“ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು.
ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು. ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ
“ಈ ಆಲಯದಲ್ಲಿಯೂ, ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿಯೂ, ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿಯೂ, ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು,” ಎಂದು ಯೆಹೋವ ದೇವರು ದಾವೀದನಿಗೂ, ಅವನ ಮಗನಾದ ಸೊಲೊಮೋನನಿಗೂ ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ತಾನು ಮಾಡಿದ ಅಶೇರ ವಿಗ್ರಹಸ್ತಂಭವನ್ನು ಇಟ್ಟನು.
ಆದರೆ ನೀವು ಸಬ್ಬತ್ ದಿನವನ್ನು ಪರಿಶುದ್ಧಮಾಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು, ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದರೆ ಯೆರೂಸಲೇಮಿನ ದ್ವಾರಗಳಲ್ಲಿ ಬೆಂಕಿಯನ್ನು ಹಚ್ಚುವೆನು. ಅದು ಆರಿಹೋಗದೆ, ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.’ ”
ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.
“ ‘ನಿಮ್ಮ ವಿಷಯವಾಗಿ, ಓ ಇಸ್ರಾಯೇಲಿನ ಮನೆತನದವರೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೋಗಿರಿ, ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ. ಆದರೆ ನಂತರ ನೀವು ಖಂಡಿತವಾಗಿಯೂ ನನ್ನ ಮಾತನ್ನು ಕೇಳುತ್ತೀರಿ ಮತ್ತು ನಿಮ್ಮ ದಾನಗಳಿಂದಲೂ, ನಿಮ್ಮ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.
ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ. ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ. ಅವರು ಪರಿಶುದ್ಧವಾದದ್ದಕ್ಕೂ, ಅಪವಿತ್ರವಾದದ್ದಕ್ಕೂ ಬೇಧವೆಣಿಸಲಿಲ್ಲ. ಶುದ್ಧ, ಅಶುದ್ಧಗಳ ವ್ಯತ್ಯಾಸವಿಲ್ಲ ಎಂದು ಬೋಧಿಸಿದರು. ನನ್ನ ಸಬ್ಬತ್ ದಿನಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದ್ದರಿಂದ ನಾನು ಅವರಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.