ಯೆಹೆಜ್ಕೇಲನು 22:20 - ಕನ್ನಡ ಸಮಕಾಲಿಕ ಅನುವಾದ20 ಅವರು ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒರೆಯೊಳಗೆ ಕೂಡಿಸಿ, ಅದಕ್ಕೆ ಬೆಂಕಿಯನ್ನು ಊದಿ ಕರಗಿಸುವರೋ, ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿ ಮತ್ತು ನನ್ನ ರೋಷದಲ್ಲಿ ಒಟ್ಟುಗೂಡಿಸಿ ನಿಮ್ಮನ್ನು ನಗರದೊಳಗೆ ಹಾಕಿ ಕರಗಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಹಾಕಿ,, ಊದಿ, ಉರಿಹತ್ತಿಸಿ, ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪದಲ್ಲಿ ಇಟ್ಟು ಕರಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಹಾಕಿ ಊದಿ, ಉರಿಹತ್ತಿಸಿ, ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪಾಗ್ನಿಯಲ್ಲಿ ಇಟ್ಟು ಕರಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಕೂಡಿಸಿ ಊದಿ ಉರಿಹತ್ತಿಸಿ ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪದಲ್ಲಿ ಕೂಡಿಸಿ ಇಟ್ಟುಬಿಟ್ಟು ಕರಗಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಕೆಲಸಗಾರರು ಬೆಳ್ಳಿ, ತಾಮ್ರ, ಸೀಸ, ತವರ, ಕಬ್ಬಿಣ ಇವುಗಳನ್ನೆಲ್ಲಾ ಬೆಂಕಿಗೆ ಹಾಕುವರು. ಬೆಂಕಿಯನ್ನೂದಿ ಶಾಖ ಹೆಚ್ಚು ಮಾಡುವರು. ಆಗ ಲೋಹಗಳು ಕರಗಲು ಪ್ರಾರಂಭವಾಗುವವು. ಅದೇ ರೀತಿಯಲ್ಲಿ ನಾನು ನಿಮ್ಮನ್ನು ನನ್ನ ಬೆಂಕಿಯಲ್ಲಿ ಹಾಕಿ ಕರಗಿಸುವೆನು. ನನ್ನ ರೌದ್ರವೇ ಆ ಬೆಂಕಿ. ಅಧ್ಯಾಯವನ್ನು ನೋಡಿ |