ಯೆಹೆಜ್ಕೇಲನು 22:7 - ಕನ್ನಡ ಸಮಕಾಲಿಕ ಅನುವಾದ7 ನಿನ್ನಲ್ಲಿ ತಂದೆಯನ್ನೂ, ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ. ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ. ನಿನ್ನಲ್ಲಿ ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಪೀಡಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿನ್ನವರು ತಾಯಿತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಯರನ್ನು ಬಾದಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿನ್ನವರು ತಾಯಿತಂದೆಗಳನ್ನು ತುಚ್ಫೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಜೆರುಸಲೇಮಿನ ಜನರು ತಮ್ಮನ್ನು ಹೆತ್ತವರನ್ನು ಸನ್ಮಾನಿಸುವುದಿಲ್ಲ. ಪರದೇಶಸ್ಥರನ್ನು ಹಿಂಸಿಸುವರು. ಆ ಸ್ಥಳದಲ್ಲಿ ವಿಧೆವೆಯರಿಗೂ ಅನಾಥರಿಗೂ ಮೋಸ ಮಾಡುವರು. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.