ಯೆಹೆಜ್ಕೇಲನು 22:9 - ಕನ್ನಡ ಸಮಕಾಲಿಕ ಅನುವಾದ9 ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಚಾಡಿ ಹೇಳುವವರು ಇದ್ದಾರೆ; ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನುತ್ತಾರೆ; ನಿನ್ನಲ್ಲಿ ಅವರು ದ್ರೋಹವನ್ನು ಮಾಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿನ್ನಲ್ಲಿ ಚಾಡಿಕೋರರು ರಕ್ತ ಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡೆಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯೆ ದುರಾಚಾರಗಳನ್ನು ನಡೆಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಿನ್ನಲ್ಲಿ ಚಾಡಿಕೋರರು ರಕ್ತಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಜೆರುಸಲೇಮ್ ನಿವಾಸಿಗಳು ಇತರರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಾರೆ. ಆ ನಿರಪರಾಧಿ ಜನರನ್ನು ಹತ್ಯೆ ಮಾಡಲು ಹಾಗೆ ಮಾಡುತ್ತಾರೆ. ಆ ಜನರು ಬೆಟ್ಟದ ಮೇಲೆ ಹೋಗಿ ಸುಳ್ಳುದೇವರುಗಳನ್ನು ಸನ್ಮಾನಿಸುವುದಕ್ಕಾಗಿ ಊಟಮಾಡುತ್ತಾರೆ. “‘ಜೆರುಸಲೇಮಿನ ಜನರು ಎಲ್ಲಾ ಬಗೆಯ ಲೈಂಗಿಕ ಪಾಪಗಳನ್ನು ಮಾಡುತ್ತಾರೆ. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.