಾ ಸುಳ್ಳಿನಿಂದಲೂ, ಕಳ್ಳತನದಿಂದಲೂ ತುಂಬಿದೆ, ಕೊಳ್ಳೆಯನ್ನೂ ಬಿಡುವುದಿಲ್ಲ.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಆ ರಕ್ತಾಪರಾಧವುಳ್ಳ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.


“ ‘ಆದಕಾರಣ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ರಕ್ತಮಯವಾದ ಆ ಪಟ್ಟಣಕ್ಕೆ ಕಷ್ಟ! ಯಾವುದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವುದೋ ಆ ಹಂಡೆಗೆ ಕಷ್ಟ! ಅದರಿಂದ ತುಂಡುತುಂಡಾಗಿ ಹೊರಗೆ ತೆಗೆ. ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.


“ನೀನು ಅವರಿಗೆ ನ್ಯಾಯತೀರಿಸುವೆಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸುವೆಯೋ? ಹಾಗಾದರೆ ಅವರ ಪಿತೃಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು.


“ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು. ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನು ಘೋಷಿಸು.


ಪಾಪಮಾಡುವ ಹಿರಿಯರನ್ನು ಎಲ್ಲರ ಮುಂದೆಯೇ ಗದರಿಸು. ಇದರಿಂದ ಇತರರಿಗೂ ಎಚ್ಚರಿಕೆಯಾಗುವುದು.


ನಿಮ್ಮ ಪಿತೃಗಳು ಹಿಂಸೆಪಡಿಸದೆ ಇದ್ದ ಪ್ರವಾದಿ ಒಬ್ಬನಾದರೂ ಇರುವನೇ? ನೀತಿವಂತರಾಗಿರುವ ಒಬ್ಬರು ಬರಲಿದ್ದಾರೆಂದು ಮುಂತಿಳಿಸಿದವರನ್ನು ಸಹ ಅವರು ಕೊಂದುಹಾಕಿದರು. ಈಗ ನೀವೇ ಅವರನ್ನು ಹಿಡಿದುಕೊಟ್ಟು ಕೊಲೆಮಾಡಿದ್ದೀರಿ.


ಅದಕ್ಕೆ ಜನರೆಲ್ಲರೂ ಉತ್ತರವಾಗಿ, “ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ,” ಎಂದರು.


ಶಪಿಸುವದೂ, ಸುಳ್ಳು ಹೇಳುವುದೂ, ಕೊಲ್ಲುವುದು, ಕದಿಯುವುದೂ, ವ್ಯಭಿಚಾರ ಮಾಡುವುದೂ ಹೆಚ್ಚಾಗಿ ಬಿಟ್ಟಿವೆ. ಅವರು ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ದೇಶವೆಲ್ಲಾ ರಕ್ತಮಯವಾಗಿದೆ.


ಇದಲ್ಲದೆ ಮನಸ್ಸೆಯು ಯೆಹೋವ ದೇವರ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಪರಾಧದ ರಕ್ತದಿಂದ ತುಂಬಿಸಿದನು.


ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಲೆಕ್ಕ ಕೊಡಬೇಕಾಗಿರುವುದು,


ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲುಗೊಂಡು ದೇವಾಲಯಕ್ಕೂ ಬಲಿಪೀಠಕ್ಕೂ ನಡುವೆ ನೀವು ಕೊಂದುಹಾಕಿದ ಬರಕೀಯನ ಮಗ ಜಕರೀಯನ ರಕ್ತದವರೆಗೂ ಭೂಮಿಯಲ್ಲಿ ಸುರಿಸಲಾದ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವುದು.


ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡವರ ರಕ್ತವು ಸಿಕ್ಕಿದೆ. ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೀ.


“ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.


ಆಗ ಅವರು ನನಗೆ, “ಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ. ದೇಶವು ರಕ್ತದಿಂದ ತುಂಬಿದೆ, ಪಟ್ಟಣವು ಅಧರ್ಮದಿಂದ ತುಂಬಿದೆ. ‘ಯೆಹೋವ ದೇವರು ದೇಶವನ್ನು ತೊರೆದುಬಿಟ್ಟಿದ್ದಾರೆ, ಯೆಹೋವ ದೇವರು ನೋಡುವುದಿಲ್ಲ,’ ಎಂದು ಅವರು ಹೇಳುತ್ತಾರೆ.


ನೀವು ಈ ಪಟ್ಟಣದಲ್ಲಿ ನರಹತ್ಯೆಯನ್ನು ಹೆಚ್ಚೆಚ್ಚಾಗಿ ಮಾಡಿ, ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.


ಯೆಹೋವ ದೇವರ ವಾಕ್ಯವು ನನಗೆ ಬಂದಿತು:


ಆಮೇಲೆ ನೀನು ಹೇಳಬೇಕಾದದ್ದೇನೆಂದರೆ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಪಟ್ಟಣವು ಅದರ ಮಧ್ಯದಲ್ಲಿ ಅದರ ದಂಡನೆಯ ಕಾಲ ಬರುವಂತೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧಮಾಡುವಂತೆ ತನ್ನಲ್ಲಿ ವಿಗ್ರಹ ಮಾಡಿಕೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು