Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:4 - ಕನ್ನಡ ಸಮಕಾಲಿಕ ಅನುವಾದ

4 ನೀನು ಚೆಲ್ಲಿದ ನಿನ್ನ ರಕ್ತದಿಂದ ನೀನು ಅಪರಾಧಿಯಾದೆ; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧನಾದೆ; ನಿನ್ನ ದಿನಗಳನ್ನು ಸಮೀಪಿಸಿರುವೆ; ಮತ್ತು ನಿಮ್ಮ ವರ್ಷಗಳ ಅಂತ್ಯವು ಬಂದಿದೆ. ಆದ್ದರಿಂದ ನಿನ್ನನ್ನು ಇತರ ಜನಾಂಗಗಳಿಗೆ ನಾಚಿಕೆಯಾಗಿಯೂ, ಎಲ್ಲಾ ದೇಶಗಳಿಗೂ ನಿಂದೆಯಾಗಿಯೂ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿ, ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ, ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿರುವೆ. ಹೀಗೆ ನಿನ್ನ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ಸುರಿಸಿದ ರಕ್ತದಿಂದ ಅಪರಾಧಿಯೂ ಮಾಡಿಕೊಂಡ ಬೊಂಬೆಗಳಿಂದ ಹೊಲಸೂ ಆಗಿ ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿದ್ದೀ; ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “‘ಜೆರುಸಲೇಮಿನ ನಿವಾಸಿಗಳೇ, ನೀವು ಅನೇಕರನ್ನು ಕೊಂದಿದ್ದೀರಿ. ಆದ್ದರಿಂದ ನೀವು ದೋಷಿಗಳು. ನೀವು ಹೊಲಸು ವಿಗ್ರಹಗಳನ್ನು ಮಾಡಿಕೊಂಡಿದ್ದೀರಿ. ಆದ್ದರಿಂದ ನೀವು ಅಶುದ್ಧರು. ನಿಮ್ಮನ್ನು ಶಿಕ್ಷಿಸುವ ಸಮಯ ಈಗ ಬಂದಿದೆ. ನಿಮ್ಮ ಅಂತ್ಯವು ಬಂದಿದೆ. ಆದ್ದರಿಂದಲೇ ಇತರ ಜನಾಂಗಗಳವರು ನಿಮ್ಮನ್ನು ಗೇಲಿಮಾಡುವರು. ಎಲ್ಲಾ ದೇಶಗಳು ನಿಮ್ಮನ್ನು ನೋಡಿ ನಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:4
26 ತಿಳಿವುಗಳ ಹೋಲಿಕೆ  

ಇದಲ್ಲದೆ ಮನಸ್ಸೆಯು ಯೆಹೋವ ದೇವರ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಪರಾಧದ ರಕ್ತದಿಂದ ತುಂಬಿಸಿದನು.


“ಮನುಷ್ಯಪುತ್ರನೇ, ಈಗ ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ? ಹಾಗಾದರೆ ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವೆ.


ಅರಾಮಿನ ಪುತ್ರಿಯರಿಂದಲೂ ಮತ್ತು ಅದರ ಸುತ್ತಲಿರುವಂತ ಎಲ್ಲವುಗಳಿಂದಲೂ ಮತ್ತು ನಿನ್ನನ್ನು ಉದಾಸೀನ ಮಾಡಿದಂಥ ಎಲ್ಲಾ ಫಿಲಿಷ್ಟಿಯರ ಪುತ್ರಿಯರಿಂದಲೂ, ನಿನಗೆ ನಿಂದೆಯು ಬಂದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವುದಕ್ಕೆ ಪೂರ್ವದಲ್ಲಿಯೇ


ಯೆಹೂದ್ಯರಲ್ಲದವರಿಗೆ ರಕ್ಷಣೆಯಾಗುವಂತೆ ಮಾತನಾಡುವ ನಮಗೆ ಅವರು ಅಡ್ಡಿ ಮಾಡುತ್ತಾರೆ. ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಹೆಚ್ಚೆಚ್ಚಾಗಿ ಕೂಡಿಸಿಕೊಳ್ಳುತ್ತಾ ಹೋಗುತ್ತಾರೆ. ಕೊನೆಗೆ ಕೋಪಾಗ್ನಿಯೂ ಅವರ ಮೇಲೆ ಬರಲಿದೆ.


ಕರ್ತದೇವರೇ, ನಿಮ್ಮ ಎಲ್ಲಾ ನೀತಿಗಳ ಪ್ರಕಾರ ನಿಮ್ಮ ಕೋಪವನ್ನು, ನಿಮ್ಮ ಉಗ್ರತ್ವವನ್ನು ನಿಮ್ಮ ಪಟ್ಟಣವಾದ ಯೆರೂಸಲೇಮಿನಿಂದಲೂ ನಿಮ್ಮ ಪರಿಶುದ್ಧ ಪರ್ವತದಿಂದಲೂ ತಿರುಗಿಸಿಬಿಡಿರಿ. ನಮ್ಮ ಪಾಪಗಳ ನಿಮಿತ್ತದಿಂದಲೂ, ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮ್ ಮತ್ತು ನಿಮ್ಮ ಜನರು ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.


“ಮನುಷ್ಯಪುತ್ರನೇ, ನೀನು ಪ್ರವಾದಿಸಿ, ಸಾರ್ವಭೌಮ ಯೆಹೋವ ದೇವರು ಅಮ್ಮೋನಿಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾರೆ, ‘ಹೌದು, ನೀನು ಹೀಗೆ ಹೇಳು: “ ‘ಒಂದು ಖಡ್ಗವು, ಒಂದು ಖಡ್ಗವು ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಬಹಳವಾಗಿ ಮಸೆಯಲಾಗಿದೆ. ಥಳಥಳಿಸುತ್ತಾ ನುಂಗುವಹಾಗಿದೆ.


ಏಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ, ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ, ನಿಂದೆಯೂ ಆಗುವ ಹಾಗೆಯೂ, ನೀವು ತಂಗುವುದಕ್ಕೆ ಹೋಗಿರುವ ಈಜಿಪ್ಟ್ ದೇಶದಲ್ಲಿ ಬೇರೆ ದೇವರುಗಳಿಗೆ ಧೂಪ ಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?


‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.


ಹೀಗೆ ತಮ್ಮ ದೇಶವನ್ನು ಹಾಳಾಗಿಯೂ, ನಿತ್ಯವಾದ ಹಾಸ್ಯಾಸ್ಪದವಾಗಿಯೂ ಮಾಡಿದ್ದಾರೆ. ಅದನ್ನು ಹಾದುಹೋಗುವವರೆಲ್ಲರೂ ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.


ನಾವು ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.


ಆಗ ನಾನು ಇಸ್ರಾಯೇಲಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ಕಿತ್ತುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಅದನ್ನು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಆಸ್ಪದವಾಗುವಂತೆ ಮಾಡುವೆನು.


ಆಗ ನಾನು ಇಸ್ರಾಯೇಲಿಗೆ ಕೊಟ್ಟ ದೇಶದೊಳಗಿಂದ ಅವರನ್ನು ತೆಗೆದುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಇಸ್ರಾಯೇಲರು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಗುರಿಯಾಗುವರು.


ಆಗ ಎಲ್ಲಾ ದೇಶದವರೂ, “ಯೆಹೋವ ದೇವರು ಈ ದೇಶಕ್ಕೆ ಏಕೆ ಹೀಗೆ ಮಾಡಿದ್ದಾರೆ? ಈ ದೊಡ್ಡ ಕೋಪಾಗ್ನಿಗೆ ಕಾರಣವೇನು?” ಎಂದು ಕೇಳುವರು.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಚೆದರಿಸುವ ಎಲ್ಲಾ ಜನಾಂಗಗಳಲ್ಲಿ ನೀವು ವಿಸ್ಮಯಕ್ಕೂ, ಗಾದೆಗೂ, ಹಾಸ್ಯಕ್ಕೂ ಗುರಿಯಾಗುವಿರಿ.


“ನಿಮ್ಮ ಪಿತೃಗಳ ಬದಲಾಗಿ ಬಂದಿರುವ ನೀವು, ಪಾಪಿಗಳಾಗಿ ಇಸ್ರಾಯೇಲ್ ಕುರಿತು ಯೆಹೋವ ದೇವರ ಕೋಪವನ್ನೂ ಮತ್ತಷ್ಟು ಹೆಚ್ಚಿಸುತ್ತಿದ್ದೀರಲ್ಲಾ.


ನಾನು ದೇಶವನ್ನು ಹಾಳುಮಾಡುವೆನು. ಅದರಲ್ಲಿ ವಾಸವಾಗುವ ನಿಮ್ಮ ಶತ್ರುಗಳೂ ಅದಕ್ಕೆ ಆಶ್ಚರ್ಯಪಡುವರು.


ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಸ್ಸೀರಿಯದಲ್ಲಿನ ಗಣ್ಯವ್ಯಕ್ತಿಗಳಾಗಿದ್ದರು. ಅವಳು ಯಾರನ್ನು ಮೋಹಿಸಿದಳೋ, ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರ ಪಡಿಸಿಕೊಂಡಳು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವೆ. ನೀನು ಹಾಸ್ಯಕ್ಕೂ ನಿಂದೆಗೂ ಗುರಿಯಾಗುವೆ. ಅದೇ ನಿನಗೆ ಹೆಚ್ಚಾಗುವುದು.


“ ‘ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.


ಮುಯ್ಯಿಗೆ ಮುಯ್ಯಿ ತೀರಿಸುವುದಕ್ಕೆ ರೋಷವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿ ಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿದ್ದೇನೆ.


ಅಲ್ಲದೆ ಇನ್ನು ಮೇಲೆ ನೀನು ಇತರ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗಗಳಿಂದ ಅವಮಾನ ಅನುಭವಿಸುವುದಿಲ್ಲ. ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು