ಯೆಹೆಜ್ಕೇಲನು 23:46 - ಕನ್ನಡ ಸಮಕಾಲಿಕ ಅನುವಾದ46 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ, ಅವರನ್ನು ಸೂರೆಗೂ ಹೆದರಿಕೆಗೂ ಒಪ್ಪಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ಹೆಂಗಸರ ವಿರುದ್ಧವಾಗಿ ಸಭೆಯನ್ನು ಸೇರಿಸಿ, ಇವರನ್ನು ಸೂರೆಗೆ ಸಿಕ್ಕಿಸಿ, ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಈ ಹೆಂಗಸರ ದಂಡನೆಗಾಗಿ ಸಭೆಯನ್ನು ಸೇರಿಸುವೆನು. ಇವರನ್ನು ಸೂರೆಗೆ ಒಳಗಾಗಿಸಿ ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ಹೆಂಗಸರ ದಂಡನೆಗಾಗಿ ಸಭೆಯನ್ನು ಕೂಡಿಸಿ ಇವರನ್ನು ಸೂರೆಗೆ ಸಿಕ್ಕಿಸಿ ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ನನ್ನ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ಜನರನ್ನು ಒಟ್ಟುಗೂಡಿಸು. ಅವರು ಒಟ್ಟಾಗಿ ಸೇರಿ ಒಹೊಲ ಮತ್ತು ಒಹೊಲೀಬರನ್ನು ಶಿಕ್ಷಿಸಲಿ. ಆ ಜನರು ಈ ಸ್ತ್ರೀಯರನ್ನು ಶಿಕ್ಷಿಸಿ ಗೇಲಿ ಮಾಡುವರು. ಅಧ್ಯಾಯವನ್ನು ನೋಡಿ |
“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು.