ಯೆಹೆಜ್ಕೇಲನು 23:25 - ಕನ್ನಡ ಸಮಕಾಲಿಕ ಅನುವಾದ25 ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು. ಅವರು ನಿನ್ನಲ್ಲಿ ಕೋಪ ತೀರಿಸಿಕೊಳ್ಳುವರು. ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದುಹಾಕು; ನಿನ್ನಲ್ಲಿ ಉಳಿದವರು ಖಡ್ಗದಿಂದ ಬೀಳುವರು. ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು, ಅವರು ನಿನ್ನಲ್ಲಿ ಕೋಪವನ್ನು ತೀರಿಸಿಕೊಳ್ಳುವರು; ನಿನ್ನ ಮೂಗು, ಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವುರು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು ಅವರು ನಿನ್ನಲ್ಲಿ ಕೋಪ ತೀರಿಸಿಕೊಳ್ಳುವರು; ನಿನ್ನ ಮೂಗುಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು ಅವರು ನಿನ್ನಲ್ಲಿ ಕೋಪತೀರಿಸಿಕೊಳ್ಳುವರು; ನಿನ್ನ ಮೂಗು ಕಿವಿಗಳನ್ನು ಕಿತ್ತುಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವರು; ನಿನ್ನ ಗಂಡುಹೆಣ್ಣುಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನಾನು ನಿನ್ನ ವಿರುದ್ಧವಾಗಿ ನನ್ನ ಈರ್ಷೆಯ ಕೋಪವನ್ನು ನಿನ್ನ ಮೇಲೆ ಸುರಿಸುವೆನು. ಅವರಿಗೆ ಸಿಟ್ಟು ಬಂದು ನಿನ್ನನ್ನು ಹಿಂಸಿಸುವರು. ನಿನ್ನ ಕಿವಿ ಮೂಗುಗಳನ್ನು ಕತ್ತರಿಸಿಹಾಕುವರು. ತಮ್ಮ ಖಡ್ಗದಿಂದ ನಿನ್ನನ್ನು ಸಂಹರಿಸುವರು. ಆಮೇಲೆ ನಿನ್ನ ಮಕ್ಕಳನ್ನು ತೆಗೆದುಕೊಳ್ಳುವರು ಮತ್ತು ನಿನ್ನಲ್ಲಿ ಉಳಿದಿರುವುದನ್ನೆಲ್ಲ ಸುಟ್ಟುಹಾಕುವರು. ಅಧ್ಯಾಯವನ್ನು ನೋಡಿ |