ಯೆಹೆಜ್ಕೇಲನು 25:17 - ಕನ್ನಡ ಸಮಕಾಲಿಕ ಅನುವಾದ17 ನಾನು ದೊಡ್ಡ ಪ್ರತಿದಂಡನೆಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ಮುಯ್ಯಿತೀರಿಸುವೆನು. ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರೆಲ್ಲರನ್ನು ಬಲವಾಗಿ ಖಂಡಿಸಿ ಮುಯ್ಯಿಗೆಮುಯ್ಯಿ ತೀರಿಸುವೆನು; ಹೀಗೆ ಪ್ರತಿಕಾರಮಾಡುವುದರಿಂದ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವರೆಲ್ಲರನ್ನು ಬಹಳವಾಗಿ ಖಂಡಿಸಿ ಮುಯ್ಯಿಗೆ ಮುಯ್ಯಿ ತೀರಿಸುವೆನು; ಹೀಗೆ ಪ್ರತೀಕಾರಮಾಡುವೆನು, ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರೆಲ್ಲರನ್ನು ಬಲವಾಗಿ ಖಂಡಿಸಿ ಮುಯ್ಯಿಗೆ ಮುಯ್ಯಿತೀರಿಸುವೆನು; ಹೀಗೆ ಪ್ರತೀಕಾರಮಾಡಲು ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಾನು ಅವರೊಂದಿಗೆ ಮುಯ್ಯಿತೀರಿಸಿಕೊಳ್ಳುವೆನು. ನನ್ನ ಕೋಪವು ಅವರಿಗೆ ಪಾಠ ಕಲಿಸುವದು. ನಾನು ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.” ಅಧ್ಯಾಯವನ್ನು ನೋಡಿ |