Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:14 - ಕನ್ನಡ ಸಮಕಾಲಿಕ ಅನುವಾದ

14 “ ‘ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ. ನಾನು ಕೆಲಸ ಮಾಡುವ ಸಮಯ ಬಂದಿದೆ. ನಾನು ಅದನ್ನು ಮಾಡದೆ ಬಿಡುವುದಿಲ್ಲ. ಕಟಾಕ್ಷ ತೋರಿಸುವುದಿಲ್ಲ. ಹಿಂದೆಗೆಯೆನು. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯತೀರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, “ಇದು ನಡೆಯುವುದು ನಿಶ್ಚಯ, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ, ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ; ಇದು ನಡೆದೇ ತೀರುವುದು, ನಾನು ನೆರವೇರಿಸುವೆನು; ಹಿಂತೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು; ಇದು ಸರ್ವೇಶ್ವರನಾದ ದೇವರ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ; ಇದು ಸಾಗುವದು, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷವಿುಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವದು; ಇದು ಕರ್ತನಾದ ಯೇಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “‘ನಾನೇ ಯೆಹೋವನು. ನಿನಗೆ ಶಿಕ್ಷೆಯು ಬರುವದು ಎಂದು ನಾನು ಹೇಳಿದರೆ ಅದು ಬರುವಂತೆ ನಾನು ಮಾಡುವೆನು. ನಾನು ದಂಡನೆಯನ್ನು ತಡೆಹಿಡಿಯುವುದಿಲ್ಲ. ನಾನು ನಿನ್ನನ್ನು ಬಿಟ್ಟುಬಿಡುವುದಿಲ್ಲ. ಅದರ ಬಗ್ಗೆ ನನ್ನ ಮನಸ್ಸನ್ನು ನಾನು ಮಾರ್ಪಡಿಸುವುದಿಲ್ಲ. ನಿನ್ನ ಕೆಟ್ಟಕಾರ್ಯಗಳಿಗಾಗಿ ನಾನು ನಿನ್ನನ್ನು ಶಿಕ್ಷಿಸುವೆನು.’ ನನ್ನ ಒಡೆಯನಾದ ಯೆಹೋವನು ಇದನ್ನು ನುಡಿದಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:14
30 ತಿಳಿವುಗಳ ಹೋಲಿಕೆ  

ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.


“ಆದ್ದರಿಂದ ಇಸ್ರಾಯೇಲ್ ಜನರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ಪ್ರತಿಯೊಬ್ಬನಿಗೆ ನ್ಯಾಯತೀರಿಸುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿಮ್ಮ ದುಷ್ಟತನಗಳನ್ನೆಲ್ಲಾ ಬಿಟ್ಟು ತಿರುಗಿಕೊಳ್ಳಿರಿ. ಆಗ ಪಾಪವು ನಿಮ್ಮ ಪತನಕ್ಕೆ ಕಾರಣವಾಗುವುದಿಲ್ಲ.


ಕೆಡುಕರಿಗೆ ಕಷ್ಟ! ಅವರಿಗೆ ಕೇಡೇ ಇರಲಿ. ಏಕೆಂದರೆ ಅವರ ಕೈಗಳ ಪ್ರತಿಫಲವು ಅವರಿಗೆ ಕೊಡಲಾಗುವುದು.


ನಾವಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ. ನಾನು ನಿನ್ನನ್ನು ಬಿಡುವುದೂ ಇಲ್ಲ. ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ. ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು. ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’


ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.


ಆತನು ತನ್ನ ಹೃದಯದ ಆಲೋಚನೆಗಳನ್ನು ನಡೆಸಿ ತೀರಿಸುವವರೆಗೂ ಯೆಹೋವ ದೇವರ ಕೋಪವು ತಿರುಗುವುದಿಲ್ಲ. ಅಂತ್ಯ ದಿವಸಗಳಲ್ಲಿ ನೀವು ಅದನ್ನು ಸಂಪೂರ್ಣವಾಗಿ ಗ್ರಹಿಸುವಿರಿ.


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು ಹಾಗೂ ನಾಶಮಾಡದೆ ಬಿಡೆನು,’ ಇದು ಯೆಹೋವ ದೇವರಾದ ನನ್ನ ನುಡಿ.”


ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.


ಏಕೆಂದರೆ ಅವರು ಹೇಳಿದ ಮಾತ್ರಕ್ಕೆ ಸಮಸ್ತವೂ ಸೃಷ್ಟಿಯಾಯಿತು; ಅವರು ಆಜ್ಞಾಪಿಸಲು ಭೂಲೋಕವು ಸ್ಥಿರವಾಯಿತು.


ಇಸ್ರಾಯೇಲಿನ ಪ್ರತಾಪರು ಸುಳ್ಳು ಹೇಳುವವರಲ್ಲ, ಮಾತನ್ನು ಹಿಂತೆಗೆದುಕೊಳ್ಳುವವರಲ್ಲ. ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದನು.


ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?


ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.


ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶಗಳಲ್ಲಿ ಚದರಿಹೋದರು. ಅವರ ದುರ್ಮಾರ್ಗ ದುರಾಚಾರಗಳಿಗೆ ಅನುಸಾರವಾಗಿ ಅವರನ್ನು ನ್ಯಾಯತೀರಿಸಿದೆನು.


ಅವರು ನಿನ್ನ ವಿಷಯದಲ್ಲಿ ಹಗೆತೀರಿಸಿಕೊಳ್ಳುವರು. ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವುದು.


ಅವರು ರಥಗಳ ಸಂಗಡವಾಗಿಯೂ ಬಂಡಿಗಳ ಸಂಗಡವಾಗಿಯೂ ಜನಗಳ ಸಮೂಹದ ಸಂಗಡವಾಗಿಯೂ ಬಲವುಳ್ಳವರಾಗಿ ತಮ್ಮ ಆಯುಧಗಳೊಂದಿಗೆ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣವನ್ನೂ ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯತೀರ್ಪಿನ ಅಧಿಕಾರ ಕೊಡುವೆನು. ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು.


ಆದ್ದರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ. ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ. ಅವರ ದುರ್ನಡತೆಯ ಹೊಣೆಯನ್ನು ಅವರ ತಲೆಗಳ ಮೇಲೆ ಹೊರಿಸಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


“ ‘ನೀನು ನಿನ್ನ ಯೌವನದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ, ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿನ್ನ ಇತರ ಎಲ್ಲಾ ಅಸಹ್ಯವಾದವುಗಳ ಜೊತೆಗೆ, ಈ ಅಪವಿತ್ರತೆಯನ್ನು ನೀನು ಮಾಡಲಿಲ್ಲವೇ?


ಆದ್ದರಿಂದ ನಾನು ಸಹ ರೋಷದಿಂದಲೇ ಇರುವೆನು. ನಾನು ಅವರನ್ನು ಕನಿಕರಿಸುವುದೂ ಇಲ್ಲ, ನಾನು ಅವರನ್ನು ಉಳಿಸುವುದೂ ಇಲ್ಲ. ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರುಚಿದರೂ, ನಾನು ಅವರನ್ನು ಕೇಳಿಸಿಕೊಳ್ಳುವುದೂ ಇಲ್ಲ,” ಎಂದನು.


ನಾನು ಕಟಾಕ್ಷಿಸುವುದೂ ಇಲ್ಲ, ನಿನ್ನನ್ನು ಕನಿಕರಿಸುವುದೂ ಇಲ್ಲ. ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು.


“ನಿನ್ನ ಮಾರ್ಗವೂ, ನಿನ್ನ ಕ್ರಿಯೆಗಳೂ, ಇವುಗಳನ್ನು ನಿನಗೆ ಉಂಟುಮಾಡಿದವು, ಇದೇ ನಿನ್ನ ಶಿಕ್ಷೆ. ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ನಾಟುವುದಿಲ್ಲವೋ?”


ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಎಂದು ನೀನು ನೋಡುವೆ,” ಎಂದರು.


ಆ ಗಾಳಿಯು ಕರುಣೆ ಇಲ್ಲದೆ ದುಷ್ಟರ ಮೇಲೆ ಬೀಸಲು, ಅವರು ಅದರ ಶಕ್ತಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುವರು.


ಯೆಹೋವ ದೇವರ ವಾಕ್ಯವು ನನಗೆ ಬಂದಿತು:


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಕರುಣಿಸದೆ, ವಿನಾಶವನ್ನು ಬರಮಾಡಲು ಯೋಚಿಸಿದೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಈಗಲೇ ನಿನಗೆ ಅಂತ್ಯವು ಬಂದಿದೆ. ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡುತ್ತೇನೆ. ನಿನ್ನ ನಡತೆಯ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯ ಕಾರ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿತೀರಿಸುವೆನು.


ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು. ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು. ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು.


ಯೆಹೋವ ದೇವರಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರ ಪಡಿಸಿ, ಹಸುರಾಗಿರುವುದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ, ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವುದು. “ ‘ಯೆಹೋವ ದೇವರಾದ ನಾನೇ ಮಾತನಾಡಿ, ಅದನ್ನು ನಡೆಸಿದ್ದೇನೆ.’ ”


“ ‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು. ಈಜಿಪ್ಟಿನ ದಿನದಲ್ಲಿ ಆದ ಹಾಗೆ ಅವರ ಮೇಲೆ ದೊಡ್ಡ ದುಃಖ ಉಂಟಾಗುವುದು, ಏಕೆಂದರೆ ಇಗೋ, ಆ ದಿನ ಬರುವುದು ನಿಶ್ಚಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು