ಯೆಹೆಜ್ಕೇಲನು 24:21 - ಕನ್ನಡ ಸಮಕಾಲಿಕ ಅನುವಾದ21 ಇಸ್ರಾಯೇಲರ ಮನೆತನದವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ ಎಂದು ಹೇಳು: ಇಗೋ, ನಾನು ನನ್ನ ಪವಿತ್ರಾಲಯವನ್ನೂ, ನಿಮ್ಮ ಮುಖ್ಯಬಲವನ್ನೂ, ನಿಮ್ಮ ನೇತ್ರಾನಂದಕರವಾದದ್ದನ್ನೂ, ನಿಮ್ಮ ಮನಸ್ಸು ಅಭಿಲಾಷಿಸುವುದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳು ಖಡ್ಗದಿಂದ ಬೀಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಹೊಲೆಮಾಡಿಸುವೆನು. ನೀವು ಬಿಟ್ಟುಬಂದಿರುವ ನಿಮ್ಮ ಗಂಡುಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು ಎಂಬದಾಗಿ ಕರ್ತನಾದ ಯೆಹೋವನು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು. ಅಧ್ಯಾಯವನ್ನು ನೋಡಿ |