ಯೆಹೆಜ್ಕೇಲನು 22:25 - ಕನ್ನಡ ಸಮಕಾಲಿಕ ಅನುವಾದ25 ಬೇಟೆಯನ್ನು ಸುಲಿದುಕೊಳ್ಳುವ ಗರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಅವಳ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ, ಸಂಪತ್ತನ್ನೂ, ಅಮೂಲ್ಯವಾದ ವಸ್ತುವನ್ನೂ ದೋಚಿಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ. ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆ ನಾಡಿನೊಳಗೆ ಪ್ರವಾದಿಗಳು ಒಳಸಂಚುಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಜೆರುಸಲೇಮಿನ ಪ್ರವಾದಿಗಳು ತಾನು ಬೇಟೆಯಾಡಿ ಕೊಂದ ಪ್ರಾಣಿಯನ್ನು ತಿನ್ನುವ ಗರ್ಜಿಸುವ ಸಿಂಹದಂತಿದ್ದಾರೆ. ಆ ಪ್ರವಾದಿಗಳು ಅನೇಕ ಪ್ರಾಣಗಳನ್ನು ತೆಗೆದುಕೊಂಡಿದ್ದಾರೆ. ಅವರಿಂದ ಬೆಲೆಬಾಳುವ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಜೆರುಸಲೇಮಿನಲ್ಲಿ ಅನೇಕ ಸ್ತ್ರೀಯರು ವಿಧವೆಯರಾಗಲು ಅವರೇ ಕಾರಣರಾಗಿದ್ದಾರೆ. ಅಧ್ಯಾಯವನ್ನು ನೋಡಿ |