Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:16 - ಕನ್ನಡ ಸಮಕಾಲಿಕ ಅನುವಾದ

16 “ಮನುಷ್ಯಪುತ್ರನೇ, ಒಂದೇ ಏಟಿನಿಂದ ನೇತ್ರಾನಂದವಾಗಿರುವುದನ್ನು ನಿನ್ನಿಂದ ತೆಗೆಯುತ್ತೇನೆ. ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು. ಆದರೂ ನೀನು ಗೋಳಾಡಬೇಡ, ಅಳಬೇಡ, ಕಣ್ಣೀರು ಸುರಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ, ಸದ್ದಿಲ್ಲದೆ ಮೊರೆಯಿಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನರಪುತ್ರನೇ, ನೀನು ನಿನ್ನ ಹೆಂಡತಿಯನ್ನು ಬಹಳವಾಗಿ ಪ್ರೀತಿಸುತ್ತಿ. ಆದರೆ ನಾನು ಆಕೆಯನ್ನು ನಿನ್ನಿಂದ ತೆಗೆದು ಬಿಡುವೆನು. ನಿನ್ನ ಹೆಂಡತಿಯು ಫಕ್ಕನೆ ತೀರಿಹೋಗುವಳು. ಆದರೆ ನೀನು ನಿನ್ನ ದುಃಖವನ್ನು ಪ್ರದರ್ಶಿಸಬಾರದು. ನೀನು ಗಟ್ಟಿಯಾಗಿ ರೋಧಿಸಬಾರದು. ಅಳಬೇಡ ಅಥವಾ ಕಣ್ಣೀರು ಸುರಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:16
17 ತಿಳಿವುಗಳ ಹೋಲಿಕೆ  

ಮರಣ ಹೊಂದಿದ ಅರಸನಿಗಾಗಿ ಅಳಬೇಡಿರಿ. ಅವನಿಗಾಗಿ ಗೋಳಾಡಬೇಡಿರಿ. ಹೊರಟು ಹೋದವನಿಗಾಗಿ ಬಹಳವಾಗಿ ಅಳಿರಿ. ಏಕೆಂದರೆ ಅವನು ತಿರುಗಿ ಬರುವುದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವುದೇ ಇಲ್ಲ.


ನೀವು ಕೇಳದಿದ್ದರೆ, ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು, ಯೆಹೋವ ದೇವರ ಮಂದೆಯು ಸೆರೆಯಾಗಿ ಹೋದದ್ದರಿಂದ ಬಹಳವಾಗಿ ಅಳುವೆನು. ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ಪ್ರಿಯರೇ, ನೀವು ನಿರೀಕ್ಷೆಯಿಲ್ಲದೆ ಗೋಳಾಡುವವರಂತೆ ಮರಣ ಹೊಂದಿದ ವಿಶ್ವಾಸಿಗಳ ಬಗ್ಗೆ ಅಜ್ಞಾನಿಗಳಾಗಿರಬಾರದೆಂದು ನಾವು ಅಪೇಕ್ಷಿಸುತ್ತೇವೆ.


ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನರೊಂದಿಗೆ ಮಾತನಾಡಿದೆನು. ಸಂಜೆ ನನ್ನ ಹೆಂಡತಿ ಸತ್ತಳು. ಮರುದಿನ ಬೆಳಿಗ್ಗೆ ನಾನು ಆಜ್ಞಾಪಿಸಿದಂತೆ ಮಾಡಿದೆನು.


ನಾನು ನನ್ನ ಪ್ರಿಯನವಳು. ಅವನ ಆಸೆಯು ನನ್ನ ಕಡೆಗಿರುವುದು.


ಅವರ ಹೃದಯವು ಕರ್ತದೇವರ ಕಡೆಗೆ ಕೂಗಿ, ಚೀಯೋನಿನ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನಿನಗೆ ವಿಶ್ರಾಂತಿ ಬೇಡ, ನಿನ್ನ ಕಣ್ಣ ರೆಪ್ಪೆಯನ್ನು ಮುಚ್ಚಬೇಡ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ದುಃಖದ ಮನೆಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡುವುದಕ್ಕೂ, ದುಃಖ ಪಡುವುದಕ್ಕೂ ಹೋಗಬೇಡ. ಏಕೆಂದರೆ ನಾನು ನನ್ನ ಸಮಾಧಾನವನ್ನೂ, ಪ್ರೀತಿಯನ್ನೂ, ಕನಿಕರವನ್ನೂ ಈ ಜನರಿಂದ ತೆಗೆದುಹಾಕಿದ್ದೇನೆ.


ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣುಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.


ಓ, ನನ್ನ ತಲೆ ಚಿಲುಮೆಯೂ, ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೆಯದು, ಆಗ ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲುರಾತ್ರಿ ಅಳುವೆನು.


ಆಕೆಯು ಮನೋಹರವಾದ ಹರಿಣಿ, ಅಂದವಾದ ಜಿಂಕೆಯ ಹಾಗೆಯೂ; ಆಕೆಯ ಎದೆಯು ನಿನ್ನನ್ನು ಸದಾ ತೃಪ್ತಿಪಡಿಸಲಿ; ಆಕೆಯ ಪ್ರೀತಿಯಿಂದ ನೀನು ಸದಾ ಪರವಶನಾಗಿರು.


ಯಾರೂ ನಿನ್ನನ್ನು ಸಂಪತ್ತಿನಿಂದ ಆಕರ್ಷಿಸದಂತೆ ಜಾಗರೂಕನಾಗಿರು; ದೊಡ್ಡ ಲಂಚತನವು ನಿನ್ನನ್ನು ವಂಚಿಸಬಾರದು.


ಆದ್ದರಿಂದ ಯೋಷೀಯನ ಮಗ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅವರು ಅವನನ್ನು ಕುರಿತು ಗೋಳಾಡಿ, ‘ಅಯ್ಯೋ, ನನ್ನ ಸಹೋದರನೇ, ಅಯ್ಯೋ, ನನ್ನ ಸಹೋದರಿಯೇ,’ ಎಂದು ಅನ್ನುವುದಿಲ್ಲ. ‘ಅಯ್ಯೋ, ದೊರೆಯೇ, ಅಯ್ಯೋ, ಅವನ ವೈಭವವೇ,’ ಎಂದು ಅವನನ್ನು ಕುರಿತು ಗೋಳಾಡುವುದಿಲ್ಲ.


“ಇಂದಿಗೂ ನನ್ನ ದೂರು ಕಹಿಯಾಗಿದೆ; ನಾನು ನಿಟ್ಟುಸಿರಿಟ್ಟರೂ ದೇವರ ಹಸ್ತವು ಭಾರವಾಗಿದೆ.


ಯೆಹೋವ ದೇವರ ವಾಕ್ಯವು ನನಗೆ ಬಂದಿತು:


ಅವನು ತನ್ನ ಜನರೊಳಗೆ ಮುಖ್ಯಸ್ಥನಾಗಿರುವುದರಿಂದ ತನ್ನನ್ನು ತಾನು ಅಪವಿತ್ರವಾಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು