Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:15 - ಕನ್ನಡ ಸಮಕಾಲಿಕ ಅನುವಾದ

15 ಚಿತ್ರದಲ್ಲಿನ ಪುರುಷರು ತಮ್ಮ ಸೊಂಟದ ಸುತ್ತಲೂ ಪಟ್ಟಿಗಳನ್ನು ಕಟ್ಟಿಕೊಂಡಿದ್ದರು ಮತ್ತು ತಲೆಯ ಮೇಲೆ ಬೀಸುವ ಪೇಟಗಳನ್ನು ಹೊಂದಿದ್ದರು; ಅವರೆಲ್ಲರೂ ಬಾಬಿಲೋನ್ ನಿವಾಸಿಗಳಂತೆ, ಬಾಬಿಲೋನಿನ ರಥದ ಅಧಿಕಾರಿಗಳಂತೆ ಕಾಣುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರು ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ, ತಲೆಗೆ ರುಮಾಲನ್ನು ಧರಿಸಿ, ನೋಟಕ್ಕೆ ಸರದಾರರಂತಿದ್ದ ತಮ್ಮ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಪುತ್ರರ ಹಾಗಿರುವ ಆಕಾರಗಳು ಗೋಡೆಯಲ್ಲಿ ಕಿರುಮಂಜಿಯಿಂದ ಚಿತ್ರಿಸಿರುವುದನ್ನು ನೋಡಿದ ಕೂಡಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಗೋಡೆಯಲ್ಲಿ ಕಿರಮಂಜಿಯಿಂದ ಚಿತ್ರಿಸಿರುವದನ್ನು ನೋಡಿದ ಕೂಡಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರು ಸೊಂಟಕ್ಕೆ ಪಟ್ಟಿಯನ್ನು ಬಿಗಿದು, ಉದ್ದ ಮುಂಡಾಸವನ್ನು ಧರಿಸಿದ್ದರು. ಅವರೆಲ್ಲರೂ ಅಧಿಕಾರಿಗಳಂತೆ ಕಾಣುತ್ತಿದ್ದರು. ಅವರೆಲ್ಲರೂ ಬಾಬಿಲೋನಿನಲ್ಲಿಯೇ ಹುಟ್ಟಿ ಬೆಳೆದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:15
7 ತಿಳಿವುಗಳ ಹೋಲಿಕೆ  

ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟಿನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನಿಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಜನರಿಗೂ ತಂದೆಯಾಗಿರುವನು.


ಸಮಸ್ತ ಇಸ್ರಾಯೇಲಿನಲ್ಲಿ ಬಹಳ ಹೊಗಳಿಕೆಗೆ ಪಾತ್ರನಾದ ಅಬ್ಷಾಲೋಮನಂಥ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.


ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ, ತನ್ನ ವಸ್ತ್ರಗಳನ್ನೂ, ಖಡ್ಗವನ್ನೂ, ಬಿಲ್ಲನ್ನೂ, ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು.


ಅವನು ಜೆಬಹನಿಗೂ, ಚಲ್ಮುನ್ನನಿಗೂ, “ನೀವು ತಾಬೋರಿನಲ್ಲಿ ಕೊಂದುಹಾಕಿದ ಆ ಮನುಷ್ಯರು ಯಾವ ತರಹದವರಾಗಿದ್ದರು?” ಎಂದನು. ಅದಕ್ಕವರು, “ನಿನ್ನ ಹಾಗೆಯೇ ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಂತಿದ್ದರು,” ಎಂದರು.


“ಅವಳು ತನ್ನ ವ್ಯಭಿಚಾರತ್ವವನ್ನು ಇನ್ನೂ ಹೆಚ್ಚಿಸಿದಳು. ಗೋಡೆಯ ಮೇಲೆ ಕೆಂಪು ಬಣ್ಣದಿಂದ ಚಿತ್ರಿಸಲಾದ ಕಸ್ದೀಯರ ಪುರುಷರನ್ನು ನೋಡಿದಳು. ಅವರು,


ಅವಳ ಕಣ್ಣುಗಳಿಂದ ಅವರನ್ನು ನೋಡಿದಾಗ ತಕ್ಷಣವೇ ಅವರನ್ನು ಮೋಹಿಸಿದಳು. ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿದಳು.


ಸೈನಿಕರ ಗುರಾಣಿಗಳು ಕೆಂಪಾಗಿವೆ; ಯುದ್ಧವೀರರು ರಕ್ತವರ್ಣದ ಬಟ್ಟೆ ಧರಿಸಿದ್ದಾರೆ; ಆತನು ಸಿದ್ಧಮಾಡುವ ದಿವಸದಲ್ಲಿ, ರಥಗಳ ಉಕ್ಕು ಥಳಥಳಿಸುವುದು, ತುರಾಯಿ ಮರದಿಂದ ಮಾಡಿದ ಈಟಿಗಳು ಝಳಪಿಸುವುವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು