Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:18 - ಕನ್ನಡ ಸಮಕಾಲಿಕ ಅನುವಾದ

18 ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನರೊಂದಿಗೆ ಮಾತನಾಡಿದೆನು. ಸಂಜೆ ನನ್ನ ಹೆಂಡತಿ ಸತ್ತಳು. ಮರುದಿನ ಬೆಳಿಗ್ಗೆ ನಾನು ಆಜ್ಞಾಪಿಸಿದಂತೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೀಗೆ ಆಜ್ಞೆಯಾಗಲು ನಾನು ಪ್ರಾತಃಕಾಲದಲ್ಲಿ ಜನರೊಂದಿಗೆ ಮಾತನಾಡಿದನು, ಸಾಯಂಕಾಲಕ್ಕೆ ನನ್ನ ಪತ್ನಿಯು ತೀರಿಹೋದಳು; ಮಾರನೆಯ ಬೆಳಿಗ್ಗೆ ನನಗೆ ಅಪ್ಪಣೆಯಾದಂತೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಹೀಗೆ ಆಜ್ಞೆಯಾಗಲು, ನಾನು ಪ್ರಾತಃಕಾಲದಲ್ಲಿ ಜನರಿಗೆ ಪ್ರವಾದಿಸಿದೆನು; ಸಾಯಂಕಾಲಕ್ಕೆ ನನ್ನ ಪತ್ನಿ ತೀರಿಹೋದಳು; ಮಾರನೆಯ ಬೆಳಿಗ್ಗೆ ನನಗೆ ಅಪ್ಪಣೆಯಾದಂತೆ ನಡೆದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೀಗೆ ಆಜ್ಞೆಯಾಗಲು ನಾನು ಪ್ರಾತಃಕಾಲದಲ್ಲಿ ಜನರಿಗೆ ಪ್ರವಾದಿಸಿದೆನು; ಸಾಯಂಕಾಲಕ್ಕೆ ನನ್ನ ಪತ್ನಿಯು ತೀರಿಹೋದಳು; ಮಾರಣೆ ಬೆಳಿಗ್ಗೆ ನನಗೆ ಅಪ್ಪಣೆಯಾದಂತೆ ನಡೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರು ಹೇಳಿದ್ದನ್ನು ನಾನು ಮರುದಿವಸ ಮುಂಜಾನೆ ತಿಳಿಸಿದೆ. ಆ ಸಾಯಂಕಾಲ ನನ್ನ ಪತ್ನಿಯು ಸತ್ತುಹೋದಳು. ಮರುದಿವಸ ಬೆಳಿಗ್ಗೆ ದೇವರು ಆಜ್ಞಾಪಿಸಿದ್ದನ್ನೆಲ್ಲ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:18
5 ತಿಳಿವುಗಳ ಹೋಲಿಕೆ  

ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು. ನನ್ನ ಸರಕುಗಳನ್ನು ಹಗಲಿನಲ್ಲಿಯೇ ಹೊರಗೆ ತಂದೆನು. ಸಂಜೆಯಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು. ಅದನ್ನು ನಾನು ಮುಸ್ಸಂಜೆಯಲ್ಲಿ ಹೊರಗೆ ತಂದು, ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.


“ಮನುಷ್ಯಪುತ್ರನೇ, ಒಂದೇ ಏಟಿನಿಂದ ನೇತ್ರಾನಂದವಾಗಿರುವುದನ್ನು ನಿನ್ನಿಂದ ತೆಗೆಯುತ್ತೇನೆ. ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.


ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖ ತೋರಿಸಬೇಡ. ಮುಂಡಾಸವನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ನಿನ್ನ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳಬೇಡ, ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನಬೇಡಿರಿ.”


ಆಗ ಜನರು, “ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇನೆಂದು ತಿಳಿಸುವುದಿಲ್ಲವೇ? ಯಾಕೆ ಹೀಗೆ ವರ್ತಿಸುತ್ತಿದ್ದೀಯಾ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು