ಯೆಹೆಜ್ಕೇಲನು 22:3 - ಕನ್ನಡ ಸಮಕಾಲಿಕ ಅನುವಾದ3 ಆಮೇಲೆ ನೀನು ಹೇಳಬೇಕಾದದ್ದೇನೆಂದರೆ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಪಟ್ಟಣವು ಅದರ ಮಧ್ಯದಲ್ಲಿ ಅದರ ದಂಡನೆಯ ಕಾಲ ಬರುವಂತೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧಮಾಡುವಂತೆ ತನ್ನಲ್ಲಿ ವಿಗ್ರಹ ಮಾಡಿಕೊಂಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿನ್ನ ಮಧ್ಯದಲ್ಲಿ ರಕ್ತವನ್ನು ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ! ನಿನ್ನ ಕೇಡಿಗಾಗಿ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನು ಹೊಲೆಗೆಡಿಸಿಕೊಂಡ ನಗರಿಯೇ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಿನ್ನ ಮಧ್ಯೆ ರಕ್ತ ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ, ನಿನ್ನ ಕೇಡಿಗಾಗಿಯೇ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನೆ ಹೊಲೆಗೆಡಿಸಿಕೊಂಡ ನಗರಿಯೇ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿನ್ನ ಮಧ್ಯದಲ್ಲಿ ರಕ್ತವನ್ನು ಸುರಿಸಿ ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ಪುರಿಯೇ! ನಿನ್ನ ಕೇಡಿಗಾಗಿ ಬೊಂಬೆಗಳನ್ನು ಮಾಡಿಕೊಂಡು ನಿನ್ನನ್ನು ಹೊಲೆಗೆಡಿಸಿಕೊಂಡ ನಗರಿಯೇ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನ ಮಾತುಗಳಿವು. ಈ ನಗರವು ಕೊಲೆಗಾರರಿಂದ ತುಂಬಿದೆ. ಆದ್ದರಿಂದ ಆಕೆಯ ಶಿಕ್ಷೆಯ ದಿನವು ಬಂದಿದೆ. ಆಕೆ ತನಗೋಸ್ಕರ ಹೊಲಸು ವಿಗ್ರಹಗಳನ್ನು ಮಾಡಿ ತನ್ನನ್ನು ಹೊಲಸು ಮಾಡಿಕೊಂಡಿದ್ದಾಳೆ. ಅಧ್ಯಾಯವನ್ನು ನೋಡಿ |