Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:13 - ಕನ್ನಡ ಸಮಕಾಲಿಕ ಅನುವಾದ

13 “ ‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಂತೆಯೇ ನಿನ್ನ ಲಂಪಟತನ ಅಸಹ್ಯವಾಗಿರುವುದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ಹರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನೂ ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನ ಪುಂಡಾಟವು ಅಸಹ್ಯವಾಗಿರುವದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ ಶುದ್ಧಿಯಾಗದೆ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “‘ನಿನ್ನ ವಿರುದ್ಧ ನನಗಿರುವ ಕೋಪ ತೃಪ್ತಿಗೊಳ್ಳುವ ತನಕ ನೀನು ಮತ್ತೆಂದಿಗೂ ಶುದ್ಧಳಾಗುವುದಿಲ್ಲ. ನಿನ್ನನ್ನು ತೊಳೆದು ಕಲೆಗಳನ್ನು ತೆಗೆಯಲು ನನಗೆ ಮನಸ್ಸಿತ್ತು. ಆದರೆ ಕಲೆಗಳು ಹೋಗಲಿಲ್ಲ. ಆದ್ದರಿಂದ ನಿನ್ನ ಮೇಲಿನ ನನ್ನ ಕೋಪವು ತಣ್ಣಗಾಗುವ ತನಕ ನಾನು ನಿನ್ನನ್ನು ತೊಳೆಯುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:13
30 ತಿಳಿವುಗಳ ಹೋಲಿಕೆ  

“ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು, ‘ದೇವರ ರೌದ್ರದ ದಿವಸದಲ್ಲಿ ನೀನು ಶುದ್ಧಿಯಾಗದ ದೇಶವಾಗಿಯೂ, ಮಳೆಯಿಲ್ಲದ ದೇಶವಾಗಿಯೂ ಇರುವೆ.’


“ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ರೋಷವನ್ನು ಅವರ ಮೇಲೆ ಕಾರಿ, ಸಮಾಧಾನ ಹೊಂದುವೆನು. ಹೀಗೆ ನಾನು ನನ್ನ ರೋಷವನ್ನು ಅವರ ಮೇಲೆ ತೀರಿಸಿದ ತರುವಾಯ, ಯೆಹೋವ ದೇವರಾದ ನಾನು ರೋಷದಿಂದ ಮಾತನಾಡಿದ್ದೇನೆ ಎಂದು ಅವರು ತಿಳಿಯುವರು.


ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.


ಅವಳು ಯಾರಿಗೂ ವಿಧೇಯಳಾಗಲಿಲ್ಲ; ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ; ಯೆಹೋವ ದೇವರಲ್ಲಿ ಭರವಸೆ ಇಡಲಿಲ್ಲ; ತನ್ನ ದೇವರ ಸಮೀಪಕ್ಕೆ ಬರಲಿಲ್ಲ.


ಈ ರೀತಿ ನಿನ್ನ ಮೇಲಿನ ನನ್ನ ಸಿಟ್ಟನ್ನು ತೀರಿಸುವೆನು. ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ, ಶಾಂತನಾಗಿ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲ.


ಆದ್ದರಿಂದ ನಾನು ಸಹ ರೋಷದಿಂದಲೇ ಇರುವೆನು. ನಾನು ಅವರನ್ನು ಕನಿಕರಿಸುವುದೂ ಇಲ್ಲ, ನಾನು ಅವರನ್ನು ಉಳಿಸುವುದೂ ಇಲ್ಲ. ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರುಚಿದರೂ, ನಾನು ಅವರನ್ನು ಕೇಳಿಸಿಕೊಳ್ಳುವುದೂ ಇಲ್ಲ,” ಎಂದನು.


ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ, ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆ ಮಾಡಿಕೊಳ್ಳಲಿ. ನೀತಿವಂತನು ಇನ್ನೂ ನೀತಿಯನ್ನು ಮಾಡಲಿ. ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ!” ಎಂದನು.


‘ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವೆ,’ ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ನಾಶವಾಗುವುದಿಲ್ಲ. ಆದರೆ ಅವರು ಬೇಗನೆ ಎದ್ದು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.


ನಾನು ಇಸ್ರಾಯೇಲನ್ನು ಗುಣ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಪಾಪಗಳನ್ನು ಬಹಿರಂಗಪಡಿಸುತ್ತೇನೆ. ಮತ್ತು ಸಮಾರ್ಯದ ಕೆಟ್ಟತನವನ್ನು ಪ್ರಕಟಪಡಿಸುತ್ತೇನೆ. ಅವರು ಸುಳ್ಳನ್ನು ನಡೆಸುತ್ತಾರೆ. ಕಳ್ಳನು ಒಳಗೆ ಬರುತ್ತಾನೆ ಮತ್ತು ಕಳ್ಳರ ಗುಂಪು ಹೊರಗೆ ಸುಲಿದುಕೊಳ್ಳುತ್ತದೆ.


ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಣ ಕಲ್ಮಶವು ಕರಗಿ ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.


“ಎಫ್ರಾಯೀಮನು ಅಂಗಲಾಚುವುದನ್ನು ನಿಶ್ಚಯವಾಗಿ ಕೇಳಿದೆನು. ಹೇಗೆಂದರೆ, ‘ನೀನು ನನ್ನನ್ನು ಶಿಕ್ಷಿಸಿದೆ. ಪಳಗದ ಹೋರಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು. ನನ್ನನ್ನು ತಿರುಗಿಸು, ಆಗ ತಿರುಗಿಕೊಳ್ಳುವೆನು. ಯೆಹೋವ ದೇವರೇ, ನೀವೇ ನನ್ನ ದೇವರಾಗಿದ್ದೀರಿ.


ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದು ಏನೆಂದರೆ: “ನಿಶ್ಚಯವಾಗಿ ಈ ದುಷ್ಕೃತ್ಯಗಳನ್ನು ನೀವು ಸಾಯುವ ತನಕ ಮನ್ನಿಸುವುದೇ ಇಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳಿದ್ದಾರೆ.


ಅವಳ ಅಶುದ್ಧವು ಅವಳ ನೆರಿಗೆಗೆ ಅಂಟಿಕೊಂಡಿದೆ. ಅವಳು ತನ್ನ ಭವಿಷ್ಯವನ್ನು ಜ್ಞಾಪಕಮಾಡಿಕೊಳ್ಳುವುದಿಲ್ಲ. ಆದ್ದರಿಂದ ಅವಳು ಭಯಂಕರವಾಗಿ ಇಳಿದು ಬಂದಳು. ಅವಳನ್ನು ಆದರಿಸುವವರು ಯಾರೂ ಇಲ್ಲ. “ಓ ಯೆಹೋವ ದೇವರೇ, ನನ್ನ ಸಂಕಟವನ್ನು ನೋಡಿರಿ, ಶತ್ರುವು ಜಯಿಸಿದ್ದಾನೆ.”


ಆಗ ದೂತನು ನನಗೆ ಕೂಗಿ, “ನೋಡು, ಉತ್ತರ ದೇಶಕ್ಕೆ ಹೊರಟವುಗಳು, ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿ ಪಡಿಸಿವೆ,” ಎಂದನು.


ಅದನ್ನು ತೊಳೆದಾದ ಮೇಲೆ ಯಾಜಕನು ಆ ಬೂಜನ್ನು ಪರೀಕ್ಷಿಸಬೇಕು. ಆ ಬೂಜು ಬಣ್ಣವನ್ನು ಬದಲಾಯಿಸದಿದ್ದರೆ ಮತ್ತು ಹರಡದಿದ್ದರೆ ಅದು ಅಶುದ್ಧವಾಗಿರುವುದು. ಅದನ್ನು ನೀನು ಬೆಂಕಿಯಿಂದ ಸುಡಬೇಕು. ಅದು ಒಳಗಿನಿಂದಾಗಲಿ ಇಲ್ಲವೆ ಹೊರಗಿನಿಂದಾಗಲಿ ವ್ಯಾಪಿಸಿದೆ.


“ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆತ್ತಿ ಗಿಲಾವು ಮಾಡಿಸಿದ ಮೇಲೆ ಆ ಬೂಜು ತಿರುಗಿ ಕಾಣಬಂದರೆ,


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ನಿನ್ನ ಕೀಳಾದ ವೇಶ್ಯತನವನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯ ಕಾರ್ಯಗಳನ್ನು ಕಂಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ಇನ್ನೆಷ್ಟು ಕಾಲ ನೀನು ಅಶುದ್ಧಳಾಗಿರುವೆ?”


ಯೆಹೋವ ದೇವರೇ, ನೀವು ನಮ್ಮ ಮೇಲೆ ಮಿತಿಮೀರಿ ಸಿಟ್ಟುಗೊಂಡಿರುವಿರೋ? ನಮ್ಮನ್ನು ಸಂಪೂರ್ಣವಾಗಿ ಕೈಬಿಟ್ಟಿರುವಿರೋ?


ನಿನ್ನಲ್ಲಿಯ ಮೂರನೆಯ ಒಂದು ಪಾಲು ಜನರು ವ್ಯಾಧಿಗಳಿಂದ ಸಾಯುವರು, ಕ್ಷಾಮದಿಂದ ನಿಮ್ಮಲ್ಲಿ ಅವರು ನಾಶವಾಗುವರು. ಮೂರನೆಯ ಒಂದು ಪಾಲು ನಿಮ್ಮ ಸುತ್ತಲೂ ಖಡ್ಗ ಹಿಡಿದು ಬೀಳುವರು. ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ ಗಾಳಿಗೆ ತೂರಿ ಚದರಿಸಿ, ಅವರ ಮೇಲೆ ಖಡ್ಗವನ್ನು ಬೀಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು