Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:16 - ಕನ್ನಡ ಸಮಕಾಲಿಕ ಅನುವಾದ

16 ಅವಳ ಕಣ್ಣುಗಳಿಂದ ಅವರನ್ನು ನೋಡಿದಾಗ ತಕ್ಷಣವೇ ಅವರನ್ನು ಮೋಹಿಸಿದಳು. ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇವಳು ಮೋಹಗೊಂಡು, ಕಸ್ದೀಯ ದೇಶಕ್ಕೆ ದೂತರನ್ನು ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬಾಬಿಲೋನಿಯಾದ ಆ ವ್ಯಕ್ತಿಗಳ ಬಳಿಗೆ ದೂತರನ್ನು ಕಳುಹಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇವಳು ಮೋಹಗೊಂಡು ಕಸ್ದೀಯದೇಶಕ್ಕೆ ಆ ಮನುಷ್ಯರ ಬಳಿಗೆ ದೂತರನ್ನು ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಒಹೊಲೀಬಳು ಅವರನ್ನು ಕಂಡಕೂಡಲೇ ಅವರಿಗಾಗಿ ಆಸೆಪಟ್ಟು ಬಾಬಿಲೋನಿನಲ್ಲಿದ್ದ ಅವರ ಬಳಿಗೆ ಸಂದೇಶಕರನ್ನು ಕಳುಹಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:16
17 ತಿಳಿವುಗಳ ಹೋಲಿಕೆ  

ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ವ್ಯಾಪಾರಸ್ಥರಾದ ಬಾಬಿಲೋನಿಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.


ಆದರೆ ಒಬ್ಬ ಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ಆಗಲೇ ತನ್ನ ಹೃದಯದಲ್ಲಿ ಆಕೆಯ ಸಂಗಡ ವ್ಯಭಿಚಾರ ಮಾಡಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.


ಇವರು ಕಾಮುಕದಿಂದ ತುಂಬಿದ ಕಣ್ಣು ಮತ್ತು ಪಾಪವನ್ನು ಬಿಡಲೊಲ್ಲದ ಚಪಲಚಿತ್ತರೂ ಮರುಳುಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.


ಇದಲ್ಲದೆ ನಾನು ನಿನಗೆ ಬೆಳ್ಳಿಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು, ಅವುಗಳಿಂದ ಪುರುಷಮೂರ್ತಿಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದೆ.


ನಿಮ್ಮ ಕಣ್ಣುಗಳು ವಿಚಿತ್ರ ದೃಶ್ಯಗಳನ್ನು ನೋಡುತ್ತವೆ. ನಿಮ್ಮ ಮನಸ್ಸು ಗೊಂದಲಮಯ ವಿಷಯಗಳನ್ನು ಕಲ್ಪಿಸುತ್ತದೆ.


ನಿನ್ನ ಹೃದಯ ಅವಳ ಸೌಂದರ್ಯವನ್ನು ಮೋಹಿಸದಿರಲಿ. ಅವಳ ಕಣ್ಣುರೆಪ್ಪೆಗಳಿಂದ ಅವಳು ನಿನ್ನನ್ನು ವಶಮಾಡಿಕೊಳ್ಳದೆ ಇರಲಿ.


ವ್ಯರ್ಥವಾದವುಗಳಿಂದ ನನ್ನ ಕಣ್ಣುಗಳನ್ನು ತಿರುಗಿಸಿ, ನಿಮ್ಮ ವಾಕ್ಯದ ಅನುಸಾರವಾಗಿ ನನ್ನ ಜೀವವನ್ನು ಕಾಪಾಡಿರಿ.


“ಕನ್ನಿಕೆಯನ್ನು ಕಾಮದೃಷ್ಟಿಯಿಂದ ನೋಡುವುದಿಲ್ಲವೆಂದು ನನ್ನ ಕಣ್ಣುಗಳೊಂದಿಗೆ ನಾನು ಒಡಂಬಡಿಕೆಯನ್ನು ಮಾಡಿಕೊಂಡೆನು.


ಯೆಹೋಯಾಕೀಮನ ಆಳಿಕೆಯಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶವನ್ನು ದಾಳಿಮಾಡಿದನು. ಯೆಹೋಯಾಕೀಮನು ಮೂರು ವರ್ಷ ಅವನ ಸೇವಕನಾಗಿದ್ದು, ತರುವಾಯ ಅವನ ಮೇಲೆ ತಿರುಗಿಬಿದ್ದನು.


ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು, ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇದ್ದು, ಸ್ನಾನ ಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಕಂಡನು.


ಸ್ವಲ್ಪ ಸಮಯದ ನಂತರ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣು ಹಾಕಿ, “ನನ್ನ ಸಂಗಡ ಮಲಗು,” ಎಂದಳು.


ಆಗ ದೇವಪುತ್ರರು, ಮನುಷ್ಯ ಪುತ್ರಿಯರ ಸೌಂದರ್ಯವನ್ನು ಕಂಡು ಅವರನ್ನು ಆರಿಸಿಕೊಂಡು, ತಮಗೆ ಹೆಂಡತಿಯರನ್ನಾಗಿ ಮಾಡಿಕೊಂಡರು.


ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.


ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ. ದೂರಕ್ಕೆ ನಿನ್ನ ರಾಯಭಾರಿಗಳನ್ನು ಕಳುಹಿಸಿದ್ದೀ. ಪಾತಾಳದಷ್ಟು ನೀಚಸ್ಥಿತಿಗೆ ಇಳಿದಿದ್ದೀಯೆ.


ಚಿತ್ರದಲ್ಲಿನ ಪುರುಷರು ತಮ್ಮ ಸೊಂಟದ ಸುತ್ತಲೂ ಪಟ್ಟಿಗಳನ್ನು ಕಟ್ಟಿಕೊಂಡಿದ್ದರು ಮತ್ತು ತಲೆಯ ಮೇಲೆ ಬೀಸುವ ಪೇಟಗಳನ್ನು ಹೊಂದಿದ್ದರು; ಅವರೆಲ್ಲರೂ ಬಾಬಿಲೋನ್ ನಿವಾಸಿಗಳಂತೆ, ಬಾಬಿಲೋನಿನ ರಥದ ಅಧಿಕಾರಿಗಳಂತೆ ಕಾಣುತ್ತಿದ್ದರು.


ಕತ್ತೆಗಳಂತೆ ಬೆದೆಯುಳ್ಳವರು ಕುದುರೆಗಳಂತೆ ದಾಟುವವರು ಆದ ತನ್ನ ಪ್ರಿಯರನ್ನು ಮೋಹಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು