Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:17 - ಕನ್ನಡ ಸಮಕಾಲಿಕ ಅನುವಾದ

17 ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖ ತೋರಿಸಬೇಡ. ಮುಂಡಾಸವನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ನಿನ್ನ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳಬೇಡ, ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನಬೇಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸದ್ದಿಲ್ಲದೆ ಮೊರೆಯಿಡು, ವಿಯೋಗದುಃಖ ತೋರಿಸಬೇಡ. ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ವಿಯೋಗದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಮೌನವಾಗಿ ನರಳಾಡು. ನಿನ್ನ ಸತ್ತ ಹೆಂಡತಿಗಾಗಿ ಗಟ್ಟಿಯಾಗಿ ರೋಧಿಸಬೇಡ. ನೀನು ಯಾವಾಗಲೂ ತೊಡುವ ಬಟ್ಟೆಯನ್ನು ತೊಟ್ಟುಕೋ. ಮುಂಡಾಸವನ್ನು ಕಟ್ಟಿಕೋ. ಕಾಲಿಗೆ ಕೆರವನ್ನು ಮೆಟ್ಟಿಕೋ, ನಿನ್ನ ದುಃಖವನ್ನು ತೋರಿಸಲು ಮೀಸೆಯನ್ನು ಮುಚ್ಚಿಕೊಳ್ಳಬೇಡ. ಮರಣದ ಊಟವನ್ನು ಮಾಡದಿರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:17
18 ತಿಳಿವುಗಳ ಹೋಲಿಕೆ  

ಅವರು ದ್ರಾಕ್ಷಾರಸವನ್ನು ಕಾಣಿಕೆಯಾಗಿ ಯೆಹೋವ ದೇವರಿಗೆ ಅರ್ಪಿಸುವುದಿಲ್ಲ. ಅವರ ಬಲಿಗಳು ಆತನಿಗೆ ಮೆಚ್ಚಿಗೆಯಾಗಿರುವುದಿಲ್ಲ. ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿರುವುವು. ಅದನ್ನು ತಿನ್ನುವವರೆಲ್ಲರೂ ಅಪವಿತ್ರರಾಗುವರು. ಏಕೆಂದರೆ ಅದು ಅವರ ಹೊಟ್ಟೆ ತುಂಬುವುದಕ್ಕೆ ಮಾತ್ರ ಸರಿಯೇ ಹೊರತು, ಯೆಹೋವ ದೇವರ ಆಲಯಕ್ಕೆ ಸಲ್ಲುವುದಿಲ್ಲ.


ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿಕೊಂಡು, ಬರಿಗಾಲಿನಿಂದ ಎಣ್ಣೆಮರಗಳ ಗುಡ್ಡವನ್ನು ಏರಿದನು. ಅವನ ಸಂಗಡ ಇರುವ ಸಮಸ್ತ ಜನರೂ, ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆ ಏರಿದರು.


“ ‘ತನ್ನ ಸಹೋದರರೊಳಗೆ ಮಹಾಯಾಜಕನಾಗಿದ್ದು, ಯಾವನು ತೈಲಾಭಿಷೇಕ ಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ, ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು, ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು.


ಆಗ ಮೋಶೆಯು ಆರೋನನಿಗೂ ಅವನ ಪುತ್ರರಾದ ಎಲಿಯಾಜರನಿಗೂ ಈತಾಮಾರನಿಗೂ, “ನೀವು ಮರಣ ಹೊಂದದಂತೆಯೂ ಕೋಪವು ಜನರೆಲ್ಲರ ಮೇಲೆ ಬಾರದಂತೆಯೂ ನೀವು ನಿಮ್ಮ ಮುಚ್ಚಿದ ತಲೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಆದರೆ ನಿಮ್ಮ ಸಹೋದರರಾಗಿರುವ ಇಸ್ರಾಯೇಲಿನ ಮನೆತನದವರೆಲ್ಲರು ಯೆಹೋವ ದೇವರು ಉರಿಸಿದ ಬೆಂಕಿಯ ನಾಶದ ನಿಮಿತ್ತ ಗೋಳಾಡಲಿ.


