Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:35 - ಕನ್ನಡ ಸಮಕಾಲಿಕ ಅನುವಾದ

35 “ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನಿನ ಮೇಲೆ ಮರೆಮಾಡಿದ ಮೇಲೆ ನೀನು ನಿನ್ನ ದುಷ್ಕರ್ಮವನ್ನೂ ವ್ಯಭಿಚಾರದ ಪ್ರತಿಫಲವನ್ನೂ ಅನುಭವಿಸಲೇಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನನ್ನು ಬೆನ್ನಿನ ಹಿಂದೆ ಮರೆಮಾಡಿ, ಮರೆತುಬಿಟ್ಟಿದ್ದರಿಂದ ನಿನ್ನ ದುಷ್ಕರ್ಮದ ಮತ್ತು ವ್ಯಭಿಚಾರದ ಫಲವನ್ನು ನೀನೇ ಅನುಭವಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ. ‘ನೀನು ನನ್ನನ್ನು ಮರೆತು, ನನಗೆ ಬೆನ್ನುಮಾಡಿದ್ದರಿಂದ ನಿನ್ನ ಲಂಪಟತನದ ಮತ್ತು ಸೂಳೆತನದ ಫಲವನ್ನು ಅನುಭವಿಸಬೇಕು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನನ್ನು ಬೆನ್ನ ಹಿಂದಕ್ಕೆ ಎಸೆದು ಮರೆತುಬಿಟ್ಟದ್ದರಿಂದ ನಿನ್ನ ಪುಂಡಾಟದ ಮತ್ತು ಸೂಳೆತನದ ಫಲವನ್ನು ನೀನೂ ಅನುಭವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: ‘ಜೆರುಸಲೇಮೇ, ನೀನು ನನ್ನನ್ನು ಮರೆತುಬಿಟ್ಟೆ. ನೀನು ನನ್ನನ್ನು ತೊರೆದುಬಿಟ್ಟೆ; ಆದ್ದರಿಂದ ನೀನು ನನ್ನನ್ನು ತೊರೆದ ಸೂಳೆಯಂತೆ ಜೀವಿಸಿದ್ದಕ್ಕೆ ಶಿಕ್ಷೆ ಅನುಭವಿಸಬೇಕು. ನಿನ್ನ ನೀಚ ನಡತೆಗಾಗಿ ನೀನು ಕಷ್ಟ ಅನುಭವಿಸಬೇಕು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:35
22 ತಿಳಿವುಗಳ ಹೋಲಿಕೆ  

ನೀನು ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದೆ. ಏಕೆಂದರೆ, ನೀನು ಹೋಗಿ ನನಗೆ ಕೋಪವನ್ನೆಬ್ಬಿಸುವ ಅನ್ಯದೇವರುಗಳನ್ನೂ, ಎರಕದ ವಿಗ್ರಹಗಳನ್ನೂ ಮಾಡಿಕೊಂಡು, ನನ್ನನ್ನು ತಿರಸ್ಕರಿಸಿದೆ.


ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚ ತೆಗೆದುಕೊಂಡಿದ್ದಾರೆ. ಬಡ್ಡಿಯನ್ನು ಲಾಭವನ್ನೂ ತೆಗೆದುಕೊಂಡಿದ್ದಾರೆ. ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭ ಮಾಡಿಕೊಂಡಿದ್ದಾರೆ. ನನ್ನನ್ನು ಮರೆತುಬಿಟ್ಟಿದ್ದಾರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ನಾನು ಅವರಿಗೆ ಬೋಧಿಸಿದೆನು. ಪುನಃ ಬೋಧಿಸಿದೆನು. ಆದರೂ ಉಪದೇಶ ಹೊಂದುವುದಕ್ಕೆ ಅವರು ಕಿವಿಗೊಡಲಿಲ್ಲ ಅಥವಾ ಪ್ರತಿಕ್ರಿಯಿಸುವುದಿಲ್ಲ.


ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಿತು. ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿಕೆಗಳೇ. ಏಕೆಂದರೆ ಅವರು ತಮ್ಮ ಮಾರ್ಗವನ್ನು ಡೊಂಕು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟಿದ್ದರು.


ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು, ನಿನ್ನ ಬಂಡೆಯೂ, ಕೋಟೆಯೂ ಆಗಿರುವವರನ್ನು ಮರೆತು ಬಿಟ್ಟಿದ್ದೀ. ನೀನು ರಮ್ಯವಾದ ಗಿಡಗಳನ್ನು ಮತ್ತು ದೇಶಾಂತರದ ದ್ರಾಕ್ಷಿಯ ಸಸಿಗಳನ್ನು ಹಾಕಿದ್ದರೂ,


ನಾನು ಅವರಿಗೆ ಆಹಾರ ಕೊಟ್ಟೆನು, ಅವರು ತೃಪ್ತರಾದರು. ಅವರು ತೃಪ್ತರಾದಾಗ, ಅಹಂಕಾರಿಗಳಾದರು, ಅನಂತರ ಅವರು ನನ್ನನ್ನು ಮರೆತುಬಿಟ್ಟರು.


ಇಸ್ರಾಯೇಲರು ತಮ್ಮ ಸೃಷ್ಟಿಕರ್ತನನ್ನು ಮರೆತುಬಿಟ್ಟು, ಅರಮನೆಗಳನ್ನು ಕಟ್ಟುತ್ತಾರೆ. ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚುಮಾಡಿಕೊಂಡಿದೆ. ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ನುಂಗಿಬಿಡುವುದು.”


ಯುವತಿಯು ತನ್ನ ಆಭರಣಗಳನ್ನೂ ಇಲ್ಲವೆ ಮದಲಗಿತ್ತಿ ತನ್ನ ಒಡ್ಯಾಣವನ್ನು ಮರೆತುಬಿಡುವಳೋ? ಆದರೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.


ನೀವು ಆ ದೇಶವನ್ನು ಪರೀಕ್ಷಿಸಿದ ನಲವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಲವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು, ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.


ಇದಲ್ಲದೆ, ದೇವರನ್ನು ಒಪ್ಪಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡೆಸುವವರಾಗುವಂತೆ ದೇವರು ಅನಾಚಾರದ ಮನಸ್ಸಿಗೆ ಅವರನ್ನು ಒಪ್ಪಿಸಿದರು.


“ ‘ಇಸ್ರಾಯೇಲರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರೂ ಸಹ ತಮ್ಮ ಪಾಪಗಳನ್ನು ಹೊರುವರು.


ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ. ನಾನು ನಿನ್ನನ್ನು ಬಿಡುವುದೂ ಇಲ್ಲ. ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ. ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು. ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’


ಅವರ ಪಿತೃಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ, ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತುಬಿಡುವಂತೆ ಮಾಡುವುದಕ್ಕೆ ಯೋಚಿಸುತ್ತಾರೆ.


ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನನ್ನನ್ನು ಮರೆತುಬಿಟ್ಟು, ಸುಳ್ಳು ದೇವರುಗಳಲ್ಲಿ ಭರವಸೆಯಿಟ್ಟಿದ್ದೀಯೇ.


“ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.


ಇನ್ನು ಮೇಲೆ ಇಸ್ರಾಯೇಲರು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ದೇವದರ್ಶನದ ಗುಡಾರದ ಸಮೀಪಕ್ಕೆ ಬರಬಾರದು.


ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ಶಪಿಸುವವನು, ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.


ಅವರು ಮರಕ್ಕೆ, ‘ನೀನು ನನ್ನ ತಂದೆ,’ ಎಂದೂ ಕಲ್ಲಿಗೆ, ‘ನೀನು ನನ್ನನ್ನು ಹೆತ್ತಿದ್ದೀ,’ ಎಂದೂ ಹೇಳುತ್ತಾರಲ್ಲಾ. ಏಕೆಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ಅವರ ಕಷ್ಟಕಾಲದಲ್ಲಿ ಎದ್ದು, ‘ನಮ್ಮನ್ನು ರಕ್ಷಿಸು,’ ಎಂದು ಮೊರೆಯಿಡುವರು.


ಇದಲ್ಲದೆ ನಿಮ್ಮ ಮಕ್ಕಳು ನಲವತ್ತು ವರುಷ ಮರುಭೂಮಿಯಲ್ಲಿ ಅಲೆದಾಡಿ, ನಿಮ್ಮ ಹೆಣಗಳು ಮರುಭೂಮಿಯಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಅಪನಂಬಿಗಸ್ತಿಕೆಯನ್ನು ಅನುಭವಿಸುವಿರಿ.


ನಾನು ಐಶ್ವರ್ಯವಂತನಾದರೆ ನಿನ್ನನ್ನು ನಿರಾಕರಿಸಿ, ‘ಯೆಹೋವ ದೇವರು ಯಾರು?’ ಎಂದು ಹೇಳೇನು. ನಾನು ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿಮ್ಮ ಹೆಸರಿಗೆ ಅಪಕೀರ್ತಿ ತಂದೇನು.


ನಾನು ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಸಾರವನ್ನೂ, ಮೇಲನ್ನೂ ತಿನ್ನುವ ಹಾಗೆ ಕರೆದುಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸೊತ್ತನ್ನು ಅಸಹ್ಯ ಮಾಡಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು