ಯೆಹೆಜ್ಕೇಲನು 23:23 - ಕನ್ನಡ ಸಮಕಾಲಿಕ ಅನುವಾದ23 ಬಾಬಿಲೋನಿನವರು ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು, ಎಲ್ಲಾ ಅಸ್ಸೀರಿಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿ ಹೊಂದಿದವರೂ ಎಲ್ಲರೂ ಕುದುರೆಗಳ ಮೇಲೆ ಬೀಳುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಬಾಬಿಲೋನಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು ಮತ್ತು ಎಲ್ಲಾ ಅಶ್ಶೂರ್ಯರೆಲ್ಲರೊಂದಿಗೂ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ, ಸೈನ್ಯಾಧಿಪತಿಗಳೂ, ಅಧಿಕಾರಸ್ಥರೂ, ಯುದ್ಧವೀರರು, ಖ್ಯಾತಿ ಹೊಂದಿದವರೂ, ಎಲ್ಲರೂ ಕುದರೆಗಳ ಮೇಲೆ ಬೀಳುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸಮಸ್ತ ಕಸ್ದೀಯರು, ಪಕೋದಿನವರು, ಷೋಯದವರು, ಕೋಯದವರು, ಇವರನ್ನೂ ಇವರೊಂದಿಗೆ ಅಸ್ಸೀರಿಯರೆಲ್ಲರನ್ನೂ ನಾನು ನಿನಗೆ ವಿರುದ್ಧ ಎಬ್ಬಿಸಿ, ಎಲ್ಲ ಕಡೆಯಿಂದಲೂ ನಿನ್ನ ಮೇಲೆ ಬೀಳುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಸಮಸ್ತ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು, ಇವರನ್ನೂ ಇವರೊಂದಿಗೆ ಅಶ್ಶೂರ್ಯರೆಲ್ಲರನ್ನೂ ನಾನು ನಿನಗೆ ವಿರುದ್ಧವಾಗಿ ಎಬ್ಬಿಸಿ ಎಲ್ಲಾ ಕಡೆಯಿಂದಲೂ ನಿನ್ನ ಮೇಲೆ ಬೀಳಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಾನು ಬಾಬಿಲೋನಿನ ಕಸ್ದೀಯ ಪುರುಷರನ್ನು ಬರಮಾಡುವೆನು. ನಾನು ಪೆಕೋದ್, ಷೋಯ ಮತ್ತು ಕೋಯ ಇಲ್ಲಿಂದಲೂ, ಅಶ್ಶೂರದ ಯೌವನಸ್ಥರನ್ನು ಬರಮಾಡುವೆನು. ಅಲ್ಲಿಯ ಎಲ್ಲಾ ಅಧಿಕಾರಿಗಳನ್ನೂ ನಾಯಕರನ್ನೂ ಬರಮಾಡುವೆನು. ಅವರೆಲ್ಲರೂ ಸುಂದರವಾದ ಯುವಕರು, ಅಧಿಕಾರಿಗಳು, ಆರಿಸಲ್ಪಟ್ಟ ಯೋಧರು ಮತ್ತು ಅಶ್ವರೂಢರು ಆಗಿರುವರು. ಅಧ್ಯಾಯವನ್ನು ನೋಡಿ |