ಆದರೆ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ. ಅವರ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.


ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ಅವಮಾನಗೊಳ್ಳುವರು. ದೇವರಿಂದ ಉತ್ತರವಿಲ್ಲದ ಕಾರಣ, ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿಕೊಳ್ಳುವರು.”


“ಆ ದಿನದಲ್ಲಿ ದೇವಾಲಯದ ಹಾಡುಗಳು ವಿಲಾಪವಾಗುವುವು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. “ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವುವು. ಮೌನವಾಗಿರಿ!”


“ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ಉನ್ನತನಾಗಿರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ಮೌನವಾದೆನು, ಬಾಯಿ ತೆರೆಯಲಿಲ್ಲ; ಇದನ್ನು ಮಾಡಿದವರು ನೀವೇ.


ಯೆಹೋವ ದೇವರ ಮುಂದೆ ಶಾಂತನಾಗಿರು; ಮೌನವಾಗಿದ್ದು ಅವರಿಗಾಗಿ ಎದುರು ನೋಡು; ತಮ್ಮ ಮಾರ್ಗದಲ್ಲಿ ಸಫಲವಾಗುವವರನ್ನು ಕಂಡು ಸಿಡುಕಬೇಡ. ಕುಯುಕ್ತಿಗಳನ್ನು ನಡೆಸುವ ಮನುಷ್ಯರನ್ನು ಕಂಡು ಕೋಪ ಮಾಡಿಕೊಳ್ಳಬೇಡ.


“ಚರ್ಮರೋಗ ಇರುವ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡವನಾಗಿ, ತಲೆಗೂದಲನ್ನು ಕೆದರಿಕೊಂಡು, ಮುಖದ ಕೆಳಭಾಗವನ್ನು ಮುಚ್ಚಿಕೊಂಡು, ‘ನಾನು ಅಶುದ್ಧನು, ಅಶುದ್ಧನು,’ ಎಂದು ಕೂಗಬೇಕು.


ತರುವಾಯ ಯೇಸು ಆ ಅಧಿಕಾರಿಯ ಮನೆಯೊಳಗೆ ಬಂದು ಕೊಳಲೂದುವವರನ್ನೂ ಜನರ ಗೊಂದಲವನ್ನೂ ಕಂಡು,


ಅದೇ ಸಮಯದಲ್ಲಿ ಯೆಹೋವ ದೇವರು ಆಮೋಚನ ಮಗ ಯೆಶಾಯನಿಗೆ, “ನಿನ್ನ ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಕೆರಗಳನ್ನು ತೆಗೆದಿಡು,” ಎಂದು ಹೇಳಿದರು. ಅವನು ಹಾಗೆ ಮಾಡಿ, ಬೆತ್ತಲೆಯಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು.


ರಾಜನಿಗೂ ರಾಜಮಾತೆಗೂ ಹೀಗೆ ಹೇಳಿರಿ, “ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ.”


ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನರೊಂದಿಗೆ ಮಾತನಾಡಿದೆನು. ಸಂಜೆ ನನ್ನ ಹೆಂಡತಿ ಸತ್ತಳು. ಮರುದಿನ ಬೆಳಿಗ್ಗೆ ನಾನು ಆಜ್ಞಾಪಿಸಿದಂತೆ ಮಾಡಿದೆನು.


ಅವರ ತಲೆಗಳ ಮೇಲೆ ನಾರಿನ ಮುಂಡಾಸಗಳೂ, ಅವರ ಸೊಂಟಗಳ ಮೇಲೆ ನಾರಿನ ಒಳಉಡುಪುಗಳೂ ಇರಬೇಕು. ಅವರು ಬೆವರು ಬರುವಂಥವುಗಳನ್ನು ಕಟ್ಟಿಕೊಳ್ಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು